ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮೊಮ್ಮಗಳ ಮೇಲೆಯೇ ಅತ್ಯಾಚಾರಕ್ಕೆ ಯತ್ನ: 75 ವರ್ಷದ ಅಜ್ಜನ ವಿರುದ್ಧ ಪೋಕ್ಸೋ ಕೇಸ್

Yadagiri News: ಅಜ್ಜನೇ ಸ್ವಂತ ಮೊಮ್ಮಗಳ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಆರೋಪಿಯನ್ನು 75 ವರ್ಷದ ಶರಣಪ್ಪ ಟಣಕೇದಾರ್ ಎಂದು ಗುರುತಿಸಲಾಗಿದೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಲ್ಲದೆ ಚೂರಿ ತೋರಿಸಿ ಬೆದರಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಕೆಂಭಾವಿ ಪೊಲೀಸ್‌ ಠಾಣೆ ಮತ್ತು ಶರಣಪ್ಪ ಟಣಕೇದಾರ್ (ಸಂಗ್ರಹ ಚಿತ್ರ)

ಯಾದಗಿರಿ, ಸೆ. 30: ಸ್ವಂತ ಮೊಮ್ಮಗಳ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ 75 ವರ್ಷದ ಅಜ್ಜನ ವಿರುದ್ಧ ಪೋಕ್ಸೋ (POSCO) ಸೇರಿ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಾಗಿರುವ ಆಘಾತಕಾರಿ ಘಟನೆ ಸುರಪುರ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ (Crime News). ಸೆಪ್ಟೆಂಬರ್‌ 23ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ (Yadagiri News). ಶರಣಪ್ಪ ಟಣಕೇದಾರ್ ಎಂಬಾತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ಚೂರಿ ತೋರಿಸಿ ಬೆದರಿಸಿದ್ದಲ್ಲದೆ, ಬಾಲಕಿಯ ಬಟ್ಟೆ ಬಿಚ್ಚಿಸಿ, ಬಾಯಿಗೆ ಬಟ್ಟೆ ತುರುಕಿ ಕೊಲೆಗೆ ಯತ್ನಿಸಿದ ಆರೋಪವೂ ಕೇಳಿಬಂದಿದೆ.

ಘಟನೆ ಗಮನಿಸಿದ ವ್ಯಕ್ತಿಯೊಬ್ಬರು ಕೂಡಲೇ 112ಕ್ಕೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಾಲಕಿಯ ತಾಯಿ ಬೆಂಗಳೂರಿಗೆ ತೆರಳಿದ್ದ ವೇಳೆ, ಬಾಲಕಿಯನ್ನು ಅಜ್ಜ-ಅಜ್ಜಿಯ ಮನೆಯಲ್ಲಿ ಬಿಟ್ಟು ಹೋಗಿದ್ದರು ಎನ್ನಲಾಗಿದೆ. ಇದೇ ಸಂದರ್ಭ ಕೃತ್ಯಕ್ಕೆ ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಬಾಲಕಿಯ ಹೊಟ್ಟೆ ಭಾಗದಲ್ಲಿ ಗಾಯವಾಗಿರುವುದು ಪತ್ತೆಯಾಗಿದೆ. ವಿಷಯ ತಿಳಿದ ಬಳಿಕ ಬಾಲಕಿಯನ್ನು ಚಿಕಿತ್ಸೆ ಹಾಗೂ ರಕ್ಷಣೆಯ ಹಿನ್ನೆಲೆಯಲ್ಲಿ ಬಾಲಮಂದಿರಕ್ಕೆ ರವಾನಿಸಲಾಗಿದೆ.

ಈ ಸಂಬಂಧ ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ 115(2), 109(1) ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಹದಿಹರೆಯದ ಬಾಲಕಿಯನ್ನು ಅಪಹರಿಸಿ, ಸ್ನೇಹಿತನಿಂದಲೇ ಅತ್ಯಾಚಾರ

ದೇವನಹಳ್ಳಿಯಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

ದೇವನಹಳ್ಳಿ: 14 ವರ್ಷದ ಬಾಲಕಿಯನ್ನು ಅಪಹರಿಸಿ, ನಿರ್ಮಾಣ ಹಂತದ ಕಟ್ಟಡಕ್ಕೆ ಎಳೆದೊಯ್ದು, ಸಾಮೂಹಿಕ ಅತ್ಯಾಚಾರ ಎಸಗಿ ಮರುದಿನ ಬೆಳಗ್ಗೆ ಆಕೆಯ ಮನೆಯ ಬಳಿ ಬಿಟ್ಟು ಹೋಗಿರುವ ಆಘಾತಕಾರಿ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ಇತ್ತೀಚೆಗೆ ನಡೆದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಮಹಿಳೆ ಸೇರಿ ಮೂವರನ್ನು ಬಂಧಿಸಲಾಗಿತ್ತು. ಬಂಧಿತರನ್ನು ನವೀನ್, ವೆಂಕಟರಮಣ ಮತ್ತು ರೇಣುಕಾ ಎಂದು ಗುರುತಿಸಲಾಗಿದೆ.

ಜುಲೈ 17ರಂದು ದೇವನಹಳ್ಳಿಯಲ್ಲಿರುವ ದೇವಸ್ಥಾನಕ್ಕೆ ಭೇಟಿ ನೀಡುವ ನೆಪದಲ್ಲಿ ರೇಣುಕಾ ಅಪ್ರಾಪ್ತ ಬಾಲಕಿಯನ್ನು ಮನೆಯಿಂದ ಹೊರಗೆ ಕರೆದೊಯ್ದಿದ್ದಳು. ಮನೆಯಿಂದ ಆಚೆ ಬಂದ ಬಾಲಕಿಯನ್ನು ನವೀನ್ ಮತ್ತು ವೆಂಕಟರಮಣ ಆಟೋದಲ್ಲಿ ಅಪಹರಿಸಿದ್ದರು. ದಾರಿಯಲ್ಲಿ,ಆರೋಪಿಗಳು ಆಕೆಗೆ ಬಲವಂತದಿಂದ ಮದ್ಯ ಕುಡಿಸಿದ್ದರು ಎಂದು ಪೊಲೀಸರು ತಿಳಿಸಿದ್ದರು.

ಕ್ರೈಂ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author