ಐಪಿಎಲ್​ ಸುನಿತಾ ವಿಲಿಯಮ್ಸ್​ ವಿದೇಶ ಫ್ಯಾಷನ್​ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ಮಂಡ್ಯದಲ್ಲಿ ರೈಲಿಗೆ ತಲೆಕೊಟ್ಟು ಎಎಸ್‌ಐ ಪುತ್ರಿ ಆತ್ಮಹತ್ಯೆ

ಸುಹಾನಾ ಮೈಸೂರಿನಲ್ಲಿ ಪ್ರಥಮ ವರ್ಷದ ಬಿಎ ವ್ಯಾಸಂಗ ಓದುತ್ತಿದ್ದು, ಕಾಲೇಜು ಮುಗಿಸಿಕೊಂಡು ಮನೆಗೆ ಬಂದು ಬಂದೀಗೌಡ ಬಡಾವಣೆ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸುಹಾನಾ ಅವರ ಕುಟುಂಬಿಕರು ಹಾಗೂ ಸಹಪಾಠಿಗಳನ್ನು ವಿಚಾರಿಸಲಾಗುತ್ತಿದೆ.

ಮಂಡ್ಯದಲ್ಲಿ ರೈಲಿಗೆ ತಲೆಕೊಟ್ಟು ಎಎಸ್‌ಐ ಪುತ್ರಿ ಆತ್ಮಹತ್ಯೆ

ಮೃತ ಸುಹಾನಾ

ಹರೀಶ್‌ ಕೇರ ಹರೀಶ್‌ ಕೇರ Mar 22, 2025 5:10 PM

ಮಂಡ್ಯ: ಮಂಡ್ಯದಲ್ಲಿ (Mandya news) ಘೋರ ಘಟನೆ ನಡೆದಿದ್ದು, ಒಬ್ಬಳು ಯುವತಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ. ಈಕೆ ಎಎಸ್ಐ (ASI) ಮಗಳು ಎಂದು ಗೊತ್ತಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಮಂಡ್ಯದ ಸಶಸ್ತ್ರ ಮೀಸಲು ಪಡೆಯ ಎಎಸ್‌ಐ ಅನ್ಸರ್ ಪಾಷಾ ಅವರ ಮಗಳು ಸುಹಾನಾ (19) ಎಂದು ಗುರುತಿಸಲಾಗಿದೆ. ಮಂಡ್ಯದ ಬಂದೀಗೌಡ ಬಡಾವಣೆ ಸಮೀಪ ಈ ದುರ್ಘಟನೆ (Crime News) ನಡೆದಿದೆ.

ಸುಹಾನಾ ಮೈಸೂರಿನಲ್ಲಿ ಪ್ರಥಮ ವರ್ಷದ ಬಿಎ ವ್ಯಾಸಂಗ ಓದುತ್ತಿದ್ದು, ಕಾಲೇಜು ಮುಗಿಸಿಕೊಂಡು ಮನೆಗೆ ಬಂದು ಬಂದೀಗೌಡ ಬಡಾವಣೆ ಬಳಿ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಸುಹಾನಾ ಅವರ ಕುಟುಂಬಿಕರು ಹಾಗೂ ಸಹಪಾಠಿಗಳನ್ನು ವಿಚಾರಿಸಲಾಗುತ್ತಿದೆ.

ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ (Bengaluru news) ಮತ್ತೊಂದು ದುರಂತ ಸಂಭವಿಸಿದ್ದು, ಕಾಲೇಜಿನಲ್ಲಿ ಆತ್ಮಹತ್ಯೆ (Self harming) ಮಾಡಿಕೊಳ್ಳುತ್ತಿರುವ ವಿದ್ಯಾರ್ಥಿಗಳ ಸರಣಿಗೆ (student) ಮತ್ತೊಬ್ಬಾಕೆಯ ಸೇರ್ಪಡೆಯಾಗಿದೆ. ಕಾಲೇಜಿನ ನಾಲ್ಕನೇ ಮಹಡಿಯಿಂದ ಜಿಗಿದು ಕೇರಳ ಮೂಲದ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ (Crime news) ಶರಣಾಗಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ನಡೆದಿದೆ.

ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಯನ್ನು ಕೇರಳ ರಾಜ್ಯದ ಕಲ್ಲಿಕೋಟೆ ಮೂಲದ ಲಕ್ಷ್ಮೀ ಮಿತ್ರಾ (21) ಎಂದು ಗುರುತಿಸಲಾಗಿದೆ. ಲಕ್ಷ್ಮೀ ಹೆಸರಘಟ್ಟ ರಸ್ತೆಯ ಪ್ರತಿಷ್ಟಿತ ಕಾಲೇಜಿನಲ್ಲಿ ಈಕೆ ಬಿಸಿಎ 6 ನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದಳು ಎಂದು ಹೇಳಲಾಗುತ್ತಿದೆ. ಕಾಲೇಜಿನ 4ನೇ ಮಹಡಿಯಿಂದ ಕೆಳಗೆ ಹಾರಿ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೆಳಗೆ ಬಿದ್ದ ತಕ್ಷಣ ಗಂಭೀರವಾಗಿ ಗಾಯಗೊಂಡಿದ್ದ ಆಕೆಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗಿರಲಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದು, ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Merchant navy officer murder: ಹತ್ಯೆಗೂ ಮುನ್ನ ಮಗಳ ಹುಟ್ಟುಹಬ್ಬದಂದು ಪತಿ ಕೈ ಹಿಡಿದು ಮಸ್ತ್‌ ಸ್ಟೆಪ್‌ ಹಾಕಿದ್ದ ಮುಸ್ಕಾನ್‌ ; ವಿಡಿಯೋ ವೈರಲ್‌