ಹಾಸನ : ಪ್ರೀತಿ-ಪ್ರೇಮ ವಿಚಾರಕ್ಕೆ ರಾಜ್ಯದಲ್ಲಿ ಮತ್ತೊಂದು ಬರ್ಬರ ಕೊಲೆಯಾಗಿದೆ (Murder Case). ಲವ್ ಬ್ರೇಕಪ್ ವಿಚಾರಕ್ಕೆ ಹಾಸನದ ಹೊಳೆನರಸೀಪುರದಲ್ಲಿ ಯುವಕನ ಕೊಲೆಯಾಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ನಿವಾಸಿ ಸಂದೀಪ್ (24) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಹೊಳೆನರಸೀಪುರ ತಾಲೂಕಿನ ಎಸ್.ಅಂಕನಹಳ್ಳಿ ಬಳಿ ಮೃತದೇಹ ಪತ್ತೆಯಾಗಿದೆ. 3 ವರ್ಷಗಳಿಂದ ಮೈಸೂರು ಜಿಲ್ಲೆಯ ಯುವತಿಯನ್ನು ಪ್ರೀತಿಸುತ್ತಿದ್ದ. ಲವ್ ಬ್ರೇಕಪ್ ಹಿನ್ನೆಲೆ ಹುಡುಗಿ ಕಡೆಯವರಿಂದ ಕೊಲೆ ಆರೋಪ ಕೇಳಿಬಂದಿದೆ. ನಿನ್ನೆ ರಾತ್ರಿ ಮನೆಯಿಂದ ಬೈಕ್ ನಲ್ಲಿ ತೆರಳಿದ್ದ ಸುದೀಪ್ ಶವವಾಗಿ ಪತ್ತೆಯಾಗಿದ್ದಾನೆ.
ಮಚ್ಚಿನಿಂದ ಕೊಚ್ಚಿ ಕೊಲೆಗೈದು ಅಪಘಾತದ ರೀತಿ ಬಿಂಬಿಸುವ ಯತ್ನಿಸಲಾಗಿದೆ. ಕೊಲೆ ಮಾಡಿ ಶವ ಬೈಕನ್ನು ಮುಚ್ಚಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಹಳ್ಳಿ ಮೈಸೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ: Missing Case: 2023ರಲ್ಲಿಯೇ ಕೊಲೆಯಾಗಿದ್ದಾಳೆಂದು ಭಾವಿಸಲಾಗಿದ್ದ ಮಹಿಳೆ ಮನೆಗೆ ವಾಪಸ್, ಆಕೆಯ ಕೊಲೆ ಆರೋಪದ ಮೇಲೆ ಜೈಲಿನಲ್ಲಿರುವ ನಾಲ್ವರು
ಪತ್ನಿಯ ಕೊಂದು ಮಂಚದೊಳಗಿಟ್ಟು ಪತಿ ಪರಾರಿ
ಕೆಲವು ದಿನಗಳ ಹಿಂದೆಯಷ್ಟೇ ಪತ್ನಿಯನ್ನು (wife) ಕೊಂದು (Murder case) ಶವವನ್ನು ಮಂಚದೊಳಗಿಟ್ಟು ಬೆಡ್ ಮುಚ್ಚಿ ಪತಿ (Husband) ಪರಾರಿ ಆಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಮೂಡಲಗಿ ತಾಲೂಕಿನ ಕಮಲದಿನ್ನಿ ಗ್ರಾಮದಲ್ಲಿ ನಡೆದಿತ್ತು. ಸಾಕ್ಷಿ ಕಂಬಾರ (20) ಕೊಲೆಯಾದ ಪತ್ನಿ. ಆಕಾಶ್ ಪರಾರಿಯಾಗಿರುವ ಪತಿ. ಮೂಡಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.
ನಾಲ್ಕು ತಿಂಗಳ ಹಿಂದೆಯಷ್ಟೇ ಆಕಾಶ್ ಮತ್ತು ಸಾಕ್ಷಿ ಕಂಬಾರ ಮದುವೆ ಆಗಿತ್ತು. ಮೂರು ದಿನದ ಹಿಂದೆ ಸಾಕ್ಷಿ ಕಂಬಾರಳನ್ನು ಕೊಂದು ಮಂಚದೊಳಗೆ ಶವ ಬಚ್ಚಿಟ್ಟು ಮೊಬೈಲ್ ಸ್ವಿಚ್ಆಫ್ ಮಾಡಿಕೊಂಡು ಆಕಾಶ್ ಪರಾರಿ ಆಗಿದ್ದಾನೆ. ಇತ್ತ ಊರಿಗೆ ಹೋಗಿದ್ದ ಅತ್ತೆ ಮನೆಗೆ ಹಿಂದಿರುಗಿದಾಗ ಹತ್ಯೆ ಬೆಳಕಿಗೆ ಬಂದಿದೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮೂಡಲಗಿ ತಹಶೀಲ್ದಾರ್ ಶ್ರೀಶೈಲ್ ಗುಡಮೆ ಮತ್ತು ಗೋಕಾಕ್ ಡಿವೈಎಸ್ಪಿ ಭೇಟಿ ನೀಡಿ ಪರೀಶಿಲನೆ ಮಾಡಿದ್ದಾರೆ.