ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಪ್ರೇಯಸಿ, ತಂದೆ, ತಾಯಿ ಮೇಲೆ ಪೆಟ್ರೋಲ್​​ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಪ್ರಿಯಕರ!

ಪ್ರೇಯಸಿ ಸೇರಿದಂತೆ ಮೂವರ ಮೇಲೆ ಪೆಟ್ರೋಲ್​​ ಸುರಿದು ವ್ಯಕ್ತಿಯೋರ್ವ ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ತರಬನಹಳ್ಳಿಯಲ್ಲಿ ನಡೆದಿದೆ. ಆರೋಪಿಯ ಪ್ರೇಯಸಿ ಸುಮಲತಾ, ಆಕೆಯ ತಂದೆ ಶ್ರೀರಾಮ(48) ಹಾಗೂ ತಾಯಿ ಮಂಜಮ್ಮ (42) ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಂಗ್ರಹ ಚಿತ್ರ

ಬೆಂಗಳೂರು: ಪ್ರೇಯಸಿ ಸೇರಿದಂತೆ ಮೂವರ ಮೇಲೆ ಪೆಟ್ರೋಲ್​​ ಸುರಿದು ವ್ಯಕ್ತಿಯೋರ್ವ ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ (Bengaluru Crime) ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ತರಬನಹಳ್ಳಿಯಲ್ಲಿ ನಡೆದಿದೆ. ಆರೋಪಿಯ ಪ್ರೇಯಸಿ ಸುಮಲತಾ, ಆಕೆಯ ತಂದೆ ಶ್ರೀರಾಮ(48) ಹಾಗೂ ತಾಯಿ ಮಂಜಮ್ಮ (42) ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಸಂಬಂಧ ಆರೋಪಿ ಪಾಂಡುರಂಗನನ್ನು ಬಂಧಿಸಲಾಗಿದ್ದು, ಗಾಯಾಳುಗಳಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

4 ವರ್ಷದ ಹಿಂದೆ ಗಂಡನಿಂದ ದೂರವಾಗಿದ್ದ ಸುಮಲತಾ, ಯಶವಂತಪುರದ ಮೆಟ್ರೋದಲ್ಲಿ ಕೆಲಸ ಮಾಡುತ್ತಿದ್ದಳು. ಇನ್ಸ್ಟಾಗ್ರಾಂನಲ್ಲಿ ಈಕೆಗೆ ಪಾಂಡುರಂಗನ ಪರಿಚಯವಾಗಿತ್ತು. ಬಳಿಕ ಆತನ ಜೊತೆಗೆ ಮನೆ ಬಿಟ್ಟು ಹೋಗಿದ್ದ ಸುಮಲತಾ, 4 ವರ್ಷದಿಂದ ಲೀವಿಂಗ್ ಇನ್ ರಿಲೇಷನ್​ಶಿಪ್​ನಲ್ಲಿದ್ದಳು. ಮಹಾಲಕ್ಷ್ಮೀ ಲೇಔಟ್​ನಲ್ಲಿ ಬಾಡಿಗೆ ಮನೆ ಮಾಡಿಕೊಂಡು ಇಬ್ಬರೂ ವಾಸವಿದ್ದರು. ಆದರೆ, ಪಾಂಡುವಿನ ಜೊತೆಗೂ ವಿರಸ ಉಂಟಾಗಿ ಕಳೆದ ಎರಡು ತಿಂಗಳ‌ ಹಿಂದೆ ಆತನಿಂದಲೂ ಸುಮಲತಾ ದೂರವಾಗಿದ್ದಳು. ಈಕೆಯ ಜೊತೆ ಇದ್ದುಕೊಂಡೇ ಪಾಂಡುರಂಗ ಮತ್ತೊಂದು ಯುವತಿಯ ಸಹವಾಸ ಮಾಡಿದ್ದ ಕಾರಣ, ಗಲಾಟೆ ಮಾಡಿಕೊಂಡು ಈಕೆ ತಾಯಿ ಮನೆಯನ್ನು ಸೇರಿದ್ದಳು ಎನ್ನಲಾಗಿದೆ.

