ಬೆಂಗಳೂರು: ಮದುವೆಯಾಗಿ(Marriage) ಕೇವಲ ನಾಲ್ಕು ತಿಂಗಳಾಗಿದ್ದ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ (Self Harming) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ ಶ್ವೇತಾ (25) ಮೃತಪಟ್ಟ ದುರ್ದೈವಿ. ಇವರು ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಂಕದಕಟ್ಟೆಯಲ್ಲಿ ವಾಸವಾಗಿದ್ದರು ಹಾಗೂ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಮೃತ ಶ್ವೇತಾ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿದ ಯುವಕನ ಕೈಹಿಡಿದು ಹೊಸ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ, ವೈವಾಹಿಕ ಜೀವನ ಆರಂಭವಾದ ಕೆಲವೇ ತಿಂಗಳುಗಳಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೂ ಮುನ್ನ ಆಕೆ ಬರೆದಿಟ್ಟಿರುವ ಡೆತ್‌ನೋಟ್ ಈಗ ಲಭ್ಯವಾಗಿದ್ದು, ಅದರಲ್ಲಿ ಪತಿ ಹಾಗೂ ಪತಿಯ ಅಕ್ಕನ ಕಿರುಕುಳದ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ.
ನನ್ನ ಸಾವಿಗೆ ನನ್ನ ಗಂಡ ಮತ್ತು ಅವರ ಅಕ್ಕನೇ ಕಾರಣ. ಅವರಿಂದ ನನಗೆ ಹಿಂಸೆ ಆಗುತ್ತಿತ್ತು. ಇನ್ನು ಮುಂದೆ ನನಗೆ ಬದುಕಲು ಆಸೆಯೇ ಇಲ್ಲ ಎನ್ನುವ ರೀತಿ ಮಾಡಿದ್ದಾರೆ. ನನ್ನ ಸಾವಿಗೆ ಅವರನ್ನ ಮಾತ್ರ ಸುಮ್ಮನೆ ಬಿಡಬೇಡ ಅಮ್ಮ. ನನ್ನಿಂದ ತಪ್ಪಾಗಿದೆ ಕ್ಷಮಿಸು ಇಂತಿ ನಿನ್ನ ಪ್ರೀತಿಯ ಮಗಳು ಶ್ವೇತಾ ಎಂದು ಬರೆದಿದ್ದಾರೆ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡೆತ್‌ನೋಟ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮೃತರ ಕುಟುಂಬಸ್ಥರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಾಯಿ, ಅಜ್ಜಿ ಹಾಗೂ ಮಾವನನ್ನು ಕೊಂದು ಯುವಕ ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಿಗೆಪಾಳ್ಯದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ತಾಯಿ ಮಂಗಳಮ್ಮ, ಅಜ್ಜಿ ನಂಜಮ್ಮ ಮತ್ತು ಮಾವ ಸತೀಶ ಅವರನ್ನು ಪ್ರಶಾಂತ್ ಎಂಬಾತ ಕೊಲೆ ಮಾಡಿದ್ದಾನೆ. ಕೃತ್ಯ ಎಸಗಿದ ಬಳಿಕ ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ನನಗೆ ಬದುಕು ಸಾಕಾಗಿದೆ; ಪ್ರಿಯಕರನಿಗೆ ಕೊನೆಯ ಮೆಸೇಜ್ ಮಾಡಿ ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
ಮಂಗಳಮ್ಮ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ನಂಜಮ್ಮ ಪೌರಕಾರ್ಮಿಕರಾಗಿದ್ದರು. ಸತೀಶ್ ಪ್ಲಂಬರ್ ಕೆಲಸ ಮಾಡುತ್ತಿದ್ದರು. ಕೃತ್ಯ ಎಸಗಿದ ಆರೋಪಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಕುಟುಂಬಸ್ಥರೆಲ್ಲರು ಕಳೆದ ಏಳೆಂಟು ವರ್ಷದಿಂದ ಕೊಟ್ಟಿಗೆಪಾಳ್ಯದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆರೋಪಿ ಪ್ರಶಾಂತ್ ಕಳೆದ ಒಂದು ವರ್ಷದಿಂದ ಕೆಲಸಕ್ಕೆ ಹೋಗಿರಲಿಲ್ಲ. ಇಂದು ತಂದೆ ಕೆಲಸಕ್ಕೆ ಹೋಗಿದ್ದಾಗ ಪ್ರಶಾಂತ್ ಮೂವರನ್ನ ಕೊಚ್ಚಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.