ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಉಗ್ರಗಾಮಿ ಚಟುವಟಿಕೆಗೆ ನೆರವು: ಭಯೋತ್ಪಾದಕ ಹಫೀಜ್ ಸಯೀದ್ ಗೆ ಜಾಮೀನು ರಹಿತ ವಾರಂಟ್ ಜಾರಿ

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿ ಚಟುವಟಿಕೆಗಳಿಗೆ ನೆರವು ನೀಡುವ ಆರೋಪದಲ್ಲಿ ಭಯೋತ್ಪಾದಕ ಹಫೀಜ್ ಸಯೀದ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಲಾಗಿದೆ. ಪಾಕಿಸ್ತಾನದಲ್ಲಿ ನೆಲೆಸಿರುವ ಸಯೀದ್ ಉಗ್ರರಿಗೆ ಆರ್ಥಿಕ ನೆರವು, ಶಸ್ತ್ರಾಸ್ತ್ರಗಳನ್ನು ಒದಗಿಸಲು ನೆರವಾಗುತ್ತಿದ್ದ ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ತಿಳಿಸಿದೆ.

ಭಯೋತ್ಪಾದಕ ಹಫೀಜ್ ಸಯೀದ್ ವಿರುದ್ಧ ಜಾಮೀನು ರಹಿತ ವಾರಂಟ್

ಸಂಗ್ರಹ ಚಿತ್ರ -

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ (jammu and kashmir) ಭಯೋತ್ಪಾದನೆಗೆ (terrorist) ಪ್ರೋತ್ಸಾಹ ನೀಡುತ್ತಿದ್ದ ಆರೋಪದಲ್ಲಿ ಪಾಕಿಸ್ತಾನದಲ್ಲಿ ನೆಲೆಸಿರುವ ಭಯೋತ್ಪಾದಕ, ನ್ಯಾಯಾಲಯವು ಲಷ್ಕರ್-ಎ-ತೈಬಾ (Lashkar-e-Taiba) ಸಂಸ್ಥಾಪಕ ಹಫೀಜ್ ಸಯೀದ್ (terrorist Hafiz Saeed) ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಗೊಳಿಸಲಾಗಿದೆ. ಹಫೀಜ್ ಸಯೀದ್ ಕಾಶ್ಮೀರದಲ್ಲಿ ಉಗ್ರಗಾಮಿ ಚಟುವಟಿಕೆಗಳಿಗೆ ಆರ್ಥಿಕ ನೆರವು, ಶಸ್ತ್ರಾಸ್ತ್ರ ಮತ್ತು ನಿರ್ದೇಶನಗಳನ್ನು ನೀಡುತ್ತಿದ್ದ ಎಂದು ಜಮ್ಮುವಿನ ವಿಶೇಷ ರಾಷ್ಟ್ರೀಯ ತನಿಖಾ ಸಂಸ್ಥೆ ( National Investigation Agency ) ತಿಳಿಸಿದೆ. ಈ ಹಿನ್ನೆಲೆಯಲ್ಲಿ ಹಫೀಜ್ ಮೊಹಮ್ಮದ್ ಸಯೀದ್ ವಿರುದ್ಧ ಹೊಸದಾಗಿ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ.

ಹಫೀಜ್ ಮೊಹಮ್ಮದ್ ಸಯೀದ್ ಪಾಕಿಸ್ತಾನದಲ್ಲಿ ನೆಲೆಸಿದ್ದು, ಅಲ್ಲಿಂದಲೇ ಕಾಶ್ಮೀರದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ ಉಗ್ರರಿಗೆ ಬೆಂಬಲ ನೀಡುತ್ತಿದ್ದನು. ಉಗ್ರರಿಗೆ ಹಣಕಾಸು ಆರ್ಥಿಕ ನೆರವು, ಶಸ್ತ್ರಾಸ್ತ್ರ ಪೂರೈಕೆ ಮತ್ತು ನಿರ್ದೇಶನಗಳನ್ನು ನೀಡುತ್ತಿದ್ದ ಎಂದು ಎನ್‌ಐಎ ತನಿಖೆಯಿಂದ ತಿಳಿದುಬಂದಿದೆ.

ಅಮೆರಿಕ, ಇಸ್ರೇಲ್ ಎದುರು ನಾವು ಮಂಡಿಯೂರುವುದಿಲ್ಲ: ದೆಹಲಿಯಿಂದ ಎಚ್ಚರಿಕೆ ನೀಡಿದ ಇರಾನ್

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ ಅಡಿಯಲ್ಲಿ ಘೋಷಿತ ಉಗ್ರನಾಗಿರುವ ಸಯೀದ್ ನಿಷೇಧಿತ ಉಗ್ರಗಾಮಿ ಸಂಘಟನೆ ಲಷ್ಕರ್-ಎ-ತೈಬಾದ ಸಂಸ್ಥಾಪಕನಾಗಿದ್ದಾನೆ. ಪ್ರಸ್ತುತ ಆತ ಪಾಕಿಸ್ತಾನದಲ್ಲಿದ್ದು, ಬಂಧನದಿಂದ ತಪ್ಪಿಸಿಕೊಳ್ಳಲು ಉದ್ದೇಶಪೂರ್ವಕವಾಗಿ ಕಾನೂನಿನಿಂದ ತಪ್ಪಿಸಿಕೊಳ್ಳುತ್ತಿದ್ದಾನೆ ಎಂದು ತನಿಖಾ ಸಂಸ್ಥೆಯು ನ್ಯಾಯಾಲಯಕ್ಕೆ ತಿಳಿಸಿದೆ.

ಆರೋಪಿ ತಲೆಮರೆಸಿಕೊಂಡಿರುವುದರಿಂದ ಮತ್ತು ಸಾಮಾನ್ಯ ಕಾನೂನು ಪ್ರಕ್ರಿಯೆಗಳ ಮೂಲಕ ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ತನಿಖಾ ಸಂಸ್ಥೆಗೆ ಸಾಧ್ಯವಾಗದಿರುವುದನ್ನು ಗಮನಿಸಿದ ನ್ಯಾಯಾಲಯವು, ಆತನಿಗೆ ಜಾಮೀನು ರಹಿತ ಬಂಧನ ವಾರಂಟ್ ಅನ್ನು ಜಾರಿಗೊಳಿಸಲು ಡಿಐಜಿ, ಎನ್‌ಐಎ ಜಮ್ಮು ಅವರಿಗೆ ಆದೇಶಿಸಿದೆ.

ಪಾಂಡಾಚ್ ಪ್ರದೇಶದ ಗುಜ್ಜರ್ ಟೆಂಟ್‌ನಲ್ಲಿ ಭದ್ರತಾ ತಪಾಸಣೆಯ ವೇಳೆ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶಂಕಿತ ಉಗ್ರನೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹಫೀಜ್ ಮೊಹಮ್ಮದ್ ಸಯೀದ್ ವಿರುದ್ಧ ಪ್ರಕರಣ ದಾಖಲಾಗಿತ್ತು.

ಪ್ರಾಥಮಿಕ ತನಿಖೆ ವೇಳೆ ಆರೋಪಿಯನ್ನು ಶ್ರೀನಗರದ ನಿವಾಸಿ ಮೊಹಮ್ಮದ್ ನಕೀಬ್ ಭಟ್ ಎಂದು ಗುರುತಿಸಲಾಗಿದೆ. ಆತನ ಬಳಿ ಚೀನಾ ನಿರ್ಮಿತ ಗ್ರೆನೇಡ್ ಮತ್ತು 15 ಜೀವಂತ ಗುಂಡುಗಳು ಪತ್ತೆಯಾಗಿದ್ದವು. ಮೊಹಮ್ಮದ್ ನಕೀಬ್ ಭಟ್ ವಿರುದ್ಧ ಯುಎಪಿಎ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಷಡ್ಯಂತ್ರ ಬಯಲು, 10 ಕಡೆ ಬೃಹತ್ ಕಾರ್ಯಾಚರಣೆ: ರಾಮನಗರ ನಕಲಿ ಔಷಧ ಜಾಲ, 6 ರಾಜ್ಯಗಳಲ್ಲಿ ಎಸ್‌ಐಟಿ ದಾಳಿ

ಎರಡು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ ಜಮ್ಮು ಎನ್‌ಐಎ ನ್ಯಾಯಾಲಯವು ಸಯೀದ್ ವಿರುದ್ಧ ಹೊರಡಿಸಿದ ಎರಡನೇ ವಾರಂಟ್ ಇದಾಗಿದೆ. ಇದಕ್ಕೂ ಮೊದಲು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿ ನ್ಯಾಯಾಲಯವು ಆತನ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.