ಬೆಂಗಳೂರು, ಫೆ.14 : ರಾಜ್ಯದಲ್ಲೊಬ್ಬ ಲಕ್ಕಿ ಭಾಸ್ಕರ್ ಸಿನಿಮಾ ಶೈಲಿಯಲ್ಲಿ ಬ್ಯಾಂಕ್ ದರೋಡೆ (bank robbery) ಮಾಡಿದ್ದಾನೆ. ಅಸಿಸ್ಟೆಂಟ್ ಮ್ಯಾನೇಜರ್‌ನಿಂದಲೇ ನಾಲ್ಕು ಕೋಟಿ ರೂ. ಮೌಲ್ಯದ ಚಿನ್ನಾಭರಣ (gold theft case) ಕಳ್ಳತನವಾಗಿದೆ. ಇಂಡಿಯನ್ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ಕುಮಾರ್ ಎಂಬಾತ ಆನ್‌ಲೈನ್ ಜೂಜಿನ (Online gambling) ಚಟದಿಂದ ಈ ಕೃತ್ಯ ಎಸಗಿದ್ದಾನೆ.
ಇಂಡಿಯನ್ ಬ್ಯಾಂಕ್‌ನಲ್ಲಿ ಅಡಮಾನ ಇಟ್ಟಿದ್ದವರ ಚಿನ್ನವನ್ನು ಕಿರಣ್ ಕದ್ದಿದ್ದಾನೆ. ಬೆಂಗಳೂರಿನ ಗಿರಿನಗರದ ಇಂಡಿಯನ್ ಬ್ಯಾಂಕ್ ಶಾಖೆಯಲ್ಲಿ ಕಳ್ಳತನವಾಗಿದೆ. ಆನ್ ಲೈನ್ ಬೆಟ್ಟಿಂಗ್ ದಂಧೆ ಮಾಡುತ್ತಿದ್ದ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ಅದಕ್ಕಾಗಿ ನಾಲ್ಕು ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದು ಆನ್ಲೈನ್ ಜೂಜಾಟಕ್ಕೆ ಬಳಸಿದ್ದಾನೆ. ಸದ್ಯ ಆರೋಪಿ ಕಿರಣ್ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕುಡಿದ ಅಮಲಿನಲ್ಲಿ ಕಲ್ಲು ಎತ್ತಿಹಾಕಿ ಗೆಳೆಯನನ್ನೇ ಕೊಂದರು!
ಶಿವಮೊಗ್ಗ: ಶಿವಮೊಗ್ಗದಲ್ಲಿ (Shivamogga crime news) ಭೀಕರ ಕೊಲೆಯೊಂದು ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರೇ ಸೇರಿ ತಮ್ಮ ಗೆಳೆಯನನ್ನೇ ಕಲ್ಲು ಎತ್ತಿಹಾಕಿ ಬರ್ಬರ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗ ತಾಲೂಕಿನ ಗಾಜನೂರಿನಲ್ಲಿ ನಡೆದಿದೆ. ಶ್ರೀನಿವಾಸ (36) ಎಂಬುವವರೇ ಕೊಲೆಯಾದ ದುರ್ದೈವಿ. ಶಿವಮೊಗ್ಗ ನಗರದ ಹೊಸಮನೆ ನಿವಾಸಿಯಾಗಿದ್ದ ಶ್ರೀನಿವಾಸ್ ಕಳೆದ ಒಂದು ವರ್ಷದಿಂದ ಗಾಜನೂರಿನಲ್ಲಿ ನೆಲೆಸಿದ್ದು, ಗಾರೆ ಕೆಲಸ ಮಾಡಿಕೊಂಡಿದ್ದರು.
ನಿನ್ನೆ ರಾತ್ರಿ ಸ್ನೇಹ ಬಾರ್ ಎದುರಿಗಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಂಗಳದಲ್ಲಿ ಶ್ರೀನಿವಾಸ್ ಮತ್ತು ಅವರ ಇಬ್ಬರು ಸ್ನೇಹಿತರು ಸೇರಿ ಮದ್ಯದ ಪಾರ್ಟಿ ಆಯೋಜಿಸಿದ್ದರು. ಈ ವೇಳೆ ಅಮಲಿನಲ್ಲಿದ್ದ ಸ್ನೇಹಿತರ ನಡುವೆ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯ ಶುರುವಾಗಿದೆ.
242 ಆನ್‌ಲೈನ್ ಗೇಮಿಂಗ್, ಬೆಟ್ಟಿಂಗ್ ವೆಬ್‌ಸೈಟ್‌ಗಳಿಗೆ ನಿಷೇಧ; ಕೇಂದ್ರ ಸರ್ಕಾರದ ಮಹತ್ವದ ಆದೇಶ
ಗಲಾಟೆ ವಿಕೋಪಕ್ಕೆ ಹೋದಾಗ ಸ್ನೇಹಿತರಿಬ್ಬರು ಸೇರಿ ಶ್ರೀನಿವಾಸ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ, ಆತನ ಕಾಲು ಟ್ವಿಸ್ಟ್ ಮಾಡಿ, ಪ್ಯಾಂಟ್ ಬಿಚ್ಚಿ ಅರೆನಗ್ನಗೊಳಿಸಿ, ತಲೆಯ ಮೇಲೆ ಕಲ್ಲು ಎತ್ತಿಹಾಕಿ ವಿಕೃತವಾಗಿ ಕೊಲೆ ಮಾಡಿದ್ದಾರೆ. ಕೃತ್ಯದ ಬಳಿಕ ಹಂತಕರಿಬ್ಬರು ಸ್ಥಳದಿಂದ ಪರಾರಿಯಾಗಿದ್ದರು. ಇಂದು ಬೆಳಿಗ್ಗೆ ಶ್ರೀನಿವಾಸ್ ಹೆಣವಾಗಿ ಬಿದ್ದಿರುವುದನ್ನು ಕಂಡು ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಶಿವಮೊಗ್ಗ ಎಸ್ಪಿ ನಿಖಿಲ್ ಬಿ. ಹಾಗೂ ತುಂಗಾ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ನನ್ನ ತಮ್ಮನನ್ನು ಅವನ ಸ್ನೇಹಿತರೇ ಕೊಂದಿದ್ದಾರೆ, ಅವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಮೃತನ ಸಹೋದರಿ ಸುಮಾ ಕಣ್ಣೀರಿಡುತ್ತಾ ಆಗ್ರಹಿಸಿದ್ದಾರೆ. ಶ್ರೀನಿವಾಸ್‌ನನ್ನು ವಿವಸ್ತ್ರಗೊಳಿಸಿ ಹತ್ಯೆ ಮಾಡಿರುವುದು ಪ್ರಕರಣಕ್ಕೆ ಬೇರೆಯದೇ ಆಯಾಮ ನೀಡಿದ್ದು, ಹಂತಕರ ಪತ್ತೆಗಾಗಿ ಪೊಲೀಸರು ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿ, ಇದೀಗ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
Double Murder: ಬೆಂಗಳೂರಿನಲ್ಲಿ ಟೆಕ್ಕಿಯಿಂದ ಹಣಕಾಸಿಗಾಗಿ ತಂದೆ- ತಾಯಿಯ ಹತ್ಯೆ