ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Stabbing Case: ಕ್ಷುಲಕ ಕಾರಣಕ್ಕೆ ಸಹಪಾಠಿಗೆ ಚಾಕುವಿನಿಂದ ಇರಿದ ಬಾಲಕ

ಕಳೆದ ಮಂಗಳವಾರ ಖಾಸಗಿ ಶಾಲೆಯೊಂದರಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗೆ ಎಂಟನೇ ತರಗತಿ ವಿದ್ಯಾರ್ಥಿ ಚಾಕುವಿನಿಂದ ಇರಿದಿದ್ದ. ಇದರ ಬೆನ್ನಲ್ಲೇ ಇದೀಗ ಗುಜರಾತ್ ನ ಬಾಲಸಿನೋರ್‌ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿ ತನ್ನ ಸಹಪಾಠಿಗೆ ಇರಿದಿದ್ದಾನೆ. ಈ ಕುರಿತು ಪ್ರಕರಣ ದಾಖಲಾಗಿದೆ.

ಬಾಲಸಿನೋರ್‌: ಅಹಮದಾಬಾದ್ ಶಾಲೆಯಲ್ಲಿ (Ahmedabad School) ಕಳೆದ ಮಂಗಳವಾರ ಹತ್ತನೇ ತರಗತಿ ವಿದ್ಯಾರ್ಥಿಯನ್ನು ಎಂಟನೇ ತರಗತಿ ವಿದ್ಯಾರ್ಥಿ ಕೊಲೆ ಮಾಡಿರುವ ಘಟನೆ ನಡೆದ ಬೆನ್ನಲ್ಲೇ ಇದೀಗ ಗುಜರಾತ್‌ ಶಾಲೆಯೊಂದರಲ್ಲಿ (Gujarat School) ಇಂತಹ ಇನ್ನೊಂದು ಘಟನೆ ನಡೆದಿದೆ. 8ನೇ ತರಗತಿಯ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗೆ ಚಾಕುವಿನಿಂದ (Stabbe) ಇರಿದಿದ್ದು, ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಗುಜರಾತ್‌ನ ಬಾಲಸಿನೋರ್‌ನಲ್ಲಿ ಈ ಘಟನೆ ನಡೆದಿದೆ. ಶಾಲಾ ಸಮಯದ ಬಳಿಕ ಇವರಿಬ್ಬರ ಮಧ್ಯೆ ಯಾವುದೋ ವಿಷಯಕ್ಕೆ ಗಲಾಟೆಯಾಗಿದೆ ಎನ್ನಲಾಗಿದೆ.

ಅಹಮದಾಬಾದ್‌ನ ಸೆವೆಂತ್-ಡೇ ಅಡ್ವೆಂಟಿಸ್ಟ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮಂಗಳವಾರ ಹತ್ತನೇ ತರಗತಿಯ ನಯನ್ ಸಂತಾನಿ ಎಂಬ ಬಾಲಕನ ಮೇಲೆ ಎಂಟನೇ ತರಗತಿ ವಿದ್ಯಾರ್ಥಿ ದಾಳಿ ನಡೆಸಿದ್ದ. ಗಂಭೀರ ಗಾಯಗೊಂಡ ಬಾಲಕ ಬಳಿಕ ಸಾವನ್ನಪ್ಪಿದ್ದ.

ಇದೀಗ ಬಾಲಸಿನೋರ್ ನಗರದ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬನಿಗೆ ಆತನ ಸಹಪಾಠಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ. ಇದರಿಂದ ಬಾಲಕ ಗಂಭೀರ ಗಾಯಗೊಂಡಿದ್ದಾನೆ. ಶಾಲಾ ಸಮಯದ ಅನಂತರ ಇಬ್ಬರ ನಡುವೆ ಜಗಳವಾಗಿದ್ದು ಇದಕ್ಕೆ ಕಾರಣ ಎನ್ನಲಾಗಿದೆ.

ಈ ಕುರಿತು ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. ಈ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಪೊಲೀಸರು, ಈ ಇಬ್ಬರು ಹುಡುಗರು ಜಗಳವಾಡಿದರು. ಅದು ಹಿಂಸಾತ್ಮಕವಾಯಿತು. ಕೆಲವು ಕ್ಷಣಗಳ ಅನಂತರ ಅವರಲ್ಲಿ ಒಬ್ಬ ಚಾಕುವಿನಿಂದ ಇನ್ನೊಬ್ಬನಿಗೆ ಇರಿದಿದ್ದು, ಅವನ ಹೊಟ್ಟೆ ಮತ್ತು ಕೈಗೆ ಗಂಭೀರ ಗಾಯಗಳಾಗಿವೆ. ಗಾಯಾಳು ವಿದ್ಯಾರ್ಥಿಯನ್ನು ಕೂಡಲೇ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ದಾಳಿಯ ಹಿಂದಿನ ಉದ್ದೇಶ ಸ್ಪಷ್ಟವಾಗಿಲ್ಲ ಮತ್ತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಅಹಮದಾಬಾದ್ ಶಾಲೆಯಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿದ್ಯಾರ್ಥಿಯು ತನ್ನ ಸ್ನೇಹಿತನೊಂದಿಗೆ ಮಾಡಿರುವ ಇನ್‌ಸ್ಟಾಗ್ರಾಮ್ ಚಾಟ್‌ ಗಳ ಸ್ಕ್ರೀನ್ ಶಾಟ್ ಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿದೆ. ಆದರೆ ಈ ಬಗ್ಗೆ ಪೊಲೀಸರು ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.

ಇದನ್ನೂ ಓದಿ: K.C.Veerendra Puppy: ಅಕ್ರಮ ಹಣ ವರ್ಗಾವಣೆ ಕೇಸ್‌; ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ಇಡಿ ವಶಕ್ಕೆ

ಈ ಪ್ರಕರಣಕ್ಕೆ ಸಂಬಂಧಿಸಿ ಗುಜರಾತ್ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಅಹಮದಾಬಾದ್ ಮೂಲದ ಖಾಸಗಿ ಶಾಲೆಯಿಂದ ವರದಿ ಕೇಳಿದೆ.

ವಿದ್ಯಾ ಇರ್ವತ್ತೂರು

View all posts by this author