ಫೋಟೋ ಗ್ಯಾಲರಿ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murder Case: ಬಾರ್‌ನಲ್ಲಿ ಜೋರಾಗಿ ಮಾತನಾಡಬೇಡಿ ಎಂದದ್ದಕ್ಕೆ ಯುವಕನ ಕೊಲೆ

ಶ್ಯಾನುಬೋಗನಹಳ್ಳಿ ತರಂಗಿಣಿ ಬಾರ್​ನಲ್ಲಿ ಮೃತ ಸುರೇಶ್ ಜೋರಾಗಿ ಮಾತನಾಡಬೇಡಿ, ಸೈಲೆಂಟ್​ ಆಗಿ ಇರಿ ಎಂದಿದ್ದಾರೆ. ಇಷ್ಟಕ್ಕೆ ಸುರೇಶ್ ಅವರ ಮನೆಗೆ ನುಗ್ಗಿದ್ದ ಆರೋಪಿಗಳು, ಆತನ ಹೆಂಡತಿ ಮಕ್ಕಳ ಮುಂದೆಯೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಬನ್ನೇರುಘಟ್ಟ ಪೊಲೀಸರು ಕೊಲೆ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

ಬಾರ್‌ನಲ್ಲಿ ಜೋರಾಗಿ ಮಾತನಾಡಬೇಡಿ ಎಂದದ್ದಕ್ಕೆ ಯುವಕನ ಕೊಲೆ

ಹರೀಶ್‌ ಕೇರ ಹರೀಶ್‌ ಕೇರ Apr 28, 2025 7:16 AM

ಆನೇಕಲ್: ಬಾರ್​ನಲ್ಲಿ ಜೋರಾಗಿ ಮಾತನಾಡಬೇಡಿ (talking loud) ಎಂದು ಹೇಳಿದ ಯುವಕನ ಮನೆಗೇ ನುಗ್ಗಿ ಇರಿದು ಕೊಂದಿದ್ದಾರೆ ಪಾಪಿಗಳು. ಘಟನೆ ಬನ್ನೇರುಘಟ್ಟ ಶ್ಯಾನುಭೋಗನಹಳ್ಳಿಯಲ್ಲಿ ನಡೆದಿದೆ. ಯುವಕನ ಕೊಲೆ (Murder Case) ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕ ಸೇರಿದಂತೆ ನಾಲ್ವರು ಆರೋಪಿಗಳನ್ನು ಬನ್ನೇರುಘಟ್ಟ ಪೊಲೀಸರು (Bengaluru crime news) ಬಂಧಿಸಿದ್ದಾರೆ. ಕೆಂಚಗಯ್ಯನದೊಡ್ಡಿ ವಾಸಿ ಕಾಂತಿಕುಮಾರ್ ಅಲಿಯಾಸ್​ ಸೈಕೋ ಕಾಂತಿ (27), ಗೋಪಾಲ್ ಅಲಿಯಾಸ್​ ಗೊಬ್ಬು ರಾಜ (40), ಕಿರಣ್ ಕುಮಾರ್ ಅಲಿಯಾಸ್​ ಸಫೀನ್ಸ್ (28) ಮತ್ತು ಓರ್ವ ಬಾಲಕ ಬಂಧಿತರು. ಮತ್ತೊಬ್ಬ ಆರೋಪಿ ವಿನೋದ್ (30) ಗಾಗಿ ಪೊಲೀಸರು ಹುಡುಗಾಟ ನಡೆಸಿದ್ದಾರೆ.

ಶ್ಯಾನುಬೋಗನಹಳ್ಳಿ ತರಂಗಿಣಿ ಬಾರ್​ನಲ್ಲಿ ಮೃತ ಸುರೇಶ್ ಜೋರಾಗಿ ಮಾತನಾಡಬೇಡಿ, ಸೈಲೆಂಟ್​ ಆಗಿ ಇರಿ ಎಂದಿದ್ದಾರೆ. ಇಷ್ಟಕ್ಕೆ ಸುರೇಶ್ ಅವರ ಮನೆಗೆ ನುಗ್ಗಿದ್ದ ಆರೋಪಿಗಳು, ಆತನ ಹೆಂಡತಿ ಮಕ್ಕಳ ಮುಂದೆಯೇ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಬನ್ನೇರುಘಟ್ಟ ಪೊಲೀಸರು ಕೊಲೆ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. ಒಬ್ಬ ಪರಾರಿಯಾಗಿದ್ದು, ಆತನಿಗಾಗಿ ತಲಾಶೆ ನಡೆಸಲಾಗುತ್ತಿದೆ.

ಜಾಸ್ತಿ ಚಾಟ್‌ ಮಾಡಬೇಡ ಎಂದದ್ದಕ್ಕೆ ಪತಿಗೆ ಚಾಕುವಿನಿಂದ ಇರಿದ ಪತ್ನಿ

ವಿಜಯಪುರ: ಮೊಬೈಲ್‌ನಲ್ಲಿ ಅತಿಯಾಗಿ ಚಾಟ್ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಬುದ್ಧಿವಾದ ಹೇಳಿದ ಗಂಡನಿಗೇ ಪತ್ನಿಯೊಬ್ಬಳು ಚಾಕುವಿನಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ವಿಜಯಪುರ ನಗರದ ಆಲಕುಂಟೆ ನಗರದಲ್ಲಿ ಭಾನುವಾರ ನಡೆದಿದೆ. ತೇಜು ರಾಠೋಡ್ ಎಂಬಾಕೆ ತನ್ನ ಪತಿ ಅಜಿತ್ ರಾಠೋಡ್ ಗಾಢ ನಿದ್ರೆಯಲ್ಲಿದ್ದಾಗ ಕತ್ತಿಗೆ ಚಾಕುವಿನಿಂದ ಇರಿದಿದ್ದಾಳೆ. ಅಜಿತ್ ಕಿರುಚಿಕೊಂಡಾಗ ಮನೆಯವರಿಗೆ ವಿಷಯ ಗೊತ್ತಾಗಿದ್ದು, ಕೂಡಲೇ ಅವರನ್ನು ಬಿಎಲ್‌ಡಿಇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಜಿತ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ತೇಜು ಸದಾ ಮೊಬೈಲ್‌ನಲ್ಲಿ ಬೇರೆಯವರೊಂದಿಗೆ ಚಾಟ್ ಮಾಡುತ್ತಿದ್ದುದ್ದಕ್ಕೆ ಅಜಿತ್ ಬುದ್ಧಿವಾದ ಹೇಳಿದ್ದರು. ಇದು ತೇಜುಗೆ ಸಿಟ್ಟು ತಂದಿದ್ದು, ಆಕೆ ಈ ದುಸ್ಸಾಹಸಕ್ಕೆ ಕೈಹಾಕಿದ್ದಾಳೆ ಎಂದು ಆರೋಪಿಸಲಾಗಿದೆ. ಆದರ್ಶನಗರ ಪೊಲೀಸರು ತೇಜು ರಾಠೋಡ್‌ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ: Murder Case: ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಕೇಸ್‌ ಆರೋಪಿ ಹತ್ಯೆ; ಮೂವರು‌ ಎಸ್‌ಡಿಪಿಐ ಕಾರ್ಯಕರ್ತರ ಬಂಧನ