ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Physical Abuse: ಹೋಳಿ ಹಬ್ಬದ ಪಾರ್ಟಿಯಲ್ಲಿ ಸೀರಿಯಲ್‌ ನಟಿಗೆ ಲೈಂಗಿಕ ಕಿರುಕುಳ; ಸಹ ನಟನ ಮೇಲೆ ದೂರು

ಮಂಗಳವಾರ ನಡೆದ ಹೋಳಿ ಪಾರ್ಟಿಯಲ್ಲಿ ತನ್ನ ಸಹನಟ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಕಿರುತರೆ ನಟಿಯೊಬ್ಬರು ಆರೋಪಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಸ್ತುತ ಮನರಂಜನಾ ಚಾನೆಲ್‌ನಲ್ಲಿ ಕೆಲಸ ಮಾಡುತ್ತಿರುವ 29 ವರ್ಷದ ನಟಿ, ತನ್ನ ಸಹೋದ್ಯೋಗಿ ಕುಡಿದಿದ್ದು, ಬಲವಂತವಾಗಿ ಬಣ್ಣ ಬಳಿದಿದ್ದಾರೆ ಎಂದು ದೂರಿನಲ್ಲಿ ಹೇಳಿಕೊಂಡಿದ್ದಾರೆ.

ಸಾಂದರ್ಭಿಕ ಚಿತ್ರ

ಮುಂಬೈ: ಮಂಗಳವಾರ ನಡೆದ ಹೋಳಿ ಪಾರ್ಟಿಯಲ್ಲಿ ತನ್ನ ಸಹನಟ ಲೈಂಗಿಕ ಕಿರುಕುಳ (Physical Abuse) ನೀಡಿದ್ದಾರೆ ಎಂದು ಕಿರುತರೆ ನಟಿಯೊಬ್ಬರು ಆರೋಪಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಸ್ತುತ ಮನರಂಜನಾ ಚಾನೆಲ್‌ನಲ್ಲಿ ಕೆಲಸ ಮಾಡುತ್ತಿರುವ 29 ವರ್ಷದ ನಟಿ, ತನ್ನ ಸಹೋದ್ಯೋಗಿ ಕುಡಿದಿದ್ದು, ಬಲವಂತವಾಗಿ ಬಣ್ಣ ಬಳಿದಿದ್ದಾರೆ ಎಂದು ದೂರಿನಲ್ಲಿ ಹೇಳಿಕೊಂಡಿದ್ದಾರೆ. ತಮ್ಮ ಚಾನೆಲ್‌ ಅವರು ಆಯೋಜಿಸಿದ್ದ ಪಾರ್ಟಿಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಿದ್ದಾರೆ. ಆರೋಪಿ ನಟ ಆಕೆಯ ಪದೇ ಪದೇ ಆಕ್ಷೇಪ ವ್ಯಕ್ತಪಡಿಸಿದರೂ ಸಹ ಬಲವಂತವಾಗಿ ಬಣ್ಣ ಬಳಿದಿದ್ದಾನೆ ಎಂದು ಆರೋಪಿಸಲಾಗಿದೆ.

