ಕಚೇರಿಯಲ್ಲಿ ಮಹಿಳಾ ಉದ್ಯೋಗಿಗಳಿಗೆ ಲೈಂಗಿಕ ಕಿರುಕುಳ ಆರೋಪ: ಟೀಂ ಲೀಡ್ ಸೇರಿ 6 ಜನ ಟೆಕ್ಕಿಗಳ ಬಂಧನ
Crime News: ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಬಹುರಾಷ್ಟ್ರೀಯ ಕಂಪನಿಯೊಂದರ ಟೀಮ್ ಲೀಡರ್ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಒಂಬತ್ತು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ -
ಮುಂಬೈ, ಏ.9: ಮಹಾರಾಷ್ಟ್ರದ (Maharashtra) ನಾಸಿಕ್‌ನಲ್ಲಿರುವ ಬಹುರಾಷ್ಟ್ರೀಯ ಕಂಪನಿಯೊಂದರ ಟೀಮ್ ಲೀಡರ್ ಸೇರಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳಾ ಉದ್ಯೋಗಿಗಳು ನೀಡಿದ ಲೈಂಗಿಕ ಕಿರುಕುಳದ (Assault allegations) ಆರೋಪದ ಮೇಲೆ ಆರು ಮಂದಿಯನ್ನು ಬಂಧಿಸಲಾಗಿದೆ.
ಕಳೆದ ನಾಲ್ಕು ವರ್ಷಗಳಿಂದ ಈ ಕಿರುಕುಳ ನಡೆಯುತ್ತಿದೆ ಎಂಬ ದೂರು ಸ್ವೀಕರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಒಂಬತ್ತು ಪ್ರಕರಣಗಳು ದಾಖಲಾಗಿವೆ.
ಆರೋಪಿಗಳಲ್ಲಿ ಒಬ್ಬನು ಮದುವೆಯಾಗುವುದಾಗಿ ಸುಳ್ಳು ಭರವಸೆ ನೀಡಿ ಉದ್ಯೋಗಿಯೊಂದಿಗೆ ಪದೇ ಪದೇ ದೈಹಿಕ ಸಂಬಂಧ ಬೆಳೆಸುತ್ತಿದ್ದನು ಎನ್ನಲಾಗಿದೆ. ಆರೋಪಿಯು ಉದ್ಯೋಗಿಗಳಲ್ಲಿ ಒಬ್ಬರನ್ನು ಅನುಚಿತವಾಗಿ ಸ್ಪರ್ಶಿಸಿದ್ದಾನೆ. ಅಷ್ಟೇ ಅಲ್ಲ, ಆಕೆಯ ವೈಯಕ್ತಿಕ ಮತ್ತು ವೈವಾಹಿಕ ಜೀವನದ ಬಗ್ಗೆ ನಾಚಿಕೆಗೇಡಿನ ಮಾತುಗಳನ್ನಾಡಿದ್ದಾನೆ ಎಂದು ಹೇಳಲಾಗಿದೆ.
ವಿಮಾನದಲ್ಲಿ ನಟಿಗೆ ಕಿರುಕುಳ: ಪ್ರಯಾಣಿಕನ ಅಸಭ್ಯ ವರ್ತನೆ ಬಗ್ಗೆ ಸೋಶಿಯಲ್ ಮೀಡಿಯಾ ಪೋಸ್ಟ್ ಮೂಲಕ ಆಕ್ರೋಶ
ಈ ಘಟನೆಗಳ ಬಗ್ಗೆ ದೂರುದಾರರು ಕಂಪನಿಯ ಮುಖ್ಯ ಅಧಿಕಾರಿಗೆ ಪದೇ ಪದೇ ಮೌಖಿಕ ದೂರುಗಳನ್ನು ಸಲ್ಲಿಸಿದಾಗಲೂ, ಅವರು ಕಿರುಕುಳದ ಬಗ್ಗೆ ದೂರುಗಳನ್ನು ಗಮನಕ್ಕೆ ತೆಗೆದುಕೊಳ್ಳಲು ವಿಫಲರಾದರು. ಬದಲಾಗಿ, ಅವರು ಅವರ ಕೃತ್ಯಗಳಿಗೆ ಪರಿಣಾಮಕಾರಿಯಾಗಿ ಪ್ರಚೋದನೆ ನೀಡಿದರು ಎಂದು ಆರೋಪಿಸಲಾಗಿದೆ.
