ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bengaluru News: ಬೆಂಗಳೂರಿನ ತಾಜ್‌ ಹೋಟೆಲ್‌ನಲ್ಲಿ ಘೋರ ಘಟನೆ; ಇಬ್ಬರು ಮಕ್ಕಳನ್ನು ಕೊಂದು ತಂದೆ ಆತ್ಮಹತ್ಯೆಗೆ ಯತ್ನ!

ಬೆಂಗಳೂರು ವಿಮಾನ ನಿಲ್ದಾಣ ಬಳಿಯ ತಾಜ್ ಹೋಟೆಲ್‌ನ 4ನೇ ಮಹಡಿಯ ರೂಮ್‌ನಲ್ಲಿ ಘಟನೆ ನಡೆದಿದೆ. ಖಾಸಗಿ ಕಂಪನಿಯಲ್ಲಿ ಮ್ಯಾನೇಜರ್‌ ಆಗಿರುವ ವ್ಯಕ್ತಿ, ತನ್ನ 5 ಹಾಗೂ 10 ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆ ಮಾಡಿ, ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಂಗಳೂರು: ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ ಬಳಿಯ ತಾಜ್‌ ಹೋಟೆಲ್‌ನಲ್ಲಿ (Taj Hotel Bangalore) ಘೋರ ಘಟನೆಯೊಂದು ನಡೆದಿದೆ. ತನ್ನ ಇಬ್ಬರು ಹೆಣ್ಣುಮಕ್ಕಳನ್ನು ನೇಣುಹಾಕಿ ಕೊಂದ ತಂದೆ, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ. ತಾಜ್ ಹೋಟೆಲ್‌ನ 4ನೇ ಮಹಡಿಯ ರೂಮ್‌ನಲ್ಲಿ ಘಟನೆ ನಡೆದಿದೆ. ಇಮ್ರಾನ್‌ ಎಂಬಾತ ತನ್ನ 5 ಹಾಗೂ 10 ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಹತ್ಯೆ ಮಾಡಿ, ಬಳಿಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಕೊಲೆಯಾದ ಮಕ್ಕಳನ್ನ ಶೇಕ್ ಜೆಹರಾ (5), ಶೇಕ್ ಜೋಯಾ (10) ಎಂದು ಗುರುತಿಸಲಾಗಿದೆ. ಮಕ್ಕಳನ್ನು ಹತ್ಯೆ ಮಾಡಲು ವ್ಯಕ್ತಿ ಹೋಟೆಲ್‌ನಲ್ಲಿ ಮುಂಚಿತವಾಗಿಯೇ ರೂಂ ಬುಕ್ ಮಾಡಿದ್ದ ಎನ್ನಲಾಗಿದೆ. ಕೃತ್ಯದ ಬಳಿಕ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದು, ಅದರಲ್ಲಿ ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.

ಇಮ್ರಾನ್‌ ಮೂಲತಃ ಬೆಂಗಳೂರಿನ ನಾಗವಾರದ ನಿವಾಸಿಯಾಗಿದ್ದು, ಜಿಮ್ಮಿ ಕ್ಯಾಬ್‌ ಸಂಸ್ಥೆಯಲ್ಲಿ ಮ್ಯಾನೇಜರ್‌ ಆಗಿದ್ದ. ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಇಮ್ರಾನ್‌ನನ್ನ ಸದ್ಯ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಗ್ಗೆ ಮಾಹಿತಿ ತಿಳಿದ ಏರ್‌ಪೋರ್ಟ್‌ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗೋವಾದಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿ; 20 ಮಂದಿಗೆ ಗಾಯ