ಕೃಷಿ ಹೊಂಡ ವಿಚಾರ: ಎರಡು ಗುಂಪುಗಳ ನಡುವೆ ಮಾರಾಮಾರಿ
ದ್ವಾರಪಲ್ಲಿ ಗ್ರಾಮದ ನಾರಾಯಣಮ್ಮ ಕೋಂ ಲೇಟ್ ಹನುಮಪ್ಪ(60 ವರ್ಷ) ರವರ ಗ್ರಾಮದ ಸರ್ವೆ ನಂ:13 ರ 1-25 ಗುಂಟೆ ಜಮೀನಿನಲ್ಲಿ ಕೃಷಿ ಹೊಂಡವಿದ್ದು ಪಕ್ಕದ ಜಮೀನವರಾದ ಕದಿರಪ್ಪ ಎಂಬುವರು ಗುಂಪು ಕಟ್ಟಿಕೊಂಡು ಬಂದು ಹಲ್ಲೆ ಮಾಡಿದ್ದಾರೆ ಎಂದು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾರಾಯಣಮ್ಮ ಎಂಬುವರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ


ಚಿಂತಾಮಣಿ: ಕೃಷಿಹೊಂಡ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿ ಆಸ್ಪತ್ರೆಗೆ ಸೇರಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದ್ವಾರಪಲ್ಲಿ ಗ್ರಾಮದಲ್ಲಿ ನಡೆದಿದೆ.
ದ್ವಾರಪಲ್ಲಿ ಗ್ರಾಮದ ನಾರಾಯಣಮ್ಮ ಕೋಂ ಲೇಟ್ ಹನುಮಪ್ಪ(60 ವರ್ಷ) ರವರ ಗ್ರಾಮದ ಸರ್ವೆ ನಂ:13 ರ 1-25 ಗುಂಟೆ ಜಮೀನಿನಲ್ಲಿ ಕೃಷಿ ಹೊಂಡವಿದ್ದು ಪಕ್ಕದ ಜಮೀನವರಾದ ಕದಿರಪ್ಪ ಎಂಬುವರು ಗುಂಪು ಕಟ್ಟಿಕೊಂಡು ಬಂದು ಹಲ್ಲೆ ಮಾಡಿದ್ದಾರೆ ಎಂದು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾರಾಯಣಮ್ಮ ಎಂಬುವರು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ: Crime: 'ದೃಶ್ಯಂ' ಕಥೆಯಿಂದ ಸ್ಫೂರ್ತಿ; ಇನ್ಶೂರೆನ್ಸ್ ಹಣಕ್ಕಾಗಿ ಅತ್ತೆಯನ್ನೇ ಕೊಂದ ಅಳಿಯ!
ಇದೆ ಕೃಷಿ ಹೊಂಡ ವಿಚಾರವಾಗಿ ಎರಡು ಗುಂಪುಗಳ ನಡುವೆ ಮಾರ ಮಾರಿಯಾಗಿ ಎರಡೂ ಗುಂಪುಗಳು ಸಹ ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದು ಎರಡು ಗುಂಪಿನವರು ಗ್ರಾಮಾಂತರ ಠಾಣೆಯಲ್ಲಿ ದೂರನ್ನು ನೀಡಿದ್ದಾರೆ.
ಇನ್ನೂ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಎರಡು ಗುಂಪುಗಳಿಂದ ಹೇಳಿಕೆ ಪಡೆದುಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.