ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Murder Case: ಮನೆಗೆಲಸದವನಿಂದ ಪೈಶಾಚಿಕ ಕೃತ್ಯ, ಮಹಿಳೆಯ ಅತ್ಯಾಚಾರವೆಸಗಿ ಕೊಲೆಗೈದು ತಾನೂ ಸತ್ತ!

ಬೆಂಗಳೂರಿನ ಮೈಕೋ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯನ್ನು ಅತ್ಯಾಚಾರವೆಸಗಿ, ಬಳಿಕ ನೇಣು ಬಿಗಿದುಕೊಂಡು ಆರೋಪಿ ದೇವರಾಜು (50) ಆತ್ಮಹತ್ಯೆಗೆ ಶರಣಾಗಿದ್ದಾನೆ. ದೇವರಾಜು ಮನೆಗೆಲಸ ಮಾಡುತ್ತಿದ್ದ 65 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ. ಕೃತ್ಯದ ಬಗೆಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಮಹಿಳೆಯ ಅತ್ಯಾಚಾರವೆಸಗಿ ಕೊಲೆಗೈದು ಮನೆಗೆಲಸದಾತ ಆತ್ಮಹತ್ಯೆ

ಸಾಂದರ್ಭಿಕ ಚಿತ್ರ -

ಹರೀಶ್‌ ಕೇರ
ಹರೀಶ್‌ ಕೇರ Feb 1, 2026 10:31 AM

ಬೆಂಗಳೂರು, ಫೆ.1 : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 65 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಬಳಿಕ ವ್ಯಕ್ತಿಯೂ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ರಾಜಧಾನಿಯಲ್ಲಿ (Bengaluru crime news) ನಡೆದಿದೆ. ಮನೆಗೆಲಸದವನೇ ಮನೆಯ ಮಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಂದು ಹಾಕಿದ್ದಾನೆ. ಬಳಿಕ ತಾನೂ ಸತ್ತಿದ್ದಾನೆ.

ಬೆಂಗಳೂರಿನ ಮೈಕೋ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯನ್ನು ಅತ್ಯಾಚಾರವೆಸಗಿ, ಬಳಿಕ ನೇಣು ಬಿಗಿದುಕೊಂಡು ಆರೋಪಿ ದೇವರಾಜು (50) ಆತ್ಮಹತ್ಯೆಗೆ ಶರಣಾಗಿದ್ದಾನೆ. ದೇವರಾಜು ಮನೆಗೆಲಸ ಮಾಡುತ್ತಿದ್ದ 65 ವರ್ಷದ ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದಾನೆ.

ಕೃತ್ಯ ನಡೆದಾಗ ಮನೆಯ ಮೊದಲ ಮಹಡಿಯಲ್ಲಿ ಮಹಿಳೆಯ ಪುತ್ರಿ ಇದ್ದರು. ಮುಂಜಾನೆ ಮಹಿಳೆಯ ಪತಿ ಮನೆಗೆ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೃತ್ಯದ ಬಗೆಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ದೌರ್ಜನ್ಯ ವಿರೋಧಿಸಿದ ಮಹಿಳೆ ಸೇರಿ ಒಂದೇ ಕುಟುಂಬದ ಮೂವರ ಹತ್ಯೆ; ಚೆನ್ನೈಯಲ್ಲಿ ಬಿಹಾರ ಮೂಲದ ಕಾರ್ಮಿಕ, ಪತ್ನಿ, ಮಗುವಿನ ಧಾರುಣ ಅಂತ್ಯ

ದಾಯಾದಿಗಳ ಜಗಳ ಕೊಲೆಯಲ್ಲಿ ಅಂತ್ಯ

ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ಜಮೀನು ವಿಚಾರವಾಗಿ ದಾಯಾದಿಗಳ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಬಸವರಾಜ್ ತಳವಾರ (34) ಕೊಲೆಯಾದ ವ್ಯಕ್ತಿಯಾಗಿದ್ದು, ನಿನ್ನೆ ತಡರಾತ್ರಿ ಸಹೋದರ ಸಂಬಂಧಿಗಳಾದ ಬಸವರಾಜ್ ತಳವಾರ್ ಮತ್ತು ಘೂಳೇಶ್ ನಡುವೆ ಜಮೀನು ವಿಷಯವಾಗಿ ಗಲಾಟೆಯಾಗಿತ್ತು.

ಗಲಾಟೆ ವಿಕೋಪಕ್ಕೆ ತಿರುಗಿ ಬಸವರಾಜ್‌ಗೆ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ಬಸವರಾಜ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಕುರಿತು ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಯಾಂಡ್‌ವಿಚ್ ಹಣಕ್ಕೆ ಜಗಳ: ಹೆಡ್ ಕಾನ್‌ಸ್ಟೇಬಲ್‌ಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಬಾಲಾಪರಾಧಿಗಳು