ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಚಿತ್ರದುರ್ಗದ ಬಳಿ ಭೀಕರ ಅಪಘಾತ; ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು

Road Accident: ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ಭೀಕರ ಅಪಘಾತ; ಮೂವರು ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ಸಾವು

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Mar 15, 2026 1:55 PM

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ (Road Accident) ಹೆದ್ದಾರಿ 150ಎರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್‌ಗಳು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಹೆಗ್ಗೆರೆ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ಕಾರು ಮತ್ತು ಲಾರಿಯ ನಡುವೆ ಭೀಕರ ಡಿಕ್ಕಿ ಸಂಭವಿಸಿದೆ. ಮೃತರನ್ನು ಮಂಜುನಾಥ್, ಅಂಬರೀಷ್ ಮತ್ತು ಸಚಿನ್ ಎಂದು ಗುರುತಿಸಲಾಗಿದೆ.

ಇದೇ ವೇಳೆ ಕಾರಿನಲ್ಲಿ ಇದ್ದ ಪಿಎಸ್‌ಐ ಈಶ್ವರ್ ಹಾಗೂ ರಿಸರ್ವ್ ಸಬ್‌ ಇನ್ಸ್‌ಪೆಕ್ಟರ್ ಮಹಾಂತೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಎಲ್ಲರೂ ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ಪರಿಣಾಮ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿದು ಐಮಂಗಲ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂಬಂಧ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾರಿಗೆ ಬಸ್ ಅಪಘಾತ: 11 ಮಂದಿಗೆ ಗಾಯ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಹನ್ನೊಂದು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಖಾನಾಪುರ ತಾಲೂಕಿನ ನಂದಗಡದ ಸರಕಾರಿ ಆಸ್ಪತ್ರೆ ಎದುರುಗಡೆ ಬಸ್ಸೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಹನ್ನೊಂದು ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಬಸ್ಸು ಖಾನಾಪುರದಿಂದ ಬೀಡಿಗೆ ತೆರಳುತ್ತಿತ್ತು. ನಂದಗಡದ ಸರಕಾರಿ ಆಸ್ಪತ್ರೆ ಎದುರುಗಡೆ ಬರುತ್ತಿದ್ದಾಗ, ಏಕಾಏಕಿ ರಸ್ತೆಗೆ ಅಡ್ಡ ಬಂದ ಕಾರನ್ನು ತಪ್ಪಿಸಲು ಯತ್ನಿಸಿದ ಬಸ್‌ ಚಾಲಕನ ನಿಯಂತ್ರಣ ತಪ್ಪಿ, ಬಸ್ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.