ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Bus AC Blast: ನೋಯ್ಡಾ ಹೆದ್ದಾರಿಯಲ್ಲಿ ದುರಂತ: ಸ್ಲೀಪರ್ ಬಸ್‌ನ ಎಸಿ ಸ್ಫೋಟ; 9 ಮಂದಿ ಸಾವು

ದೆಹಲಿಯಿಂದ ಉತ್ತರ ಪ್ರದೇಶದ ಮಹೋಬಾಕ್ಕೆ ತೆರಳುತ್ತಿದ್ದ ಸ್ಲೀಪರ್ ಬಸ್‌ನ ಎಸಿ ಸ್ಫೋಟಗೊಂಡು 9 ಮಂದಿ ಸಾವನ್ನಪ್ಪಿರುವ ಘಟನೆ ಬುಧವಾರ ತಡರಾತ್ರಿ ಸಂಭವಿಸಿದೆ. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಈ ದುರಂತ ಸಂಭವಿಸಿದೆ. 35 ಪ್ರಯಾಣಿಕರಲ್ಲಿ ಅನೇಕರು ಗಾಯಗೊಂಡಿದ್ದಾರೆ ಎನ್ನಲಾಗಿದೆ.

ನೋಯ್ಡಾ ಹೆದ್ದಾರಿಯಲ್ಲಿ ಬಸ್‌ಗೆ ಬೆಂಕಿ: 9 ಮಂದಿ ಸಾವು

ಸಂಗ್ರಹ ಚಿತ್ರ -

ಉತ್ತರಪ್ರದೇಶ: ಸ್ಲೀಪರ್ ಬಸ್‌ನ (sleeper bus) ಎಸಿ ಸ್ಫೋಟಗೊಂಡು (Bus AC Blast) 9 ಮಂದಿ ಸಜೀವ ದಹನವಾಗಿರುವ ಘಟನೆ ಬುಧವಾರ ತಡರಾತ್ರಿ ಉತ್ತರ ಪ್ರದೇಶದ (Uttar pradesh) ಗ್ರೇಟರ್ ನೋಯ್ಡಾದ (Greater Noida) ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ (Yamuna Expressway) ನಡೆದಿದೆ . ದೆಹಲಿಯಿಂದ ಉತ್ತರ ಪ್ರದೇಶದ ಮಹೋಬಾಕ್ಕೆ ತೆರಳುತ್ತಿದ್ದ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪ್ರಯಾಣದ ವೇಳೆಯಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಈ ಬಸ್ ನಲ್ಲಿ ಒಟ್ಟು 35 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ.

ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ ತಡರಾತ್ರಿ ಸ್ಲೀಪರ್ ಪ್ರವಾಸಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಇದರಿಂದ ಮಹಿಳೆಯೊಬ್ಬರು ಸೇರಿದಂತೆ ಕನಿಷ್ಠ 9 ಮಂದಿ ಸಾವನ್ನಪ್ಪಿದ್ದಾರೆ.

ಪೆಟ್ರೋಲ್ ತುಂಬಿಸಲು ಬಂದ ಬೈಕ್ ಸವಾರನ ಮೇಲೆ ಟ್ರ್ಯಾಕ್ಟರ್ ಹರಿಸಲು ಯತ್ನ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಈ ಕುರಿತು ಮಾಹಿತಿ ನೀಡಿದ ಪೊಲೀಸ್ ಅಧಿಕಾರಿಗಳು, ಬಸ್‌ನ ಹವಾನಿಯಂತ್ರಣ ವ್ಯವಸ್ಥೆಯಲ್ಲಿ ಸಂಭವಿಸಿದ ಸ್ಫೋಟದ ಕಾರಣದಿಂದ ಈ ಬೆಂಕಿ ಕಾಣಿಸಿಕೊಂಡಿತ್ತು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ತಿಳಿಸಿದ್ದಾರೆ.

ಬಸ್ ನ ಎಸಿ ಸ್ಪೋಟಗೊಂಡು ಎಂಜಿನ್‌ನ ಲೂಬ್ರಿಕೇಟಿಂಗ್ ಆಯಿಲ್‌ಗೆ ಬೆಂಕಿ ತಗಲಿದೆ. ಇದರಿಂದ ಬೆಂಕಿ ವೇಗವಾಗಿ ಬಸ್ ಪೂರ್ತಿ ಹರಡಿಕೊಂಡಿದೆ. ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಆದರೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಹೇಳಿದ್ದಾರೆ.