ನಟಿಯು ಸಹ ನಟನ ವಿರುದ್ಧ ದೂರು ನೀಡಿದ್ದು, ದೂರಿನಲ್ಲಿ ತಾನು ಆತನಿಂದ ಬಚಾವ್‌ ಆಗಲು ಅಂಗಡಿಯೊಂದರ ಹಿಂದೆ ಅಡಗಿಕೊಂಡಿದ್ದೆ. ತನ್ನ ಮುಖವನ್ನು ಮುಚ್ಚಿಕೊಂಡಿದ್ದೆ ಎಂದು ಹೇಳಿದ್ದಾರೆ. ಆತ ತನ್ನನ್ನು ಬಲವಂತವಾಗಿ ಹಿಡಿದು ಅವಳ ಕೆನ್ನೆಗಳಿಗೆ ಬಣ್ಣ ಬಳಿದು 'ನಾನು ನಿನ್ನನ್ನು ಪ್ರೀತಿಸುತ್ತೇನೆ' ಮತ್ತು 'ನಿನ್ನನ್ನು ನನ್ನಿಂದ ಯಾರು ರಕ್ಷಿಸುತ್ತಾರೆಂದು ನೋಡೋಣ' ಎಂದು ಹೇಳಲು ಪ್ರಾರಂಭಿಸಿದನು. ನಂತರ ಆತ ತನ್ನನೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಹಾಗೂ ನನ್ನನ್ನು ತಳ್ಳಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಪಾರ್ಟಿಯಲ್ಲಿ ಹಾಜರಿದ್ದ 30 ವರ್ಷದ ಸಹನಟ ಕುಡಿದ ಅಮಲಿನಲ್ಲಿದ್ದ ಮತ್ತು ಕಾರ್ಯಕ್ರಮದಲ್ಲಿ ತನ್ನ ಮತ್ತು ಇತರ ಮಹಿಳೆಯರೊಂದಿಗೆ ಅನುಚಿತವಾಗಿ ವರ್ತಿಸಿದ್ದ ಎಂದು ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ನಾನು ಈ ಬಗ್ಗೆ ನನ್ನ ಸ್ನೇಹಿತರ ಬಳಿ ಹೇಳಿಕೊಂಡೆ. ನಂತರ ಅವರು ಅವನ ಬಳಿ ಮಾತನಾಡಿದಾಗ ಅವರ ಮೇಲೆಯೂ ಹಲ್ಲೆಗೆ ಯತ್ನಿಸಿದ್ದಾನೆ. ಈ ಘಟನೆಯಿಂದ ನಾನು ಮಾನಸಿಕವಾಗಿ ಸಂಪೂರ್ಣವಾಗಿ ಕುಗ್ಗಿ ಹೋಗಿದ್ದೇನೆ ಎಂದು ನಟಿ ಹೇಳಿದ್ದಾರೆ. ಪೊಲೀಸರು ಬಿಎನ್‌ಎಸ್‌ನ ಸೆಕ್ಷನ್ 75(1)(i) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಮತ್ತು ಆರೋಪಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಕರೆಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ಸುದ್ದಿಯನ್ನೂ ಓದಿ: Physical Assault: ಕರ್ನಲ್ ಪತ್ನಿಗೆ ಲೈಂಗಿಕ ಕಿರುಕುಳ ಆರೋಪ: ಸೇನಾ ಬ್ರಿಗೇಡಿಯರ್ ವಿರುದ್ಧ ಎಫ್‌ಐಆರ್‌

ಇತ್ತೀಚೆಗೆ ಕೇರಳದ ನಟಿಯೊಬ್ಬರು ಉದ್ಯಮಿಯೊಬ್ಬರ ಮೇಲೆ ದೂರು ನೀಡಿದ್ದು ಪೊಲೀಸರು ಉದ್ಯಮುಯನ್ನು ಬಂಧಿಸಿದ್ದರು. ಲಯಾಳಂ ನಟಿ ಹನಿ ರೋಸ್ ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಕೇರಳದ ಖ್ಯಾತ ಉದ್ಯಮಿ ಬಾಬಿ ಚೆಮ್ಮನೂರ್ ರನ್ನು ಪೊಲೀಸರು ಬಂಧಿಸಿದ್ದರು. ನಟಿ ನೀಡಿದ್ದ ದೂರಿನ ಆಧಾರದ ಮೇಲೆ ದಾಖಲಾಗಿದ್ದ ಜಾಮೀನು ರಹಿತ ಪ್ರಕರಣಗಳ ಹಿನ್ನಲೆಯಲ್ಲಿ ವಯನಾಡಿನಲ್ಲಿ ಉದ್ಯಮಿ ಬಾಬಿ ಚೆಮ್ಮನೂರ್ ರನ್ನು ಕೇರಳ ಪೊಲೀಸರ ವಿಶೇಷ ತನಿಖಾ ತಂಡ ಬಂಧಿಸಿತ್ತು.

Vishakha Bhat Heggar

View all posts by this author