ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಬಿಹಾರದಲ್ಲಿ ಮತ್ತೊಂದು ಆಘಾತಕಾರಿ ಘಟನೆ: ದಾರಿಯಲ್ಲಿ ಸಾಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ

ಹಳ್ಳಿಯ ರಸ್ತೆಯೊಂದರಲ್ಲಿ ಸಾಗುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆ ಬಿಹಾರದಲ್ಲಿ ನಡೆದಿದೆ. ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಮಾಹಿತಿ ತಿಳಿದ ತಕ್ಷಣವೇ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. ಈ ಘಟನೆ ಸಮಸ್ತಿಪುರದ ಜಗತ್‌ಸಿಂಗ್‌ಪುರದಲ್ಲಿ ನಡೆದಿದ್ದು, ಆರೋಪಿಗಳನ್ನು ಅದೇ ಗ್ರಾಮದವರು ಎಂದು ಗುರುತಿಸಲಾಗಿದೆ.

ಸಾಂದರ್ಭಿಕ ಚಿತ್ರ

ಬಿಹಾರ: ಯುವತಿಯೊಬ್ಬಳು ರಸ್ತೆಯಲ್ಲಿ ಸಾಗುತ್ತಿದ್ದಾಗ ಯುವಕರ ಗುಂಪೊಂದು ಲೈಂಗಿಕ ಕಿರುಕುಳ ನೀಡಿರುವ ಘಟನೆ ಬಿಹಾರದಲ್ಲಿ (bihar crime) ನಡೆದಿದೆ. ಇದರ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ (viral news) ಆಗಿದೆ. ಮಾಹಿತಿ ತಿಳಿದ ತಕ್ಷಣವೇ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ. ಸಮಸ್ತಿಪುರದ ಜಗತ್‌ಸಿಂಗ್‌ಪುರ ಎಂಬ ಗ್ರಾಮದಲ್ಲಿ ಯುವಕರ ಗುಂಪೊಂದು ದಾರಿಯಲ್ಲಿ ಸಾಗುತ್ತಿದ್ದ ಹದಿ ಹರೆಯದ ಯುವತಿಗೆ ಕಿರುಕುಳವನ್ನು (physically abuse) ನೀಡಿದೆ. ಇದರ ವಿಡಿಯೊ ಬುಧವಾರ ಬೆಳಕಿಗೆ ಬಂದಿದೆ. ಇದಕ್ಕಿಂತ ಮೊದಲು ಸಮಸ್ತಿಪುರದಿಂದ ಸುಮಾರು 131 ಕಿ.ಮೀ. ದೂರದ ಜಮುಯಿಯಲ್ಲಿ ಇಂತಹ ಮತ್ತೊಂದು ಘಟನೆ ನಡೆದಿತ್ತು. ಹೀಗಾಗಿ ಪೊಲೀಸರು ಈಗ ಕಟ್ಟು ನಿಟ್ಟಿನ ಎಚ್ಚರಿಕೆ ವಹಿಸಲು ಮುಂದಾಗಿದ್ದಾರೆ.

ಕೆಲವು ದಿನಗಳ ಹಿಂದೆ ಜಮುಯಿಯಲ್ಲಿ ನಡೆದ ಲೈಂಗಿಕ ಕಿರುಕುಳದ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ ಬಳಿಕ ಇದೀಗ ಸಮಸ್ತಿಪುರದಲ್ಲಿ ಇಂತಹ ಮತ್ತೊಂದು ಆಘಾತಕಾರಿ ಘಟನೆ ನಡೆದಿದೆ.

ಸೌಜನ್ಯ ಹತ್ಯೆಯ ನೈಜ ಹಂತಕ ಸಿಗಲು ಸಾಧ್ಯವೇ..?

ಬೈಕ್ ಗಳಲ್ಲಿದ್ದ ಕೆಲವು ಯುವಕರ ಗುಂಪೊಂದು ಹಳ್ಳಿಯ ರಸ್ತೆಯಲ್ಲಿ ಸಾಗುತ್ತಿದ್ದ ಯುವತಿ ಮತ್ತು ಆಕೆಯೊಂದಿಗೆ ಇದ್ದ ಯುವಕನನ್ನು ಸುತ್ತುವರಿದು ಆಕೆಯನ್ನು ನಿಂದಿಸಿ, ಲೈಂಗಿಕ ಕಿರುಕುಳ ನೀಡಿದ್ದಾರೆ. ಇದರ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ತಕ್ಷಣವೇ ಪೊಲೀಸರು ಕ್ರಮಕ್ಕೆ ಮುಂದಾಗಿದ್ದಾರೆ.



ಯುವತಿ ಮತ್ತು ಯುವಕ ಫೋಟೋ ತೆಗೆಯಲು ರಸ್ತೆಯಲ್ಲಿ ನಿಂತಿದ್ದಾಗ ಸ್ಥಳೀಯ ಕೆಲವು ವ್ಯಕ್ತಿಗಳು ಅಲ್ಲಿಗೆ ಬಂದು ಯುವತಿಯನ್ನು ನಿಂದಿಸಿ, ಲೈಂಗಿಕವಾಗಿ ಕಿರುಕುಳ ನೀಡಿದರು. ಆರೋಪಿಗಳು ಜಗತ್‌ಸಿಂಗ್‌ಪುರ ಗ್ರಾಮದವರು ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿ ಅರವಿಂದ್ ಪ್ರತಾಪ್ ಸಿಂಗ್, ಇದೊಂದು ಗಂಭೀರ ವಿಷಯ. ಆರೋಪಿಗಳನ್ನು ಬಿಡುವುದಿಲ್ಲ. ವ್ಯಕ್ತಿಗಳ ಗುರುತು ಮತ್ತು ಘಟನೆ ನಡೆದ ನಿಖರ ಸ್ಥಳವನ್ನು ಪರಿಶೀಲಿಸಲಾಗಿದೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.

ಪೆಟ್ರೋಲ್ ತುಂಬಿಸಲು ಬಂದ ಬೈಕ್ ಸವಾರನ ಮೇಲೆ ಟ್ರ್ಯಾಕ್ಟರ್ ಹರಿಸಲು ಯತ್ನ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕೆಲವು ದಿನಗಳ ಹಿಂದೆ ಜಮುಯಿಯಲ್ಲಿ 10ನೇ ತರಗತಿಯ ಬಾಲಕ, ಬಾಲಕಿಗೆ ಕಿರುಕುಳ ನೀಡಿದ್ದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು. ಘಟನೆಗೆ ಸಂಬಂಧಿಸಿ ಐವರನ್ನು ಬಂಧಿಸಲಾಗಿತ್ತು. ಜಮುಯಿಯ ಪ್ರಕರಣದಲ್ಲಿ ಪುರುಷರ ಗುಂಪೊಂದು ಬಾಲಕ, ಬಾಲಕಿಯನ್ನು ಸುತ್ತುವರಿದು ಕಿರುಕುಳ ನೀಡಿದ್ದರು ಎಂದು ಆರೋಪಿಸಲಾಗಿದೆ.

ವಿದ್ಯಾ ಇರ್ವತ್ತೂರು

View all posts by this author