ಆಕೆಯ ದೇಹದ ಬಗ್ಗೆಯೂ ಅವರು ಅಶ್ಲೀಲ ಹೇಳಿಕೆಗಳನ್ನು ನೀಡಿದ್ದಾರೆ. ಆರೋಪಿ ಪುರುಷ ಉದ್ಯೋಗಿಗಳಲ್ಲಿ ಒಬ್ಬ ನಮಾಜ್ ಮಾಡಲು ಒತ್ತಾಯಿಸಿದ್ದಾನೆ. ಮಹಿಳೆಯ ಧರ್ಮವನ್ನು ಅವಮಾನಿಸಿದ್ದಾನೆ. ಹೀಗಾಗಿ ಐದು ಆರೋಪಿಗಳನ್ನು ಬಂಧಿಸಲಾಗಿದ್ದು, ಮರುದಿನ ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಅವರನ್ನು ಏಪ್ರಿಲ್ 10 ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆರೋಪಿಗಳಲ್ಲಿ ಒಬ್ಬ ನ್ಯಾಯಾಂಗ ಬಂಧನದಲ್ಲಿದ್ದಾನೆ.
ಪೊಲೀಸ್ ಆಯುಕ್ತ ಸಂದೀಪ್ ಕಾರ್ಣಿಕ್ ಅವರ ಸೂಚನೆಯ ಮೇರೆಗೆ ಪ್ರಕರಣಗಳ ತನಿಖೆಗಾಗಿ ಎಸಿಪಿ (ಅಪರಾಧ) ಸಂದೀಪ್ ಮಿಟ್ಕೆ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಿರುಕುಳ ಅನುಭವಿಸಿದ್ದರೆ ಇತರ ಮಹಿಳೆಯರು ಕೂಡ ಮುಂದೆ ಬಂದು ದೂರು ನೀಡುವಂತೆ ಪೊಲೀಸರು ಒತ್ತಾಯಿಸಿದರು. 9923323311 ಗೆ ವಾಟ್ಸಾಪ್ ಮೂಲಕ ಸಂಪರ್ಕಿಸುವಂತೆ ತಿಳಿಸಿದ್ದಾರೆ.
ಗೆಳತಿಯರೊಂದಿಗೆ ದೈಹಿಕ ಸಂಬಂಧ ಹೊಂದಲು ಒತ್ತಾಯ: ಪತ್ನಿ ವಿರುದ್ಧ ದೂರು ದಾಖಲಿಸಿದ ಪತಿ
ಮಹಿಳೆಯ ಅಂಗಾಂಗ ಮುಟ್ಟಿ ಲೈಂಗಿಕ ಕಿರುಕುಳ
ಕಚೇರಿಯ ಮಹಿಳಾ ಸಿಬ್ಬಂದಿಯನ್ನು ತಬ್ಬಿಕೊಂಡು ಮುತ್ತು ಕೊಟ್ಟು, ಅಂಗಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ನನ್ನು ಅರೆಸ್ಟ್ ಮಾಡಲಾಗಿದೆ. ನೊಂದ ಸಂತ್ರಸ್ತೆ ಉಪ್ಪಾರಪೇಟೆ ಠಾಣೆಯಲ್ಲಿ ರಿಜಿಸ್ಟ್ರಾರ್ ಡಾ.ಮಲ್ಲು ವಿರುದ್ಧ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ರಿಜಿಸ್ಟ್ರಾರ್ ಬಂಧನವಾಗಿದೆ.
ಗಾಂಧಿನಗರದಲ್ಲಿರುವ ನರ್ಸಿಂಗ್ ಕೌನ್ಸಿಲ್ ಕಚೇರಿಯಲ್ಲಿ ಕೆಲಸ ಮಾಡುವಾಗ ಮಹಿಳೆಗೆ ಡಾ.ಮಲ್ಲು ಲೈಂಗಿಕ ಕಿರುಕುಳ ನೀಡಿದ್ದಾರೆ. ಅಲ್ಲದೇ ಅಂಗಾಂಗ ಮುಟ್ಟಿ, ಎಳೆದಾಡಿ ದೌರ್ಜನ್ಯ ಎಸಗಿದ್ದಾರೆ. ಕಾರಿನ ಬಳಿ ಬಲವಂತವಾಗಿ ತಬ್ಬಿಕೊಂಡು ಚುಂಬಿಸಲು ಹಾಗೂ ಬಲವಂತವಾಗಿ ಕಾರು ಹತ್ತಿಸಿಕೊಳ್ಳಲು ಯತ್ನಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದರು.