Actress Ranya Rao Case: ನಟಿ ರನ್ಯಾ ರಾವ್‌ಗೆ ಇನ್ನೊಂದು ವರ್ಷ ಜೈಲೇ ಗತಿ
actress ranya rao: ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು. ರನ್ಯಾ ಸೇರಿದಂತೆ 3 ಆರೋಪಿಗಳು 1 ವರ್ಷ ಜಾಮೀನು ಕೋರಿ ಅರ್ಜಿ ಸಲ್ಲಿಸುವಂತಿಲ್ಲ ಎಂದು ಕಾಫಿಪೋಸಾ ಅಡ್ವೈಸರಿ ಬೋರ್ಡ್‌ನಿಂದ ಆದೇಶ ಹೊರಡಿಸಲಾಗಿದೆ.

ರನ್ಯಾ ರಾವ್ -

ಬೆಂಗಳೂರು : ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್‌ಗೆ 1 ವರ್ಷ ಜೈಲೇ ಗತಿಯಾಗಿದೆ. ಆರೋಪಿಗಳು 1 ವರ್ಷ ಜಾಮೀನು ಕೋರಿ ಅರ್ಜಿ ಸಲ್ಲಿಸುವಂತಿಲ್ಲ ಎಂದು ಕಾಫಿಪೋಸಾ ಅಡ್ವೈಸರಿ ಬೋರ್ಡ್‌ನಿಂದ ಆದೇಶ ಹೊರಡಿಸಲಾಗಿದೆ. ಹೀಗಾಗಿ ರನ್ಯಾ ರಾವ್ ಸೇರಿದಂತೆ ಮೂವರು ಆರೋಪಿಗಳಿಗೆ 1 ವರ್ಷ ಜೈಲೇ ಗತಿಯಾಗಿದೆ.
ಕಾಫಿಪೋಸಾ ಅಡ್ವೈಸರಿ ಬೋರ್ಡ್‌ನಿಂದ ಡಿಆರ್‌ಐಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಡಿಆರ್‌ಐಯಿಂದ ಜೈಲು ಅಧೀಕ್ಷಕರಿಗೆ ಮಾಹಿತಿ ರವಾನಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿತ್ತು. ರನ್ಯಾ ರಾವ್ ಬಳಿ ಒಟ್ಟು 14.8 ಕೆಜಿ ಚಿನ್ನ ಸಿಕ್ಕಿರುವ ಮಾಹಿತಿ ಇದ್ದು ರಾಜ್ಯದ ಇತಿಹಾಸದಲ್ಲಿ ಅತಿ ದೊಡ್ಡ ಚಿನ್ನದ ಅಕ್ರಮ ಸಾಗಣೆ ಪ್ರಕರಣ ಇದು ಎನ್ನಲಾಗಿದೆ. ರನ್ಯಾ ರಾವ್ ಡಿಜಿಪಿ ಡಾ. ಕೆ. ರಾಮಚಂದ್ರರಾವ್ ಅವರ ಮಲಮಗಳಾಗಿದ್ದಾರೆ.
ಇದನ್ನೂ ಓದಿ: Ranya Rao: ಚಿನ್ನ ಸ್ಮಗ್ಲಿಂಗ್ ಕೇಸ್: ರನ್ಯಾ ರಾವ್‌ಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು