ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ; ಮನನೊಂದು ಬಿಎಎಂಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಪ್ರಾಧ್ಯಾಪಕರೊಬ್ಬರ ಜೊತೆ ಅಕ್ರಮ ಸಂಬಂಧವಿದೆ ಎಂಬ ಅಪಪ್ರಚಾರಕ್ಕೆ ಬೇಸತ್ತು ಬಿಎಎಂಎಸ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ. 23 ವರ್ಷದ ನಿಖಿತಾ ಮೃತ ವಿದ್ಯಾರ್ಥಿನಿ. ಆತ್ಮಹತ್ಯೆಗೂ ಮುನ್ನ ನಿಖಿತಾ ಡೆತ್‌ನೋಟ್‌ ಅದರಲ್ಲಿ ತನ್ನ ಸಾವಿಗೆ ಕಾರಣರಾದವರ ಹೆಸರನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಪ್ರಾಧ್ಯಾಪಕರ ಜತೆ ಸಂಬಂಧ ಕಲ್ಪಿಸಿ ಅಪಪ್ರಚಾರ; ವಿದ್ಯಾರ್ಥಿನಿ ಆತ್ಮಹತ್ಯೆ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Apr 2, 2026 10:56 AM

ಚಿತ್ರದುರ್ಗ: ಪ್ರಾಧ್ಯಾಪಕರೊಬ್ಬರ ಜೊತೆ ಅಕ್ರಮ ಸಂಬಂಧವಿದೆ ಎಂಬ ಅಪಪ್ರಚಾರಕ್ಕೆ ಬೇಸತ್ತು ಬಿಎಎಂಎಸ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ನಡೆದಿದೆ. 23 ವರ್ಷದ ನಿಖಿತಾ ಮೃತ ವಿದ್ಯಾರ್ಥಿನಿ. ನಿಖಿತಾ, ಹೊಳಲ್ಕೆರೆಯ ಬಸವ ಲೇಔಟ್‌ನ ನಿವಾಸಿಯಾಗಿದ್ದು, ಕಳೆದ ಕೆಲವು ದಿನಗಳಿಂದ ಈಕೆಯ ಹೆಸರನ್ನು ಪ್ರಾಧ್ಯಾಪಕರೊಬ್ಬರ ಜೊತೆ ತಳುಕು ಹಾಕಿ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸಾರ್ವಜನಿಕವಾಗಿ ಅಪಪ್ರಚಾರ ಮಾಡಲಾಗಿತ್ತು ಎಂದು ಹೇಳಲಾಗಿದೆ.

ಆತ್ಮಹತ್ಯೆಗೂ ಮುನ್ನ ನಿಖಿತಾ ಡೆತ್‌ನೋಟ್‌ ಅದರಲ್ಲಿ ತನ್ನ ಸಾವಿಗೆ ಕಾರಣರಾದವರ ಹೆಸರನ್ನು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಪ್ರಾಧ್ಯಾಪಕ ರಾಜು, ಅವರ ಪತ್ನಿ ಹಾಗೂ ಕೆಲವು ಸಹಪಾಠಿ ವಿದ್ಯಾರ್ಥಿನಿಯರು ತನ್ನ ಮಾನಸಿಕ ಕಿರುಕುಳಕ್ಕೆ ಕಾರಣ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಪ್ರಾಧ್ಯಾಪಕ ರಾಜು, ಅವರ ಪತ್ನಿ ಹಾಗೂ ಕೆಲವು ಸಹಪಾಠಿ ವಿದ್ಯಾರ್ಥಿನಿಯರು ತನ್ನ ಮಾನಸಿಕ ಕಿರುಕುಳಕ್ಕೆ ಕಾರಣ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ತನ್ನ ಚಾರಿತ್ರ್ಯಕ್ಕೆ ಧಕ್ಕೆ ತರುವ ರೀತಿಯಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದು ಮತ್ತು ಮಾನಸಿಕವಾಗಿ ಹಿಂಸೆ ನೀಡಿದ್ದೇ ಈ ನಿರ್ಧಾರಕ್ಕೆ ಪ್ರೇರಣೆ ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಹೊಳಲ್ಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತಳ ಪೋಷಕರು ನೀಡಿದ ದೂರಿನ ಮೇರೆಗೆ ಪ್ರಾಧ್ಯಾಪಕ ರಾಜು ಮತ್ತು ಅವರ ಪತ್ನಿ ಸೇರಿದಂತೆ ಇತರರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ದಂಪತಿ ಆತ್ಮಹತ್ಯೆ

ಕೌಟುಂಬಿಕ ಕಲಹ ಹಿನ್ನೆಲೆ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನ ನಡೆದಿದೆ. ಭಾನು ಚಂದ್ರ ರೆಡ್ಡಿ ಹಾಗೂ ಸಾಜಿಯಾ ಆತ್ಮಹತ್ಯೆ ಮಾಡಿಕೊಂಡ ದಂಪತಿ. ಮೊದಲಿಗೆ ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗಂಡನ ಮೃತದೇಹ ಕಂಡು ಪತ್ನಿ ಸಹ ಅಪಾರ್ಟ್‌ಮೆಂಟ್‌ನ 17ನೇ ಫ್ಲೋರ್‌ನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.