ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಂದ ವಿವಾಹಿತ; ಗೋಲ್‌ಗೊಪ್ಪ ಕೊಡಿಸುವುದಾಗಿ ಕರೆದೊಯ್ದು ಹೀನ ಕೃತ್ಯ

Bulandshahr Horror: 8 ವರ್ಷದ ಬಾಲಕಿಯ ಮೇಲೆ ಪಾಪಿಯೊಬ್ಬ ಅತ್ಯಾಚಾರ ಎಸಗಿ ಹತ್ಯೆಗೈದಿರುವ ಘೋರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಗೋಲ್‌ಗೊಪ್ಪ ಕೊಡಿಸುವುದಾಗಿ ಬಾಲಕಿಯನ್ನು ಕರೆದೊಯ್ದು ಆಕೆಯ ಮೇಲರಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪರಾರಿಯಾಗಿರುವ ಅತನ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.

ಸಾಂದರ್ಭಿಕ ಚಿತ್ರ

ಲಖನೌ, ನ. 7: ಉತ್ತರ ಪ್ರದೇಶದಲ್ಲಿ ಅತೀ ನೀಚ ಕೃತ್ಯವೊಂದು ನಡೆದಿದ್ದು, 8 ವರ್ಷದ ಬಾಲಕಿಯ ಮೇಲೆ ಪಾಪಿಯೊಬ್ಬ ಅತ್ಯಾಚಾರ ಎಸಗಿ ಹತ್ಯೆಗೈದಿದ್ದಾನೆ. ಗೋಲ್‌ಗೊಪ್ಪ ಕೊಡಿಸುವುದಾಗಿ ಬಾಲಕಿಯನ್ನು ಕರೆದೊಯ್ದು ಆಕೆಯ ಮೇಲರಗಿದ್ದಾನೆ. ಬಳಿಕ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಸದ್ಯ ಈ ಪ್ರಕರಣ ಬೆಳಕಿಗೆ ಬಂದು ದೇಶವೇ ನಾಚಿಕೆಯಿಂದ ತಲೆತಗ್ಗಿಸಿದೆ (Bulandshahr Horror). ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಶುಕ್ರವಾರ (ನವೆಂಬರ್‌ 6) ಈ ಘೋರ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಬಾಲೆಯ ಮೇಲೆ ಅತ್ಯಾಚಾರ ಎಸಗಿದ ಪಾಪಿಯನ್ನು ರವಿ ಕಶ್ಯಪ್‌ ಎಂದು ಗುರುತಿಸಲಾಗಿದೆ. ಬಾಲಕಿಯನ್ನು ಮನೆಯಿಂದ 500 ಮೀಟರ್‌ ದೂರದಲ್ಲಿರುವ ನಿರ್ಜನ ಪ್ರದೇಶಕ್ಕೆ ಕರೆದೊಯ್ದ ರವಿ ಕಶ್ಯಪ್‌ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೆ, ಕಬ್ಬಿಣದ ಸರಳಿನಿಂದ ತಲೆಗೆ ಹೊಡೆದು ಹತೈಗೈದು ಪರಾರಿಯಾಗಿದ್ದಾನೆ.

ಎಸಿಪಿ ಅಭಿಷೇಕ್‌ ಪ್ರತಾಪ್‌ ಅಜಯ್‌ ಈ ಬಗ್ಗೆ ಮಾಹಿತಿ ನೀಡಿ, ಬಾಲಕಿ ನಾಪತ್ತೆಯಾದ ಮಾಹಿತಿ ದೊರೆತ ಕೂಡಲೇ ಪೊಲೀಸರು ಕಾರ್ಯಾಚರಣೆ ನಡೆಸಿದರು ಎಂದು ತಿಳಿಸಿದ್ದಾರೆ. ಈ ಶೋಧ ಕಾರ್ಯಾಚರಣೆ ವೇಳೆ ಬಾಲಕಿ ಮೃತದೇಹ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದ್ದು, ಆಕೆಯ ತಲೆಯ ಮೇಲೆ ಆಳವಾದ ಗಾಯ ಕಂಡು ಬಂದಿದೆ ಎಂದು ಹೇಳಿದ್ದಾರೆ. ಸಿಕಂದರಬಾದ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಕೋಲೆಟ್ ಆಮಿಷವೊಡ್ಡಿ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಕೇಸ್‌ ದಾಖಲು

