ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Physical abuse: ಪಾಲಕರೊಟ್ಟಿಗೆ ಮಲಗಿದ್ದ 4 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರವೆಸಗಿದ ದುರುಳ

ಅಜ್ಜಿಯ ಪಕ್ಕದಲ್ಲೇ ಮಲಗಿದ್ದ ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿರುವ ಘಟನೆ ಕೋಲ್ಕತ್ತಾ ಬಳಿಯ ಹೂಗ್ಲಿಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ. ಗಂಭೀರ ಗಾಯಗೊಂಡಿರುವ ಬಾಲಕಿಯನ್ನು ತಾರಕೇಶ್ವರ ಗ್ರಾಮೀಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪ್ರಕರಣ ದಾಖಲಿಸಿರುವ ಹೂಗ್ಲಿ ಗ್ರಾಮೀಣ ಠಾಣೆಯ ಪೊಲೀಸರು ಶಂಕಿತನೊಬ್ಬನನ್ನು ಬಂಧಿಸಿದ್ದಾರೆ.

4 ವರ್ಷದ ಬಾಲಕಿಯನ್ನು ಎಳೆದೊಯ್ದು ಅತ್ಯಾಚಾರವೆಸಗಿದ ದುರುಳ

-

ಕೋಲ್ಕತ್ತಾ: ಅಜ್ಜಿಯ ಪಕ್ಕದಲ್ಲೇ ಮಲಗಿದ್ದ ಪುಟ್ಟ ಕಂದಮ್ಮನನ್ನು ಎತ್ತಿಕೊಂಡು ಹೋಗಿ ಅತ್ಯಾಚಾರ (Physical assault) ನಡೆಸಿರುವ ಘಟನೆ ಕೋಲ್ಕತ್ತಾದಲ್ಲಿ (Kolkata) ನಡೆದಿದೆ. ಹೂಗ್ಲಿಯಲ್ಲಿ ಶುಕ್ರವಾರ ತಡರಾತ್ರಿ ನಾಲ್ಕು ವರ್ಷದ ಬಾಲಕಿ ತನ್ನ ಅಜ್ಜಿಯ ಪಕ್ಕದಲ್ಲಿ ಮಲಗಿದ್ದಳು. ಆಕೆಯನ್ನು ಯಾರೋ ಎತ್ತಿಕೊಂಡು ಹೋಗಿದ್ದು ನಿದ್ದೆಯಲ್ಲಿದ್ದ ಅಜ್ಜಿಗೆ ತಿಳಿಯಲಿಲ್ಲ. ಬೆಳಗ್ಗೆ ಮಗುವನ್ನು ಹುಡುಕಿದಾಗ ಆಕೆ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಆಕೆಯನ್ನು ಅಪಹರಿಸಿ (Kidnap) , ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಜಾರ ಸಮುದಾಯಕ್ಕೆ ಸೇರಿದ ಮಹಿಳೆಯು ಮೊಮ್ಮಗಳೊಂದಿಗೆ ತಾರಕೇಶ್ವರದ ರೈಲ್ವೆ ಶೆಡ್‌ನಲ್ಲಿ ಸೊಳ್ಳೆ ಪರದೆಯ ಕೆಳಗೆ ಹಾಸಿಗೆ ಹಾಸಿ ಮಲಗಿದ್ದರು. ಈ ವೇಳೆ ದುರ್ಘಟನೆ ನಡೆದಿದೆ ಎಂದು ಹೂಗ್ಲಿ ಗ್ರಾಮೀಣ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Shootout Case: ತಂದೆಯ ಪಿಸ್ತೂಲ್‌ನಿಂದ ಸಹಪಾಠಿ ಮೇಲೆ ಗುಂಡಿನ ದಾಳಿ ನಡೆಸಿದ ಬಾಲಕರು!

ಆರೋಪಿಯು ಶುಕ್ರವಾರ ತಡರಾತ್ರಿ ಮಗುವಿನ ಬಳಿ ಸೊಳ್ಳೆ ಪರದೆಯನ್ನು ಕತ್ತರಿಸಿ ಮಗುವನ್ನು ಎತ್ತಿಕೊಂಡು ಹೋಗಿದ್ದಾನೆ. ಮರುದಿನ ಮಧ್ಯಾಹ್ನ ತಾರಕೇಶ್ವರ ರೈಲ್ವೆ ಹೈ ಡ್ರೈನ್ ಬಳಿ ಮಗು ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ.

ಘಟನೆಯ ಕುರಿತು ಮಾಹಿತಿ ನೀಡಿರುವ ಮಗುವಿನ ಅಜ್ಜಿ, ಮಗು ನನ್ನ ಜೊತೆ ಮಲಗಿತ್ತು. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಯಾರೋ ಅವಳನ್ನು ಎತ್ತಿಕೊಂಡು ಹೋದರು. ಯಾರು ಎಂಬುದು ನನಗೆ ತಿಳಿಯಲಿಲ್ಲ. ಸೊಳ್ಳೆ ಪರದೆಯನ್ನು ಕತ್ತರಿಸಿ ಕರೆದುಕೊಂಡು ಹೋಗಿದ್ದಾರೆ. ಮಗು ಬೆತ್ತಲೆಯಾಗಿ ಸಿಕ್ಕಿದ್ದಾಳೆ. ನಮ್ಮ ಮನೆಗಳನ್ನು ಕೆಡವಲಾಗಿದೆ. ಹೀಗಾಗಿ ನಾವು ಬೀದಿಗಳಲ್ಲಿ ವಾಸಿಸುತ್ತಿದ್ದೇವೆ. ನಾವು ಎಲ್ಲಿಗೆ ಹೋಗಬೇಕು, ನಮಗೆ ಮನೆಯೇ ಇಲ್ಲ ಎಂದು ಅವರು ಕಣ್ಣೀರು ಸುರಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಭಾನುವಾರ ಬೆಳಗ್ಗೆ ಶಂಕಿತನೊಬ್ಬನನ್ನು ಬಂಧಿಸಲಾಗಿದೆ. ಮಗುವಿನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ತಾರಕೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೊ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ: ರಾಜ್ಯವೇ ತಲೆ ತಗ್ಗಿಸುವ ಘಟನೆ; ಅಪ್ರಾಪ್ತೆ ಸಹೋದರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 21 ವರ್ಷದ ಯುವಕ

ಬಿಜೆಪಿ ವಾಗ್ದಾಳಿ

ಪ್ರಕರಣಕ್ಕೆ ಸಂಬಂಧಿಸಿದಂತೆ ಮಮತಾ ಬ್ಯಾನರ್ಜಿ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಪೊಲೀಸರು ಈ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸುತ್ತಿಲ್ಲ ಎಂದು ಆರೋಪಿಸಿದೆ.

ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಬಂಗಾಳದ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ, ತಾರಕೇಶ್ವರದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆದಿದೆ. ಈ ಕುರಿತು ಎಫ್‌ಐಆರ್ ದಾಖಲಿಸಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತಾರಕೇಶ್ವರ ಪೊಲೀಸರು ಅಪರಾಧವನ್ನು ಸಮಾಧಿ ಮಾಡುವಲ್ಲಿ ನಿರತರಾಗಿದ್ದಾರೆ. ಇದು ಮಮತಾ ಬ್ಯಾನರ್ಜಿಯವರ ಎಲ್ಲರಿಗೂ ಉಚಿತ ಆಡಳಿತದ ನಿಜವಾದ ಮುಖ ಎಂದು ಆರೋಪಿಸಿದ್ದಾರೆ.