ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಎಸಿ ಕಂಪ್ರೆಸರ್ ಸ್ಫೋಟ: ಪಾಕಿಸ್ತಾನ ಆಸ್ಪತ್ರೆಯಲ್ಲಿ ಸುಟ್ಟು ಕರಕಲಾದ 15 ಶಿಶುಗಳು

ಇಸ್ಲಾಮಾಬಾದ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡ 15 ನವಜಾತ ಶಿಶುಗಳು ಸುಟ್ಟು ಕರಕಲಾಗಿರುವ ಬುಧವಾರ ನಡೆದಿದೆ. ಎಸಿ ಕಂಪ್ರೆಸರ್ ಸ್ಫೋಟದಿಂದ ಈ ಘಟನೆ ನಡೆದಿದ್ದು,ಕೇವಲ ಒಂದು ನವಜಾತ ಶಿಶುವನ್ನು ಮಾತ್ರ ರಕ್ಷಿಸಲಾಗಿದೆ. ಬೆಂಕಿ ನಂದಿಸಲಾಗಿದ್ದು, ಸ್ಥಳದಲ್ಲಿ ತುರ್ತು ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

ಸಂಗ್ರಹ ಚಿತ್ರ

ಇಸ್ಲಾಮಾಬಾದ್: ಸರ್ಕಾರಿ ಆಸ್ಪತ್ರೆಯಲ್ಲಿ (Islamabad hospital) ಬೆಂಕಿ (Fire) ಕಾಣಿಸಿಕೊಂಡು 15 ನವಜಾತ ಶಿಶುಗಳು (Infants) ಸುಟ್ಟು ಕರಕಲಾಗಿರುವ ಘಟನೆ ಪಾಕಿಸ್ತಾನದಲ್ಲಿ (Pakistan) ನಡೆದಿದೆ. ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆ (Pakistan Institute of Medical Sciences) ಆಸ್ಪತ್ರೆಯ ಸ್ತ್ರೀರೋಗ ವಾರ್ಡ್‌ನಲ್ಲಿ (gynaecology ward) ಬುಧವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, 15 ನವಜಾತ ಶಿಶುಗಳು ಸಾವನ್ನಪ್ಪಿವೆ. ಅಲ್ಲಿ ಒಟ್ಟು 16 ಶಿಶುಗಳನ್ನು ಇರಿಸಲಾಗಿತ್ತು. ಕೇವಲ ಒಂದು ಮಗುವನ್ನು ಮಾತ್ರ ಬದುಕಿಸಲು ಸಾಧ್ಯವಾಗಿದೆ ಎನ್ನಲಾಗಿದೆ.

ಈ ಕುರಿತು ಸ್ಥಳೀಯ ಮಾಧ್ಯಮವೊಂದು ವರದಿ ಮಾಡಿದೆ. ರಕ್ಷಣಾಧಿಕಾರಿಗಳು ನೀಡಿರುವ ಹೇಳಿಕೆ ಪ್ರಕಾರ ಇಸ್ಲಾಮಾಬಾದ್ ನ ಅತೀ ದೊಡ್ಡ ಸುಸಜ್ಜಿತ ಆಸ್ಪತ್ರೆ ಎಂದು ಖ್ಯಾತಿ ಪಡೆದಿರುವ ಪಾಕಿಸ್ತಾನ ವೈದ್ಯಕೀಯ ವಿಜ್ಞಾನ ಸಂಸ್ಥೆ (ಪಿಐಎಂಎಸ್) ಆಸ್ಪತ್ರೆಯ ಸ್ತ್ರೀರೋಗ ವಾರ್ಡ್‌ನ ನರ್ಸರಿ ವಿಭಾಗದಲ್ಲಿ ಬುಧವಾರ ಬೆಳಗ್ಗೆ 6.45ಕ್ಕೆ ಏರ್ ಕಂಡಿಷನರ್ ಕಂಪ್ರೆಸರ್ ಸ್ಫೋಟಗೊಂಡ ಬೆಂಕಿ ಕಾಣಿಸಿಕೊಂಡಿತ್ತು ಎಂದು ಹೇಳಿದ್ದಾರೆ.

ಪಾಕಿಸ್ತಾನದ ಕಿರಣಾ ಹಿಲ್ಸ್ ಅಣು ಕೇಂದ್ರಕ್ಕೆ ಅಪ್ಪಳಿಸಿದ ಭಾರತೀಯ ಡ್ರೋನ್: ರಹಸ್ಯ ಬಿಚ್ಚಿಟ್ಟ ಮಾಜಿ ಸಿಡಿಎಸ್ ಅನಿಲ್ ಚೌಹಾಣ್

ಇದರ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಇದರಲ್ಲಿ ಅಗ್ನಿಶಾಮಕ ದಳದವರು ಕಿಟಕಿಯ ಗಾಜನ್ನು ಒಡೆದು ಆಸ್ಪತ್ರೆಯ ಮೂರನೇ ಮಹಡಿಯಲ್ಲಿರುವ ನರ್ಸರಿಗೆ ಪ್ರವೇಶಿಸುತ್ತಿರುವುದನ್ನು ಇದರಲ್ಲಿ ಕಾಣಬಹುದಾಗಿದೆ. ಈ ಹಿಂದೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಇದೇ ಆಸ್ಪತ್ರೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ವೈದ್ಯಕೀಯ ಪರೀಕ್ಷೆಗೆ ದಾಖಲಿಸಲಾಗಿತ್ತು.