ಘಟನೆ ವಿವರ

ಜಿಲ್ಲಾ ಕೇಂದ್ರದಿಂದ ಸುಮಾರು 30 ಕಿಲೋ ಮೀಟರ್‌ ದೂರದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಬಾಲಕಿಯ ತಂದೆ ಮತ್ತು ರವಿ ಕಶ್ಯಪ್‌ ಒಂದೇ ಕಾರ್ಖಾನೆಯ ಉದ್ಯೋಗಿಗಳು. ಅಲ್ಲದೆ ಒಂದೇ ಕಟ್ಟದಲ್ಲಿರುವ ಅಕ್ಕ ಪಕ್ಕದ ಬಾಡಿಗೆ ಮನೆಯಲ್ಲಿ ಅವರು ವಾಸಿಸುತ್ತಿದ್ದರು. ಹೀಗಾಗಿ ಬಾಲಕಿಗೆ ರವಿ ಕಶ್ಯಪ್‌ ಪರಿಚಯವಿತ್ತು. ಅದನ್ನೇ ಆತ ದುರುಪಯೋಗಪಡಿಸಿಕೊಂಡಿದ್ದಾನೆ.

ಶುಕ್ರವಾರ ಅಪರಾಹ್ನ ಬಾಲಕಿ ನಾಪತ್ತೆಯಾಗಿದ್ದಳು. ತುಂಬ ಹೊತ್ತಾದರೂ ಮನೆಗೆ ಹಿಂದಿರುಗದ ಹಿನ್ನೆಲೆಯಲ್ಲಿ ಆತಂಕಗೊಂಡ ಕುಟುಂಬಸ್ಥರು ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದರು. ಕೂಡಲೇ ಪೊಲೀಸರು ಕಾರ್ಯಪ್ರವೃತ್ತರಾಗಿ ಅನುಮಾನ ಬಂದ ಕಡೆಗಳಲ್ಲಿ ಹುಡುಕಾಟ ನಡೆಸಿದರು. ಕೊನೆಗೆ ಶನಿವಾರ ಮುಂಜಾನೆ 2 ಗಂಟೆ ವೇಳೆ ಮೃತದೇಹ ಪತ್ತೆಯಾಯಿತು. ಬದೌನ್‌ ಜಿಲ್ಲೆಯ ಸಂತ್ರಸ್ತೆಯ ಕುಟುಂಬ ಕೆಲಸಕ್ಕಾಗಿ ಇಲ್ಲಿಗೆ ಆಗಮಿಸಿತ್ತು.

ಇನ್ನು ಆರೋಪಿ ರವಿ ಕಶ್ಯಪ್‌ ಕನೌಜ್‌ ಜಿಲ್ಲೆಯ ತರಿಯಾನ್‌ ಮೂಲದವನು. ಇದೀಗ ಆತನ ಪತ್ನಿಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ಪತ್ತೆಗೆ ವಿವಿಧ ಕಡೆಗಳಲ್ಲಿ ದಾಳಿ ನಡೆಸಲಾಗುತ್ತಿದೆ. ಈ ಬಗ್ಗೆ ತನಿಖೆ ಕೈಗೆತ್ತಿಕೊಳ್ಳಲಾಗಿದೆ. ಆತನನ್ನು ಆದಷ್ಟು ಶೀಘ್ರದಲ್ಲೇ ಬಂಧಿಸುವುದಾಗಿ ಅಭಿಷೇಕ್‌ ಪ್ರತಾಪ್‌ ಅಜಯ್‌ ತಿಳಿಸಿದ್ದಾರೆ.

ಪೊಲೀಸ್‌ ಠಾಣೆ ಒಳಗೇ ಮಹಿಳೆ ಮೇಲೆ ಅತ್ಯಾಚಾರ! ಕಾನ್ಸ್‌ಟೇಬಲ್‌ನಿಂದಲೇ ಅಮಾನುಷ ಕೃತ್ಯ

ನೆಟ್ಟಿಗರಿಂದ ಆಕ್ರೋಶ

ಸದ್ಯ ಈ ಘಟನೆ ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಬಾಲಕಿ ಎನ್ನುವುದನ್ನೂ ನೋಡದೆ ಆಕೆಯ ಮೇಲೆರಗಿ ಕೊಲೆಗೈದ ಪಾಪಿಯನ್ನು ಕೂಡಲೇ ಎನ್‌ಕೌಂಟರ್‌ ಮಾಡಬೇಕು. ಮುಂದೆ ಎಲ್ಲೂ ಇಂತಹ ಕೃತ್ಯ ಮರುಕಳಿಸಬಾರದು ಎಂದು ನೆಟ್ಟಿಗರು ಆಗ್ರಹಿಸಿದ್ದಾರೆ.

ಇನ್ನಷ್ಟು ಕ್ರೈಂ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author