90 ವರ್ಷದ ವೃದ್ಧೆಯ ಮೇಲೆ ನಾಲ್ಕು ಮುಸುಕುಧಾರಿಗಳಿಂದ ಸಾಮೂಹಿಕ ಅತ್ಯಾಚಾರ
Crime News: 90 ವರ್ಷ ವಯಸ್ಸಿನ ವೃದ್ಧ ಮಹಿಳೆಯ ಮೇಲೆ ನಾಲ್ವರು ಮುಸುಕುಧಾರಿ ದುಷ್ಕರ್ಮಿಗಳು ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಲೈಂಗಿಕ ದೌರ್ಜನ್ಯದ ಸಮಯದಲ್ಲಿ ಗಾಯಗೊಂಡಿರುವ ಮಹಿಳೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ -
ಇಂದೋರ್, ಮಾ.8: ಸುಮಾರು 90 ವರ್ಷ ವಯಸ್ಸಿನ ವೃದ್ಧ ಮಹಿಳೆಯ ಮೇಲೆ ನಾಲ್ವರು ಮುಸುಕುಧಾರಿ ದುಷ್ಕರ್ಮಿಗಳು ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ (Madhya Pradesh) ಖಾಂಡ್ವಾ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ವಿಶೇಷ ತನಿಖಾ ತಂಡ (SIT) ತನಿಖೆ ಆರಂಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ (Crime News).
ಲೈಂಗಿಕ ದೌರ್ಜನ್ಯದ ಸಮಯದಲ್ಲಿ ಗಾಯಗೊಂಡಿರುವ ವೃದ್ಧೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಆಕೆ ಪ್ರಾಣಾಪಾಯದಿಂದ ಪಾರಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 55 ಕಿ.ಮೀ ದೂರದಲ್ಲಿರುವ ತನ್ನ ಹಳ್ಳಿಯ ಕೃಷಿ ಹೊಲದಲ್ಲಿ ಗುರುವಾರ ರಾತ್ರಿ ಮಹಿಳೆ ಒಬ್ಬಂಟಿಯಾಗಿದ್ದಾಗ, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ.
ಸಂತ್ರಸ್ತೆ ಮರುದಿನ ಬೆಳಗ್ಗೆ ಬೇರೆ ಹಳ್ಳಿಯಲ್ಲಿ ವಾಸಿಸುವ ತನ್ನ ಮಗಳಿಗೆ ಘಟನೆಯ ಬಗ್ಗೆ ತಿಳಿಸಿದಳು. ನಂತರ ಮಗಳು ತನ್ನ ತಾಯಿಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದರು.
ಭೀಕರ ರಸ್ತೆ ಅಪಘಾತ; ಲಾರಿಗೆ ಕಾರು ಡಿಕ್ಕಿ, ಸ್ಥಳದಲ್ಲೇ ಮೂವರು ಸಾವು
ಆಸ್ಪತ್ರೆ ಸಿಬ್ಬಂದಿ ಮಹಿಳೆ ಮತ್ತು ಅವರ ಮಗಳಿಗೆ ಪೊಲೀಸರಿಗೆ ದೂರು ನೀಡುವಂತೆ ಸಲಹೆ ನೀಡಿದರು ಎಂದು ಖಾಂಡ್ವಾ ಪೊಲೀಸ್ ವರಿಷ್ಠಾಧಿಕಾರಿ ಮನೋಜ್ ರೈ ತಿಳಿಸಿದ್ದಾರೆ. ದೂರು ಸ್ವೀಕರಿಸಿದ ನಂತರ, ಪೊಲೀಸರು ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 70 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ರೈ ಹೇಳಿದರು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು, ಆರೋಪಿಗಳ ಬಗ್ಗೆ ಮಾಹಿತಿ ನೀಡಿದವರಿಗೆ 10,000 ರೂ. ಬಹುಮಾನ ನೀಡುವುದಾಗಿಯೂ ಪೊಲೀಸರು ಘೋಷಿಸಿದ್ದಾರೆ ಎಂದು ಅವರು ಹೇಳಿದರು.
ಯುವಕನನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಲ್ಲೆ
ಹಳೆಯ ದ್ವೇಷ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನನ್ನು ಅಪಹರಿಸಿದ ದುಷ್ಕರ್ಮಿಗಳು, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸುಮಾರು ಒಂದು ಗಂಟೆಗಳ ಕಾಲ ಕ್ರೂರವಾಗಿ ಥಳಿಸಿದ್ದಾರೆ. ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ನಗೌಡ್ ಪಟ್ಟಣದಲ್ಲಿ ಘಟನೆ ನಡೆದಿದೆ. ಬೆಲ್ಟ್‌ನಿಂದ ಹೊಡೆದು, ಕಾಲಿನಿಂದ ಒದ್ದು ಹಲ್ಲೆ ಮಾಡಿದ್ದಾರೆ. ಯುವಕ ತೀವ್ರವಾಗಿ ಗಾಯಗೊಂಡಿದ್ದು, ತಕ್ಷಣ ಆತನನ್ನು ನಾಗೌಡ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಯಿತು. ಗಂಭೀರ ಗಾಯಗೊಂಡಿರುವ ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಕ್ಷಣ ಪ್ರಕರಣ ದಾಖಲಿಸಿಕೊಂಡರು. ಪ್ರಮುಖ ಆರೋಪಿಗಳಾದ ಹರ್ಷಿತ್ ಸಿಂಗ್ ಮತ್ತು ಸಿದ್ಧಾರ್ಥ್ ಸಿಂಗ್ ವಿರುದ್ಧ ನಾಗೌಡ್ ಪೊಲೀಸ್ ಠಾಣೆಯಲ್ಲಿ ಹೆಸರಿಸಲಾದ ಎಫ್‌ಐಆರ್ ದಾಖಲಿಸಲಾಗಿದೆ. ಇಬ್ಬರೂ ತಲೆಮರೆಸಿಕೊಂಡಿದ್ದಾರೆ ಎಂದು ವರದಿಯಾಗಿದ್ದು, ಪೊಲೀಸ್ ತಂಡಗಳು ಅವರಿಗಾಗಿ ಹುಡುಕಾಟ ನಡೆಸುತ್ತಿವೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 365 (ಅಪಹರಣ), 323 (ಹಲ್ಲೆ) ಮತ್ತು ಇತರ ನಿಬಂಧನೆಗಳ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ.