ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ಮಗ ಐಫೋನ್‌ ತಗೊಂಡಿದ್ದನ್ನು ಪ್ರಶ್ನಿಸಿದ ತಂದೆ, ಆತ್ಮಹತ್ಯೆ ಮಾಡಿಕೊಂಡ ಮಗ

ಯುವಕ ಇಎಂಐ ಮೂಲಕ 70 ಸಾವಿರ ರೂ. ಬೆಲೆಯ ಐಫೋನ್ ಖರೀದಿಸಿದ್ದ. ಈ ವಿಚಾರ ಗೊತ್ತಾಗಿ ಇಷ್ಟೊಂದು ಹಣ ಕೊಟ್ಟು ಯಾಕೆ ಮೊಬೈಲ್ ತಗೊಂಡಿದ್ದೀಯಾ? ಕಡಿಮೆ ದರದ ಮೊಬೈಲ್ ತೆಗೆದುಕೊಳ್ಳಬೇಕಿತ್ತು ಎಂದು ತಂದೆ ತಿಳಿವಳಿಕೆ ಹೇಳಿದ್ದರು.

ಐಫೋನ್‌ ತಗೊಂಡಿದ್ದನ್ನು ಪ್ರಶ್ನಿಸಿದ ತಂದೆ, ಆತ್ಮಹತ್ಯೆ ಮಾಡಿಕೊಂಡ ಮಗ

ಮೃತ ಮುಸ್ತಫೀಸ್ ಅಬ್ದುಲ್ ರಶೀದ್ ಶೇಖ್

ಹರೀಶ್‌ ಕೇರ ಹರೀಶ್‌ ಕೇರ Apr 4, 2025 11:05 AM

ಬೆಳಗಾವಿ: ಐಫೋನ್ (iPhone) ತಗೊಂಡಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ನೊಂದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Self harming) ಶರಣಾದ ಘಟನೆ ಬೆಳಗಾವಿಯ (Belagavi news) ನ್ಯೂ ವೈಭವ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಮುಸ್ತಫೀಸ್ ಅಬ್ದುಲ್ ರಶೀದ್ ಶೇಖ್ (24) ಎಂದು ಗುರುತಿಸಲಾಗಿದೆ. ಯುವಕ ಇಎಂಐ ಮೂಲಕ 70 ಸಾವಿರ ರೂ. ಬೆಲೆಯ ಐಫೋನ್ ಖರೀದಿಸಿದ್ದ. ಈ ವಿಚಾರ ಗೊತ್ತಾಗಿ ಇಷ್ಟೊಂದು ಹಣ ಕೊಟ್ಟು ಯಾಕೆ ಮೊಬೈಲ್ ತಗೊಂಡಿದ್ದೀಯಾ? ಕಡಿಮೆ ದರದ ಮೊಬೈಲ್ ತೆಗೆದುಕೊಳ್ಳಬೇಕಿತ್ತು ಎಂದು ತಂದೆ ತಿಳಿವಳಿಕೆ ಹೇಳಿದ್ದರು.

ಇದೇ ವಿಚಾರಕ್ಕೆ ಮನನೊಂದ ಯುವಕ ಮನೆಯ ರೂಮ್‍ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊದಲೇ ದುಬಾರಿ ಬೆಲೆಯ ಐಫೋನ್‌, ಇದೀಗ ಒಂದು ಜೀವವನ್ನೇ ತೆಗೆದು ಈ ಕುಟುಂಬಕ್ಕೆ ಮತ್ತಷ್ಟು ದುಬಾರಿಯಾಗಿದೆ.

ನ್ಯಾಯಾಧೀಶರ ಮನೆಯಲ್ಲಿಯೇ ಚಿನ್ನಾಭರಣ ಕಳವು!

ಬೀದರ್: ನ್ಯಾಯಾಧೀಶರ ಮನೆಯಿಂದಲೇ ಸುಮಾರು 7 ಲಕ್ಷ ರೂ.ಗಿಂತಲೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ಎಗರಿಸಿದ್ದಾರೆ. ಈ ಕಳವು ಘಟನೆ ಬೀದರ್ (Bidar) ನಗರದ ಜನವಾಡ ರಸ್ತೆಯಲ್ಲಿರುವ (Janawad Road) ನ್ಯಾಯಾಧೀಶರ ವಸತಿ ಗೃಹದಲ್ಲಿ ನಡೆದಿದೆ. ಬೀದರ್‌ನ 2ನೇ ಹೆಚ್ಚುವರಿ ಸಿವಿಲ್ ಮತ್ತು 2ನೇ ಜೆಎಂಎಫ್‌ಸಿ (JMFC) ನ್ಯಾಯಾಧೀಶರಾದ ಎಂ.ಡಿ.ಶೇಜ್ ಚೌಟಾಯಿ ವಸತಿ ಗೃಹದಲ್ಲಿ ಕಳ್ಳತನವಾಗಿದೆ.

ಕುಟುಂಬದ ಸದಸ್ಯರೆಲ್ಲರು ಸೇರಿ ಕೊಪ್ಪಳಕ್ಕೆ ಹೋಗಿದ್ದಾಗ ಒಳನುಗ್ಗಿದ ಕಳ್ಳರು ಗುಂಪು ಬರೋಬ್ಬರಿ 7,61,800 ರೂ. ಮೌಲ್ಯದ ಚಿನ್ನಾಭರಣವನ್ನು ಕದ್ದು, ಪರಾರಿಯಾಗಿದ್ದಾರೆ. ನ್ಯಾಯಾಧೀಶರ ಮನೆಯಲ್ಲಿ ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನ್ಯಾಯಾಧೀಶರು ಈ ಕುರಿತು ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇದನ್ನೂ ಓದಿ: Road Accident: ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ; ನಾಲ್ವರ ಸಾವು