ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಚುನಾವಣೆಗೆ ಮುನ್ನ ನಿಷೇಧಿತ ಉಲ್ಫಾ ಉಗ್ರರಿಂದ ದಾಳಿ: ಅಸ್ಸಾಂನಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗೆ ಗಾಯ

ULFA Militants Attack: ಏಪ್ರಿಲ್ 9ರಂದು ನಡೆಯಲಿರುವ ಅಸ್ಸಾಂ ವಿಧಾನಸಭಾ ಚುನಾವಣೆಗೆ ಮುನ್ನ, ಶಂಕಿತ ಭಯೋತ್ಪಾದಕರು ತಿನ್ಸುಕಿಯಾ ಜಿಲ್ಲೆಯ ಪೊಲೀಸ್ ಕಮಾಂಡೋ ಶಿಬಿರದ ಮೇಲೆ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಟಿನ್ಸುಕಿಯಾ ಜಿಲ್ಲೆಯ ಜಗುನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಸಾಂದರ್ಭಿಕ ಚಿತ್ರ

ದಿಸ್ಪುರ್, ಮಾ. 22: ಏಪ್ರಿಲ್ 9ರಂದು ನಡೆಯಲಿರುವ ಅಸ್ಸಾಂ (Assam) ವಿಧಾನಸಭಾ ಚುನಾವಣೆಗೆ ಮುನ್ನ, ಶಂಕಿತ ಭಯೋತ್ಪಾದಕರು ತಿನ್ಸುಕಿಯಾ ಜಿಲ್ಲೆಯ ಪೊಲೀಸ್ ಕಮಾಂಡೋ ಶಿಬಿರದ ಮೇಲೆ ದಾಳಿ ನಡೆಸಿದ್ದಾರೆ. ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸ್ಸಾಂನ ಶಂಕಿತ ಉಗ್ರರು (Terror Attack) ನಡೆಸಿದ್ದಾರೆ ಎನ್ನಲಾದ ದಾಳಿಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಪೊಲೀಸ್ ಸಿಬ್ಬಂದಿಯನ್ನು ದಿಬ್ರುಗಢದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾನುವಾರ (ಮಾರ್ಚ್‌ 22) ಬೆಳಗಿನ ಜಾವ 2 ಗಂಟೆ ಸುಮಾರಿಗೆ ಟಿನ್ಸುಕಿಯಾ ಜಿಲ್ಲೆಯ ಜಗುನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇದು ಅಸ್ಸಾಂ-ಅರುಣಾಚಲ ಪ್ರದೇಶದ ಗಡಿಗೆ ಹತ್ತಿರದಲ್ಲಿದೆ. ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಭಾರಿ ಪ್ರಮಾಣದ ಗುಂಡು ಹಾರಿಸಲಾಯಿತು ಮತ್ತು ಸ್ಫೋಟ ಸಂಭವಿಸಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಅದು ಗ್ರೆನೇಡ್ ಅಥವಾ ರಾಕೆಟ್ ಪ್ರೊಪೆಲ್ಡ್ ಗ್ರೆನೇಡ್ (ಆರ್‌ಪಿಜಿ) ಆಗಿರಬಹುದು ಎಂದು ಹೇಳಲಾಗಿದೆ.

ಪೊಲೀಸರು ಅಥವಾ ಜಿಲ್ಲಾಡಳಿತದಿಂದ ಇದುವರೆಗೆ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲ. ಯಾವುದೇ ಸಾವುನೋವುಗಳು ಅಥವಾ ಹಾನಿಯ ಬಗ್ಗೆ ಇನ್ನೂ ಖಚಿತ ಮಾಹಿತಿ ಲಭ್ಯವಾಗಿಲ್ಲ. ವರದಿಗಳ ಪ್ರಕಾರ, ದಾಳಿಕೋರರು ಶಿಬಿರದ ಮೇಲೆ ಭಾರಿ ದಾಳಿ ನಡೆಸಿ, ಐದು ಗ್ರೆನೇಡ್‌ಗಳನ್ನು ಎಸೆದು ನಂತರ ಮನಬಂದಂತೆ ಗುಂಡು ಹಾರಿಸಿದರು.

ಮಕ್ಕಳ ಕೈಗೆ ಮೊಬೈಲ್‌ ಕೊಡುವ ಮುನ್ನ ಎಚ್ಚರ; ಆನ್‌ಲೈನ್ ಆಟಗಳ ಮೂಲಕ ಸೆಳೆಯುತ್ತಿದ್ದಾರೆ ಭಯೋತ್ಪಾದಕರು

ಭದ್ರತಾ ಪಡೆಗಳು ಗಸ್ತು ತಿರುಗುವಿಕೆಯನ್ನು ತೀವ್ರಗೊಳಿಸಿದ್ದು, ದಾಳಿಕೋರರನ್ನು ಪತ್ತೆಹಚ್ಚಲು ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಆರಂಭಿಸಿವೆ.

ಹೈದರಾಬಾದ್‌ನಲ್ಲಿ ಭಯೋತ್ಪಾದನಾ ಸಂಚು ರೂಪಿಸಿದ್ದ ಇಬ್ಬರ ಬಂಧನ

ಆಂಧ್ರ ಪ್ರದೇಶ ಮತ್ತು ತೆಲಂಗಾಣ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಹೈದರಾಬಾದ್‌ನಲ್ಲಿ ಭಯೋತ್ಪಾದನೆ ಸಂಚು ವಿಫಲಗೊಂಡಿದೆ. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿರುವ ಪೊಲೀಸರು, ಅವರ ಬಳಿಯಿದ್ದ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ.

ವಿಜಯನಗರಂ ನಿವಾಸಿ ಸಿರಾಜ್ ಉರ್ ರೆಹಮಾನ್‌ನನ್ನು (29) ಆರಂಭದಲ್ಲಿ ಬಂಧಿಸಲಾಯಿತು. ಪೊಲೀಸರು ರೆಹಮಾನ್ ಅಡಗುತಾಣವನ್ನು ಶೋಧಿಸಿದಾಗ, ಅಮೋನಿಯಾ, ಸಲ್ಫರ್ ಮತ್ತು ಅಲ್ಯೂಮಿನಿಯಂ ಪುಡಿಯಂತಹ ಸ್ಫೋಟಕ ವಸ್ತುಗಳು ಕಂಡುಬಂದವು. ಈ ವಸ್ತುಗಳನ್ನು ಸಾಮಾನ್ಯವಾಗಿ ಬಾಂಬ್ ತಯಾರಿಕೆಯಲ್ಲಿ ಬಳಸಲಾಗುತ್ತದೆ.

ರೆಹಮಾನ್ ವಿಚಾರಣೆಯ ಸಮಯದಲ್ಲಿ ಪಡೆದ ಮಾಹಿತಿಯ ಆಧಾರದ ಮೇಲೆ, 28 ವರ್ಷದ ಸೈಯದ್ ಸಮೀರ್ ಎಂಬ ಮತ್ತೊಬ್ಬ ವ್ಯಕ್ತಿಯನ್ನು ಹೈದರಾಬಾದ್‌ನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಪಿತೂರಿಯಲ್ಲಿ ಸಮೀರ್ ಕೂಡ ಭಾಗಿಯಾಗಿರಬಹುದು ಎಂದು ಶಂಕಿಸಲಾಗಿದೆ.