Actor Darshan: ಸೋಶಿಯಲ್ ಮೀಡಿಯಾದಲ್ಲಿ ಶಿಕ್ಷಕಿಗೆ ಅತ್ಯಾಚಾರದ ಬೆದರಿಕೆ; 12 ಮಂದಿ ದರ್ಶನ್ ಫ್ಯಾನ್ಸ್ ವಿರುದ್ಧ ಕೇಸ್
ನಟಿ ರಮ್ಯಾ, ಸೋನು ಶೆಟ್ಟಿ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಕಮೆಂಟ್ ಮತ್ತು ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ನಟ ದರ್ಶನ್ ಅಭಿಮಾನಿಗಳ ವಿರುದ್ಧ ಈ ಹಿಂದೆ ನಟ ದರ್ಶನ್ ಅವರ ಅಭಿಮಾನಿಗಳ ಮೇಲೆ ಪ್ರಕರಣ ದಾಖಲಾಗಿತ್ತು. ಇದೀಗ ಮತ್ತೆ ದರ್ಶನ್ ಅವರ 12 ಮಂದಿ ಅಭಿಮಾನಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

-

ಬೆಂಗಳೂರು: ನಟಿ ರಮ್ಯಾ, ಸೋನು ಶೆಟ್ಟಿ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಅಶ್ಲೀಲ ಕಮೆಂಟ್ ಮತ್ತು ಬೆದರಿಕೆ ಹಾಕಿದ್ದ (Actor Darshan) ಪ್ರಕರಣದಲ್ಲಿ ನಟ ದರ್ಶನ್ ಅಭಿಮಾನಿಗಳ ವಿರುದ್ಧ ಈ ಹಿಂದೆ ನಟ ದರ್ಶನ್ ಅವರ ಅಭಿಮಾನಿಗಳ ಮೇಲೆ ಪ್ರಕರಣ ದಾಖಲಾಗಿತ್ತು. ಇದೀಗ ಮತ್ತೆ ದರ್ಶನ್ ಅವರ 12 ಮಂದಿ ಅಭಿಮಾನಿಗಳ ವಿರುದ್ಧ ಪ್ರಕರಣ ದಾಖಲಾಗಿದೆ. ಅಶ್ಲೀಲ ಕಮೆಂಟ್, ಅತ್ಯಾಚಾರ ಬೆದರಿಕೆ ಆರೋಪದಲ್ಲಿ ಎಫ್ಐಆರ್ ದಾಖಲಾಗಿದೆ. ಶಿಕ್ಷಕಿಯೊಬ್ಬರ ವಿರುದ್ಧ ಅಶ್ಲೀಲ ಕಮೆಂಟ್, ಅತ್ಯಾಚಾರ ಬೆದರಿಕೆ ಒಡ್ಡಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಜಿತ್ ಆನಂದ್ ಹೆಗಡೆ ಎಂಬುವವರು ಬೆಂಗಳೂರಿನ ವಿಜಯನಗರದ ಗೋವಿಂದರಾಜನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅವರು ನೀಡಿದ ದೂರಿನ ಪ್ರಕಾರ, ಸೆಪ್ಟೆಂಬರ್ 24ರಂದು ಅವರ ಪತ್ನಿಯನ್ನು ಗುರಿಯಾಗಿಸಿಕೊಂಡು ‘ಖದರ್ ಕನ್ನಡಿಗ’ ಎಂಬ ಫೇಸ್ ಬುಕ್ ಪೇಜ್‌ನಲ್ಲಿ ಅಶ್ಲೀಲವಾಗಿ ಸಂದೇಶ ಪ್ರಕಟಿಸಲಾಗಿದೆ. ಹೆತ್ತವರ ಅನುಮತಿ ಇಲ್ಲದೆ ಪುಟ್ಟ ಮಕ್ಕಳ ಫೋಟೋಗಳನ್ನು ಕೂಡ ಬಳಸಿಕೊಂಡು, ಗುರುತು ಮರೆ ಮಾಚದೆ ಕಿಡಿಗೇಡಿಗಳು ಪೋಸ್ಟ್ ಮಾಡಿರುತ್ತಾರೆ ಎಂದು ಉಲ್ಲೇಖಿಸಲಾಗಿದೆ.
ಅಜಿತ್ ಅವರ ಪತ್ನಿ ಸರ್ಕಾರಿ ಶಾಲೆ ಶಿಕ್ಷಕಿಯಾಗಿದ್ದು, ದರ್ಶನ್ ಅಭಿಮಾನಿಗಳು ಅತ್ಯಾಚಾರದ ಬೆದರಿಕೆಯನ್ನು ಹಾಕಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಪತ್ನಿಯ ಭದ್ರತೆ ಹಾಗೂ ಖಾಸಗಿತನಕ್ಕೆ ಧಕ್ಕೆ ಬಂದಿದ್ದು ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಅಜಿತ್ ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು 12 ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Kerala High Court: ಅರುಂಧತಿ ರಾಯ್ ಪುಸ್ತಕದ ಬಗ್ಗೆ ದೂರು: ಅರ್ಜಿದಾರರಿಗೆ ಹೈಕೋರ್ಟ್ ತರಾಟೆ
ನಟಿ ರಮ್ಯಾ ಅವರು ನಟ ದರ್ಶನ್ ಫ್ಯಾನ್ಸ್ ಅಶ್ಲೀಲವಾಗಿ ಮೆಸೇಜ್ ಕಳುಹಿಸಿದ್ದರ ಸಂಬಂಧ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಭೇಟಿಯಾಗಿ ದೂರು ನೀಡಿದ್ದರು. ಈ ದೂರನ್ನು ಕೇಂದ್ರ ವಿಭಾಗದ ಸೆನ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ನಟಿ ರಮ್ಯಾ ದೂರಿನನ್ವಯ ಕೇಂದ್ರ ವಿಭಾಗದ ಸೆನ್ ಠಾಣೆಯಲ್ಲಿ ಪ್ರಮೋದ್ ಗೌಡ ಸೇರಿದಂತೆ 43 ಅಕೌಂಟ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು.