ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Road Accident: ದ್ವಿಚಕ್ರ ವಾಹನ–ಕಾರಿನ ನಡುವೆ ಅಪಘಾತ: ಬಾಲಕ ಸ್ಥಳದಲ್ಲೇ ಮೃತ

ಅಪಘಾತದಲ್ಲಿ ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ಹಫಾನ್ ಎಂಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಡಿಕಲ್‌ ಶಾಪ್‌ಗೆ ಮಾತ್ರೆ ತರಲು ಸ್ನೇಹಿತನ ದ್ವಿಚಕ್ರ ವಾಹನದಲ್ಲಿ ರಯಾನ್ ಹಾಗೂ ಹಫಾನ್ ತೆರಳುತ್ತಿದ್ದ ವೇಳೆ, ಎದುರಿನಿಂದ ಬಂದ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ದ್ವಿಚಕ್ರ ವಾಹನ–ಕಾರಿನ ನಡುವೆ ಅಪಘಾತ

-

Profile
Ashok Nayak Sep 15, 2026 9:09 PM

ಗೌರಿಬಿದನೂರು: ನಗರದ ಅಂಬೇಡ್ಕರ್ ವೃತ್ತದಲ್ಲಿ ಸೋಮವಾರ ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಅಜಾದ್ ನಗರದ ರಯಾನ್ (8) ಎಂಬ ಬಾಲಕ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಅಪಘಾತದಲ್ಲಿ ದ್ವಿಚಕ್ರ ವಾಹನ ಚಾಲನೆ ಮಾಡುತ್ತಿದ್ದ ಹಫಾನ್ ಎಂಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: Mandya Accident: ಮಂಡ್ಯದಲ್ಲಿ ಭೀಕರ ಅಪಘಾತ; ಬೈಕ್‌ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ತಂದೆ-ತಾಯಿ, ಮಗಳ ಸಾವು!

ಮೆಡಿಕಲ್‌ ಶಾಪ್‌ಗೆ ಮಾತ್ರೆ ತರಲು ಸ್ನೇಹಿತನ ದ್ವಿಚಕ್ರ ವಾಹನದಲ್ಲಿ ರಯಾನ್ ಹಾಗೂ ಹಫಾನ್ ತೆರಳುತ್ತಿದ್ದ ವೇಳೆ, ಎದುರಿನಿಂದ ಬಂದ ಕಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.