Yallapur Bandh: ಹಿಂದೂ ಯುವತಿ ಹತ್ಯೆ ಪ್ರಕರಣ: ಇಂದು 'ಯಲ್ಲಾಪುರ ಬಂದ್'ಗೆ ಕರೆ
ಶನಿವಾರ ಸಂಜೆ ರಂಜಿತಾ ಅವರು ಶಾಲೆಯಿಂದ ಮನೆಗೆ ಮರಳುತ್ತಿದ್ದಾಗ, ಆರೋಪಿ ರಫೀಕ್ ಎಂಬಾತ ಪಟ್ಟಣದ ಮಾರ್ಕೋಜಿ ದೇವಸ್ಥಾನದ ಬಳಿ ಆಕೆಯನ್ನು ಅಡ್ಡಗಟ್ಟಿ ಚಾಕುವಿನಿಂದ ಕುತ್ತಿಗೆಗೆ ಇರಿದು ಪರಾರಿಯಾಗಿದ್ದ. ತೀವ್ರವಾಗಿ ಗಾಯಗೊಂಡಿದ್ದ ರಂಜಿತಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌ಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದರು.
-
ಶಿರಸಿ: ಕಳೆದ ಶನಿವಾರ ಸಂಜೆ ರಂಜಿತಾ (Ranjitha) ಅವರು ಶಾಲೆಯಿಂದ ಮನೆಗೆ ಮರಳುತ್ತಿದ್ದಾಗ, ಆರೋಪಿ ರಫೀಕ್(Raqiq) ಎಂಬಾತ ಪಟ್ಟಣದ ಮಾರ್ಕೋಜಿ ದೇವಸ್ಥಾನದ ಬಳಿ ಆಕೆಯನ್ನು ಅಡ್ಡಗಟ್ಟಿ ಚಾಕುವಿನಿಂದ ಕುತ್ತಿಗೆಗೆ ಇರಿದು ಪರಾರಿಯಾಗಿದ್ದ. ತೀವ್ರವಾಗಿ ಗಾಯಗೊಂಡಿದ್ದ ರಂಜಿತಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್‌ಗೆ ಕರೆದೊಯ್ಯುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದರು.
ಆರೋಪಿ ರಫೀಕ್(Accuse Rafiq) ಕಳೆದ ಕೆಲವು ಸಮಯದಿಂದ ರಂಜಿತಾ ಅವರನ್ನು ಮದುವೆ ಯಾಗುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ. ಆದರೆ ರಂಜಿತಾ ಈ ಪ್ರಸ್ತಾಪವನ್ನು ನಿರಾಕರಿಸಿದ್ದರಿಂದ ಕೋಪ ಗೊಂಡ ರಫೀಕ್ ಈ ಕೃತ್ಯ ಎಸಗಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಇದನ್ನೂ ಓದಿ: Maddur Bandh: ಕಲ್ಲು ತೂರಾಟ ಪ್ರಕರಣ ಖಂಡಿಸಿ ನಾಳೆ ಮದ್ದೂರು ಬಂದ್
ಯಲ್ಲಾಪುರ ಬಂದ್: ಹಿಂದೂ ಮಹಿಳೆಯ ಕೊಲೆಯನ್ನು ಖಂಡಿಸಿ ಮತ್ತು ಆರೋಪಿಯ ಬಂಧನಕ್ಕೆ ಆಗ್ರಹಿಸಿ ಇಂದು ವಿಶ್ವ ಹಿಂದೂ ಪರಿಷತ್ (VHP)ಮತ್ತು ವಿವಿಧ ಹಿಂದೂ ಸಂಘಟನೆಗಳು 'ಯಲ್ಲಾಪುರ ಬಂದ್'(Yellapur Bandh)ಗೆ ಕರೆ ನೀಡಿವೆ. ಬೆಳಗ್ಗಿನಿಂದಲೇ ಅಂಗಡಿ-ಮುಂಗಟ್ಟು ಗಳನ್ನು ಮುಚ್ಚುವ ಮೂಲಕ ವರ್ತಕರು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ.
ಆರೋಪಿ ಸಾವು: ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಟ್ವಿಸ್ಟ್ ಸಿಕ್ಕಿದ್ದು, ಕೊಲೆ ಮಾಡಿ ಪರಾರಿ ಯಾಗಿದ್ದ ಆರೋಪಿ ರಫೀಕ್ (30) ಯಲ್ಲಾಪುರದ ಕಾಳಮ್ಮನಗರ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇಂದು ಬೆಳಗ್ಗೆ ಪೊಲೀಸರು ಮತ್ತು ಶ್ವಾನದಳದ ಶೋಧದ ವೇಳೆ ಆತನ ಮೃತದೇಹ ಪತ್ತೆಯಾಗಿದೆ.
ಪ್ರಕ್ಷುಬ್ಧ ವಾತಾವರಣ: ಪಟ್ಟಣದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಹೆಚ್ಚಿನ ಭದ್ರತೆಯನ್ನು ನಿಯೋಜಿಸಿದ್ದಾರೆ.