ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Murder Case: ಮಗನನ್ನು ಕೊಚ್ಚಿ ಕೊಂದು ಚೀಲದಲ್ಲಿ ತುಂಬಿದ ಕ್ರೂರಿ ತಂದೆ, 15 ದಿನ ಬಳಿಕ ಪತ್ತೆ!

ಹೆಂಡತಿಯ ಅನೈತಿಕ ಸಂಬಂಧಕ್ಕೆ ಮಗ ಕುಮ್ಮಕ್ಕು ಕೊಡುತ್ತಿದ್ದಾನೆ ಎಂಬ ಕಾರಣಕ್ಕೆ ಆರೋಪಿ ಕೊಲೆಗೈದಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿ ಸುಮಾರು 15 ದಿನಗಳ ಹಿಂದೆಯೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಪ್ಲಾಸ್ಟಿಕ್ ಚೀಲದಲ್ಲಿ ಎಸೆದಿದ್ದ.

ಮಗನನ್ನು ಕೊಚ್ಚಿ ಕೊಂದು ಚೀಲದಲ್ಲಿ ತುಂಬಿದ ತಂದೆ, 15 ದಿನ ಬಳಿಕ ಪತ್ತೆ!

ಮೃತ ಬೀರೇಶ, ಆರೋಪಿ ಲಕ್ಷ್ಮಪ್ಪ -

ಹರೀಶ್‌ ಕೇರ
ಹರೀಶ್‌ ಕೇರ Mar 7, 2026 11:00 AM

ಬಳ್ಳಾರಿ, ಮಾರ್ಚ್‌ 7: ಜಿಲ್ಲೆಯ (Ballary) ಹೂವಿನಹಡಗಲಿಯ (Huvina Hadagali) ಬೀರಬ್ಬಿಯಲ್ಲಿ ಇತ್ತೀಚೆಗೆ ಪ್ಲಾಸ್ಟಿಕ್ ಚೀಲದಲ್ಲಿ ಪೀಸ್ ಪೀಸ್ ಆಗಿ ಸಿಕ್ಕ ವ್ಯಕ್ತಿಯ ಮೃತದೇಹದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತಂದೆಯೇ ಈ ಪ್ರಕರಣದಲ್ಲಿ ಆರೋಪಿ ಎಂಬುದು ಗೊತ್ತಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಬೀರಬ್ಬಿ ಗ್ರಾಮದ ಬೀರೇಶ (25) ಕೊಲೆಯಾಗಿದ್ದ (Murder Case) ಯುವಕ. ಆತನ ತಂದೆ ಲಕ್ಷ್ಮಪ್ಪ (55) ಹತ್ಯೆಗೈದ ಆರೋಪಿಯಾಗಿದ್ದಾನೆ.

ಹೆಂಡತಿಯ ಅನೈತಿಕ ಸಂಬಂಧಕ್ಕೆ ಮಗ ಕುಮ್ಮಕ್ಕು ಕೊಡುತ್ತಿದ್ದಾನೆ ಎಂಬ ಕಾರಣಕ್ಕೆ ಆರೋಪಿ ಕೊಲೆಗೈದಿದ್ದಾನೆ ಎಂದು ತಿಳಿದು ಬಂದಿದೆ. ಆರೋಪಿ ಸುಮಾರು 15 ದಿನಗಳ ಹಿಂದೆಯೇ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಪ್ಲಾಸ್ಟಿಕ್ ಚೀಲದಲ್ಲಿ ಎಸೆದಿದ್ದ. ಎರಡು ದಿನಗಳ ಹಿಂದೆ ವಾಸನೆ ಬಂದಿದ್ದು, ಸ್ಥಳೀಯರು ನೋಡಿದಾಗ ಬೀರೇಶನ ಶವ ಗುರುತು ಸಿಗದಂತೆ ಕೊಳೆತ ಸ್ಥಿತಿಯಲ್ಲಿ ಮೂಳೆಗಳು ಮಾತ್ರ ಪತ್ತೆಯಾಗಿದ್ದವು.

ಪ್ರಕರಣ ಬೆಳಕಿಗೆ ಬಂದು 24 ಗಂಟೆಯಲ್ಲಿ ಆರೋಪಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ಆರೋಪಿ ತಾನೇ ಕೊಲೆಮಾಡಿದ್ದಾಗಿ ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಹೀರೆಹಡಗಲಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಸುಡುಮದ್ದು ತಯಾರಿಕೆ ಘಟಕದಲ್ಲಿ ಸ್ಫೋಟ, ಒಬ್ಬನ ಸೆರೆ

ದಕ್ಷಿಣಕನ್ನಡ : ದಕ್ಷಿಣಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ವಿಟ್ಲ ಮುಡ್ನೂರು ಗ್ರಾಮದ ಕಂಬಳಬೆಟ್ಟು ಸಮೀಪದ ನೂಜಿಯಲ್ಲಿ ಶುಕ್ರವಾರ ಸಂಜೆ ದೊಡ್ಡ ಸದ್ದಿನೊಂದಿಗೆ ಸ್ಫೋಟ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಸುಡುಮದ್ದು ತಯಾರಿಕಾ ಘಟಕದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಸರ್ಕಾರಿ ಜಮೀನಿನಲ್ಲಿ ಸ್ಥಳೀಯ ನಿವಾಸಿಯಾದ ಆರೋಪಿ ಅಬ್ದುಲ್ ಗಫೂರ್ ಎಂಬಾತ ಅಕ್ರಮವಾಗಿ ಶೆಡ್ ನಿರ್ಮಿಸಿ, ಯಾವುದೇ ಪರವಾನಗಿ ಪಡೆಯದೇ ಸುಡುಮದ್ದುಗಳನ್ನು ತಯಾರಿಸಿ, ಅಕ್ರಮವಾಗಿ ಸಂಗ್ರಹಿಸಿದ್ದ. ಈ ಸುಡುಮದ್ದುಗಳು ಸ್ಪೋಟಗೊಂಡಿದೆ.

ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಮರಗಳು ಸುಟ್ಟು ಹೋಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿತ ಅಬ್ದುಲ್ ಗಫೂರ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.