ಚಿಕ್ಕಬಳ್ಳಾಪುರ: ಮದುವೆಯಾಗುವುದಾಗಿ ನಂಬಿಸಿ ಸಂಬಂಧ ಬೆಳೆಸಿ, ಹಣ ಹಾಗೂ ಚಿನ್ನ ಪಡೆದು ಬಳಿಕ ವಂಚಿಸಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಕೆಎಸ್‌ಆರ್‌ಟಿಸಿ(KSRTC) ಬಸ್ ಕಂಡಕ್ಟರ್ ವಿರುದ್ಧ ಚಿಕ್ಕಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಚಿತ್ರದುರ್ಗ ಮೂಲದ ಕಾವೇರಿ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ದಾದಿಯಾಗಿ ಕೆಲಸ ಮಾಡು ತ್ತಿದ್ದು, ತರಬೇತಿಗಾಗಿ ಮೈಸೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬಸ್‌ನಲ್ಲಿ ಬಾಗೇಪಲ್ಲಿ ಮೂಲದ ಕೆಎಸ್‌ಆರ್‌ಟಿಸಿ ಕಂಡಕ್ಟರ್ ಶ್ರೀನಾಥ್ ಪರಿಚಯವಾಗಿದ್ದ. ಕಳೆದ ಒಂದು ವರ್ಷದಿಂದ ಮದುವೆ ಯಾಗುವುದಾಗಿ ನಂಬಿಸಿ ತನ್ನೊಂದಿಗೆ ಸಂಬಂಧ ಬೆಳೆಸಿದ್ದಲ್ಲದೆ, ಕಷ್ಟದಲ್ಲಿರುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಹಾಗೂ ಚಿನ್ನ ಪಡೆದಿದ್ದಾರೆ ಎಂದು ಕಾವೇರಿ ಆರೋಪಿಸಿದ್ದಾರೆ.
ಇದನ್ನೂ ಓದಿ: Cheating Case: ₹5 ಕೋಟಿ ವಂಚನೆ ಆರೋಪ; ಬಾಲಿವುಡ್ ನಟರು ಸೇರಿ 22 ಜನರ ವಿರುದ್ಧ ಪ್ರಕರಣ ದಾಖಲು
ಶ್ರೀನಾಥ್‌ಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದರೂ ಈ ವಿಚಾರವನ್ನು ಮುಚ್ಚಿಟ್ಟು ತನ್ನನ್ನು ಮದುವೆಯಾಗುವುದಾಗಿ ನಂಬಿಸಿದ್ದರು. ಬಳಿಕ ಮದುವೆ ವಿಚಾರ ಪ್ರಸ್ತಾಪಿಸಿದಾಗ ಸಂಬಂಧ ಕಡಿದುಕೊಂಡಿದ್ದಾರೆ ಎಂದು ದೂರಿದ್ದಾರೆ.
ನ್ಯಾಯ ಕೇಳಲು ಬಾಗೇಪಲ್ಲಿಗೆ ತೆರಳಿದ್ದ ಸಂದರ್ಭದಲ್ಲಿ ತಮ್ಮ ಮೇಲೆ ದಲಿತ ಮುಖಂಡರೊಬ್ಬ ರಿಂದ ಹಲ್ಲೆ ಮಾಡಿಸಲಾಗಿದೆ ಎಂಬ ಆರೋಪವನ್ನೂ ಕಾವೇರಿ ಮಾಡಿದ್ದಾರೆ.
ವಂಚನೆ ಹಾಗೂ ಹಲ್ಲೆ ಆರೋಪಗಳ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣದ ಸತ್ಯಾಸತ್ಯತೆ ಕುರಿತು ತನಿಖೆ ನಡೆಸಬೇಕಿದೆ. ತನ್ನನ್ನು ನಂಬಿಸಿ ವಂಚಿಸಿರುವ ಆರೋಪಿ ತನ ವಿರುದ್ಧ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕು ಎಂದು ಕಾವೇರಿ ಒತ್ತಾಯಿಸಿ ದ್ದಾರೆ.