ಆಸ್ಪತ್ರೆಯ ವಕ್ತಾರೆ ಡಾ. ಅನಿಜಾ ಜಲೀಲ್ ಮಾತನಾಡಿ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಈ ದುರಂತಕ್ಕೆ ಕಾರಣವಾಗಿರಬಹುದು. ಕೆಲವು ಶಿಶುಗಳನ್ನು ರಾತ್ರಿ ಬಿಡುಗಡೆ ಮಾಡಿರಬಹುದು. ಹೀಗಾಗಿ ಸಾವಿನ ನಿಖರವಾದ ಸಂಖ್ಯೆಯನ್ನು ಈಗ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ಆಸ್ಪತ್ರೆಯಲ್ಲಿ ದಾಖಲಾಗಿರುವ ಮಲಿಕ್ ಇಸ್ರಾರ್ ಎಂಬವರು ನೀಡಿರುವ ಮಾಹಿತಿ ಪ್ರಕಾರ ಆಸ್ಪತ್ರೆಯ ನರ್ಸರಿ ವಿಭಾಗದಲ್ಲಿ ದುರಸ್ತಿ ಮತ್ತು ನವೀಕರಣ ಕಾರ್ಯಗಳನ್ನು ನಡೆಸಲಾಗುತ್ತಿದೆ. ಬೆಂಕಿ ಹೊತ್ತಿಕೊಂಡ ಅನಂತರ ರೋಗಿಗಳಿಗೆ ಕಟ್ಟಡವನ್ನು ಖಾಲಿ ಮಾಡುವಂತೆ ತಿಳಿಸಿದರು. ಇದರಿಂದ ಹೆರಿಗೆಯಾದ ಮಹಿಳೆಯರು ಎರಡನೇ ಮಹಡಿಯಿಂದ ಮೆಟ್ಟಿಲುಗಳ ಮೂಲಕ ಕೆಳಗೆ ಬರಬೇಕಾಯಿತು ಎಂದು ಹೇಳಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಆಡಳಿತ ಅಧಿಕಾರಿಗಳು, ತಾಯಿ ಮತ್ತು ಮಕ್ಕಳ ಆರೋಗ್ಯ (ಎಂಸಿಎಚ್) ವಾರ್ಡ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ 14 ನವಜಾತ ಶಿಶುಗಳು ಸಂಪೂರ್ಣವಾಗಿ ಸುಟ್ಟುಹೋಗಿವೆ. ಕನಿಷ್ಠ ಆರು ಅಗ್ನಿಶಾಮಕ ದಳಗಳು ಮತ್ತು ನಾಲ್ಕು ಆಂಬ್ಯುಲೆನ್ಸ್‌ಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಲಾಗಿದೆ. ಘಟನೆಯ ಕುರಿತು ತನಿಖೆಗಾಗಿ ಜಿಲ್ಲಾಡಳಿತ ತನಿಖಾ ಸಮಿತಿಯನ್ನು ರಚಿಸಿದೆ. ಹೆಚ್ಚುವರಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ಸ್ಥಾಪಿಸಲಾಗಿದ್ದು, ಇದು ಕಾರಣ ಮತ್ತು ಘಟನೆ ಹೇಗೆ ಸಂಭವಿಸಿತು ಎಂಬುದನ್ನು ಖಚಿತಪಡಿಸುತ್ತದೆ ಎಂದು ಹೇಳಿದ್ದಾರೆ.

ಎಚ್-1ಬಿ ವೀಸಾಗೆ ಭಾರೀ ಶುಲ್ಕದ ಶಾಕ್; ಭಾರತೀಯ ಉದ್ಯೋಗಿಗಳಿಗೆ ಅಮೆರಿಕದಲ್ಲಿ ಹೊಸ ಆತಂಕ

ಪಾಕಿಸ್ತಾನಿ ಪ್ರಧಾನಿ ಶೆಹಬಾಜ್ ಷರೀಫ್ ಅವರು ದುರಂತಕ್ಕೆ ಸಂತಾಪ ಸೂಚಿಸಿದ್ದು, ತಕ್ಷಣ ತನಿಖೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿಸಿದ್ದಾರೆ. ಸೆನೆಟ್ ಅಧ್ಯಕ್ಷ ಸೈಯದ್ ಯೂಸುಫ್ ರಾಜಾ ಗಿಲಾನಿ ಈ ಕುರಿತು ಹೇಳಿಕೆ ನೀಡಿದ್ದು, ಇಂತಹ ಘಟನೆಗಳನ್ನು ತಡೆಗಟ್ಟಲು ಆಸ್ಪತ್ರೆಗಳಲ್ಲಿ ಪರಿಣಾಮಕಾರಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿರಬೇಕು. ಸುರಕ್ಷತಾ ಕ್ರಮಗಳಲ್ಲಿ ಯಾವುದೇ ನಿರ್ಲಕ್ಷ್ಯ ಸ್ವೀಕಾರಾರ್ಹವಲ್ಲ. ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ಭವಿಷ್ಯದಲ್ಲಿ ಇಂತಹ ದುರಂತಗಳನ್ನು ತಡೆಗಟ್ಟಲು ಪರಿಣಾಮಕಾರಿ ಮತ್ತು ಪ್ರಾಯೋಗಿಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ.

ವಿದ್ಯಾ ಇರ್ವತ್ತೂರು

View all posts by this author