ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Harassment: ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿದ ಡೆಲಿವರಿ ಬಾಯ್‌ ಬಂಧನ

ಪಶ್ಚಿಮ ಬಂಗಾಳ (West Bengal) ಮೂಲದ ಆರೋಪಿ ಮುನಿರುದ್ದೀನ್ ಖಾನ್‌ ಎಂಬಾತ ಆರೋಪಿ. ಈತ ಡೆಲಿವರಿ ಬಾಯ್‌ ಕೆಲಸ ಮಾಡುತ್ತಿದ್ದ. ಬೆಂಗಳೂರಿನ ಬೀದಿಯಲ್ಲಿ ಯುವತಿಯ ಮುಂದೆ ಅಸಭ್ಯವಾಗಿ ವರ್ತಿಸಿ ಬಾ ಎಂದು ಕರೆದಿದ್ದಾನೆ. ಅಷ್ಟಕ್ಕೆ ಸುಮ್ಮನಾಗದೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ಹಿಂದಿನಿಂದ ತಬ್ಬಿಕೊಂಡಿದ್ದಾನೆ. ಇದಕ್ಕೆ ಪ್ರತಿರೋಧಿಸಿದ್ದಕ್ಕೆ ಯುವತಿಯ ಕೆನ್ನೆಗೆ ಹೊಡೆದಿದ್ದಾನೆ.

ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿದ ಡೆಲಿವರಿ ಬಾಯ್‌ ಬಂಧನ

ಆರೋಪಿ ಮುನಿರುದ್ದೀನ್‌ ಖಾನ್ -

ಹರೀಶ್‌ ಕೇರ
ಹರೀಶ್‌ ಕೇರ Jan 10, 2026 9:06 AM

ಬೆಂಗಳೂರು, ಜ.10: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿಯನ್ನು ತಬ್ಬಿ ಅಸಭ್ಯವಾಗಿ ವರ್ತಿಸಿ (Harassment) ಪರಾರಿಯಾಗಿದ್ದವನನ್ನು ಬೆಂಗಳೂರಿನ (Bengaluru crime news) ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳ (West Bengal) ಮೂಲದ ಆರೋಪಿ ಮುನಿರುದ್ದೀನ್ ಖಾನ್ ಬಂಧಿತ ಆರೋಪಿ. ಮುನಿರುದ್ದೀನ್ ಮುನಿರುದ್ದೀನ್ ನಗರದ ಕೊತ್ತನೂರಿನಲ್ಲಿ ಡೆಲಿವರಿ ಬಾಯ್ (Delivery Boy) ಆಗಿ ಕೆಲಸ ಮಾಡಿಕೊಂಡಿದ್ದ ಎಂದು ಗೊತ್ತಾಗಿದೆ.

ಮನೆಯ ಮುಂದೆ ಬಿದ್ದಿದ್ದ ಬಾಕ್ಸ್‌ನ್ನು ಯುವತಿ ತೆಗೆದುಕೊಂಡು ಹೋಗುತ್ತಿದ್ದಳು. ಈ ವೇಳೆ ಯುವಕ ರಸ್ತೆಯಲ್ಲಿ ಬಟ್ಟೆಬಿಚ್ಚಿ ಅಸಭ್ಯವಾಗಿ ವರ್ತಿಸಿ ಬಾ ಎಂದು ಕರೆದಿದ್ದಾನೆ. ಅಷ್ಟಕ್ಕೆ ಸುಮ್ಮನಾಗದೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಯುವತಿಯನ್ನು ಹಿಂದಿನಿಂದ ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ್ದಾನೆ. ಇದಕ್ಕೆ ಪ್ರತಿರೋಧಿಸಿದ್ದಕ್ಕೆ ಯುವತಿಯ ಕೆನ್ನೆಗೆ ಹೊಡೆದಿದ್ದಾನೆ. ಬಳಿ ಯುವತಿ ಕಿರುಚಾಡಿದಾಗ ಕಾಮುಕ ಮುನಿರುದ್ದೀನ್ ಖಾನ್ ಅಲ್ಲಿಂದ ಪರಾರಿಯಾಗಿದ್ದ.

ಘಟನೆ ಬಳಿಕ ಯುವತಿ ಕೊತ್ತನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಈ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ನಡೆಸಿ ಮುನಿರುದ್ದೀನ್ ಖಾನ್‌ನನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ರಸ್ತೆ ಬದಿ ನಿಂತಿದ್ದ ಯುವತಿಯನ್ನು ಅನುಚಿತವಾಗಿ ಸ್ಪರ್ಶಿಸಿದ ಯುವಕ; ಆಘಾತಕಾರಿ ವಿಡಿಯೊ ವೈರಲ್‌