ಬೆಂಗಳೂರು, ನ.27 : ರಾಜಧಾನಿ ಬೆಂಗಳೂರಿನಲ್ಲಿ (Bengaluru crime news) ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ ನಡೆದಿದ್ದು, ದುಷ್ಕರ್ಮಿಗಳು 15 ವರ್ಷದ ಬಾಲಕಿಯನ್ನು ಕತ್ತು ಹಿಸುಕಿ ಕೊಲೆ (Murder case) ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಬೋಳಾರೆ ಗ್ರಾಮದ ಬಳಿ ಕವನ ಎಂಬ 15 ವರ್ಷದ ಬಾಲಕಿಯನ್ನು ಕತ್ತು ಕಿಸುಕಿ ಕೊಲೆ ಮಾಡಲಾಗಿದೆ. ತಾಯಿ ಇಲ್ಲದ ಬಾಲಕಿ ಕವನ, ಸಾವಿತ್ರಮ್ಮ ಎಂಬವರ ಜೊತೆ ವಾಸವಾಗಿದ್ದಳು. ಕವನಳ ತಂದೆ ಬೇರೆ ಕಡೆ ವಾಸವಾಗಿದ್ದರು.
ನಿನ್ನೆ ಮಧ್ಯಾಹ್ನ ಬಹಿರ್ದೆಸೆಗೆ ಹೋಗಿದ್ದ ಬಾಲಕಿ ಸಂಜೆಯಾದರೂ ವಾಪಸ್ ಬಂದಿರಲಿಲ್ಲ. ನಂತರ ಹುಡುಕಾಡಿದಾಗ ಬಾಲಕಿಯ ಮೃತದೇಹ ಪತ್ತೆಯಾಗಿದೆ. ಬಾಲಕಿ ಹತ್ಯೆಯ ಹಿಂದಿನ ನಿಖರ ಕಾರಣ ಗೊತ್ತಾಗಿಲ್ಲ. ಘಟನೆ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸ್ ತಂಡಗಳನ್ನು ರಚಿಸಲಾಗಿದ್ದು, ಸುತ್ತಮುತ್ತಲಿನ ಪ್ರದೇಶಗಳ ಸಿಸಿಟಿವಿ ಕ್ಯಾಮೆರಾಗಳನ್ನು ಜಾಲಾಡಲಾಗುತ್ತಿದೆ. ಬಾಲಕಿಯ ಪರಿಚಿತರು ಈ ಕೃತ್ಯ ಎಸಗಿರುವ ಅನುಮಾನ ವ್ಯಕ್ತವಾಗಿದೆ.
ಸುಪಾರಿ ಕೊಟ್ಟು ಪತಿಯನ್ನೇ ಕೊಲ್ಲಿಸಿದ್ದ ಪತ್ನಿ; 9 ವರ್ಷದ ಬಳಿಕ ಬಯಲಾಯ್ತು ರಹಸ್ಯ!
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಸವಾರರ ಸಾವು
ಹಾಸನ : ಹಾಸನದಲ್ಲಿ ಭೀಕರವಾದ ಸಂಭವಿಸಿದ್ದು ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಲೋಕೇಶ್ (25) ಹಾಗೂ ಕಿರಣ್ (32) ಎಂದು ಗುರುತಿಸಲಾಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹೊನ್ನೇನಹಳ್ಳಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ.
ಬೈಕ್‌ನಲ್ಲಿ ಇಬ್ಬರು ಸವಾರರು ತೆರುಳುತ್ತಿದ್ದರು. ಬೈಕ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಲೋಕೇಶ್ ಹಾಗು ಕಿರಣ್ ಸಾವನ್ನಪ್ಪಿದ್ದಾರೆ. ಘಟನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅಪಘಾತದ ಕುರಿತು ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.