ನೋಯ್ಡಾದಿಂದ ಯಮುನಾ ಎಕ್ಸ್‌ಪ್ರೆಸ್‌ವೇ ಮೂಲಕ ಉತ್ತರ ಪ್ರದೇಶದ ಮಹೋಬಾಕ್ಕೆ ಬಸ್ ಪ್ರಯಾಣಿಸುತ್ತಿದ್ದಾಗ ಈ ಬೆಂಕಿ ಕಾಣಿಸಿಕೊಂಡಿದೆ. ರಾತ್ರಿ ವೇಳೆ ಹೆಚ್ಚಿನ ಪ್ರಯಾಣಿಕರು ನಿದ್ರೆಯಲ್ಲಿದ್ದರು. ಇದರಿಂದ ಏನಾಗುತ್ತಿದೆ ಎನ್ನುವುದು ಅವರ ಅರಿವಿಗೆ ಬರುವಷ್ಟರಲ್ಲಿ ಬೆಂಕಿ ಪೂರ್ತಿ ಬಸ್ ಅನ್ನು ವ್ಯಾಪಿಸಿದೆ. ಅನೇಕ ಪ್ರಯಾಣಿಕರು ಬಸ್‌ನ ಕಿಟಕಿಗಳ ಮೂಲಕ ಹೊರಗೆ ಜಿಗಿದು ಪ್ರಾಣ ಉಳಿಸಿಕೊಳ್ಳಲು ಪ್ರಯತ್ನಿಸಿದರು.

ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ತಂಡ ಮತ್ತು ಜೇವಾರ್ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬಸ್ ಗೆ ವ್ಯಾಪಿಸಿದ್ದ ಬೆಂಕಿಯನ್ನು ನಂದಿಸುವ ಪ್ರಯತ್ನ ಮಾಡಿದರು. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಯಿತು.

ಸಿಎಂ ಯೋಗಿ ಆದಿತ್ಯನಾಥ್ ಸಂತಾಪ

ಘಟನೆ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅಲ್ಲದೇ ಮೃತರ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಸೂಚಿಸಿದ ಅವರು ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಘಟನೆಯಲ್ಲಿ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರವನ್ನು ಘೋಷಿಸಿದರು.

ಮದುವೆ ನಿರಾಕರಿಸಿದಕ್ಕೆ ವಿಡಿಯೊ ಕಾಲ್‌ ಮಾಡಿ ಯುವತಿ ಆತ್ಮಹತ್ಯೆ: ಕರೆ ಕಟ್ ಮಾಡದೇ 23 ನಿಮಿಷ ಲೈವ್ ನೋಡ್ತಾ ನಿಂತ ಪ್ರಿಯಕರ!

ಏನಾಗಿತ್ತು?

ಗಾಢ ನಿದ್ರೆಯಲ್ಲಿದ್ದಾಗ ಯಾರೋ ಒಬ್ಬರು ಬಾಗಿಲು ಬಡಿದರು. ಜನಸಾಗರವೇ ಸ್ಥಳದಲ್ಲಿ ಜಮಾಯಿಸಿತ್ತು. ಯಾವುದೇ ವಸ್ತುಗಳನ್ನು ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಕೇವಲ ಫೋನ್ ಹಿಡಿದುಕೊಂಡು ಬಸ್ ನಿಂದ ಹೊರಬಂದೆ. ಯಾವುದೇ ವಿಷಯ ಸರಿಯಾಗಿ ನೆನಪಿಲ್ಲ. ಒಬ್ಬರನೊಬ್ಬರು ನೂಕುತ್ತಿದ್ದರು. ಸ್ಥಳದಲ್ಲಿ ಸಂಪೂರ್ಣವಾಗಿ ಹೊಗೆ ಆವರಿಸಿತ್ತು ಎಂದು ಪ್ರಯಾಣಿಕರೊಬ್ಬರು ಮಾಧ್ಯಮಗಳ ಮುಂದೆ ಹೇಳಿದ್ದಾರೆ.