ಮಡಿಕೇರಿ: ತಲೆಗೆ ಗುಂಡು ಹಾರಿಸಿಕೊಂಡು ಸರ್ಕಾರಿ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಚೇರಂಬಾಣೆ ಗ್ರಾಮದಲ್ಲಿ ನಡೆದಿದೆ. ಎ.ರೋಹಿಣಿ (51) ಆತ್ಮಹತ್ಯೆಗೆ ಶರಣಾದ ಮಹಿಳೆ. ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮನೆಯಲ್ಲಿ ಎಲ್ಲರೂ ಮಲಗಿದ್ದ ವೇಳೆ ಮುಂಜಾನೆ 5 ಗಂಟೆ ವೇಳೆಗೆ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ತಮ್ಮ ಮನೆಯಲ್ಲಿದ್ದ ಕೋವಿಯಿಂದಲೇ ಗುಂಡು ಹಾರಿಸಿಕೊಂಡು ಅವರು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೊಡಗು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಸ್ಕೂಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿನಿ ಸಾವು
ಬೆಂಗಳೂರು: ಸ್ಕೂಟರ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಸಿರಿಶಾ (21) ಎಂದು ಗುರುತಿಸಲಾಗಿದೆ.
ಉತ್ತರಹಳ್ಳಿ ಮುಖ್ಯ ರಸ್ತೆಯಲ್ಲಿ ವಿದ್ಯಾರ್ಥಿನಿ ಸ್ಕೂಟರ್‌ನಲ್ಲಿ ಹೋಗುತ್ತಿದ್ದಳು. ಈ ವೇಳೆ ಪಕ್ಕದಲ್ಲಿ ಬಂದ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ಪರಿಣಾಮ ವಿದ್ಯಾರ್ಥಿನಿ ನಿಯಂತ್ರಣ ತಪ್ಪಿ ಬಸ್ ಕೆಳಗೆ ಬಿದ್ದಿದ್ದಾಳೆ. ಕೆಳಗೆ ಬಿದ್ದ ವಿದ್ಯಾರ್ಥಿನಿ ತಲೆ ಮೇಲೆ ಬಸ್‌ನ ಚಕ್ರ ಹರಿದಿದೆ. ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಸಾಂಬಾರ್ ಮಾಡಿಲ್ಲ ಎಂದು ಅಪ್ಪ ಬೈದಿದಕ್ಕೆ ಆತ್ಮಹತ್ಯೆ ಮಾಡಿಕೊಂಡ ಮಗಳು!
ಮೃತದೇಹವನ್ನು ಆರ್‌ಆರ್ ನಗರ ಮೆಡಿಕಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ಕೆಂಗೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಎಂಟಿಸಿ ಬಸ್ ಚಾಲಕ ಚಂದ್ರು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.