ಕ್ಷುಲಕ ಕಾರಣಕ್ಕೆ ಇಬ್ಬರ ನಡುವೆ ಜಗಳ ಉಂಟಾಗಿದೆ. ಇದರಿಂದ ಸಿಟ್ಟಿಗೆದ್ದ ಆರೋಪಿ ಗಲಾಟೆ ಮಾಡಿದ್ದಾನೆ. ಸುಮಲತಾ, ಆಕೆಯ ತಂದೆ ಮತ್ತು ತಾಯಿ ಮೂವರೂ ಈ ವೇಳೆ ಬೈದಿದ್ದಾರೆ. ಹೀಗಾಗಿ ಇನ್ನಷ್ಟು ಕೋಪಗೊಂಡಿದ್ದ ಪಾಡುರಂಗ ಸ್ಥಳದಿಂದ ತೆರಳಿದ್ದು, ಸುಮಾರು ಅರ್ಧಗಂಟೆ ಬಳಿಕ ವಾಪಾಸ್​​ ಆಗಿದ್ದಾನೆ. ಮತ್ತೆ ಗಲಾಟೆ ಶುರುಮಾಡಿ ಸುಮಲತಾ ಮತ್ತು ಆಕೆಯ ಪೋಷಕರ ಮೇಲೆ ಪೆಟ್ರೋಲ್​​ ಸುರಿದು ಬೆಂಕಿ ಹಚ್ಚಿ, ಆಟೋದಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಸದ್ಯ ಮೂವರ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡ ಸೋಲದೇವನಹಳ್ಳಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಅನೈತಿಕ ಸಂಬಂಧಕ್ಕೆ ಮಹಿಳೆ ಬಲಿ

ಪ್ರೇಯಸಿಯನ್ನು ಕೊಲೆ ಮಾಡಿ ಬಳಿಕ ಶವವನ್ನು ಸುಟ್ಟು ಸಾಕ್ಷ್ಯ ನಾಶ ಮಾಡಲು ವ್ಯಕ್ತಿಯೊಬ್ಬ ಯತ್ನಿಸಿರುವ ಘಟನೆಯೊಂದು ನಗರದ ಹೊರವಲಯದ ದೇವನಹಳ್ಳಿಯಲ್ಲಿ ನಡೆದಿದೆ. ಆರೋಪಿಯನ್ನು ಮೌನೇಶ್ ಮೈತ್ರಿ (34) ಎಂದು ಗುರುತಿಸಲಾಗಿದೆ. ಈತ ಮೂಲತಃ ಯಾದಗಿರಿ ಜಿಲ್ಲೆಯ ಹಸನಾಪುರ ನಿವಾಸಿಯಾಗಿದ್ದು, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದಾನೆಂದು ತಿಳಿದುಬಂದಿದೆ. ಆರೋಪಿಯ ಪತ್ನಿ ಹೆರಿಗೆಗಾಗಿ ತನ್ನ ಊರಿಗೆ ತೆರಳಿದ್ದ ಸಮಯದಲ್ಲಿ ಮೌನೇಶ್ ಮತ್ತು ನಿರ್ಮಲಾ ನಡುವೆ ಅನೈತಿಕ ಸಂಬಂಧ ಬೆಳೆದಿದೆ. ಈ ಸಂಬಂಧ ಬಹಿರಂಗವಾಗುವ ಭಯದಿಂದ ಫೆಬ್ರವರಿ 21ರಂದು ದೇವನಹಳ್ಳಿಯ ಬಾಡಿಗೆ ಮನೆಯಲ್ಲಿ ಮೌನೇಶ್ ನಿರ್ಮಲಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.

Vishakha Bhat Heggar

View all posts by this author