ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Physical Abuse: ಹಿಂದೂ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಬಿಹಾರದ ಕೂಲಿ ಕಾರ್ಮಿಕ

ಆರೋಪಿ ಮೊಹಮ್ಮದ್ ಮುನ್ನ ಏಪ್ರಿಲ್ 08ರಂದು ಸಂಜೆ ಮನೆ ಬಳಿ ಆಟವಾಡುತ್ತಿದ್ದ 11 ವರ್ಷದ ಬಾಲಕಿಯನ್ನು ಪಕ್ಕದಲ್ಲಿದ್ದ ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ. ಬಳಿಕ ಇದನ್ನು ಯಾರಿಗೂ ಹೇಳಬೇಡ ಎಂದು ಬಾಲಕಿ ಕೈಗೆ 150 ರೂಪಾಯಿ ಕೊಟ್ಟು ಪರಾರಿಯಾಗಿದ್ದ.

ಸಾಂದರ್ಭಿಕ ಚಿತ್ರ

ಬೆಂಗಳೂರು, ಏ.10: ಹೊಟ್ಟೆಪಾಡಿಗಾಗಿ ದೂರದ ಬಿಹಾರದಿಂದ (bihar) ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂದವನು (Bengaluru) ನೀಚ ಕೆಲಸ ಮಾಡಿ ಸಿಕ್ಕಿಬಿದ್ದಿದ್ದಾನೆ. ಹಿಂದೂ ಬಾಲಕಿ ಮೇಲೆ ಬಿಹಾರಿ ಮುಸ್ಲಿಂ ಯುವಕ ಅತ್ಯಾಚಾರ (Physical Abuse) ಎಸಗಿರುವ ಘಟನೆ ಬೆಂಗಳೂರಿನ ಜ್ಞಾನ ಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರದ (Bihar) ಮೂಲದ ಮೊಹಮ್ಮದ್ ಮುನ್ನ ಎನ್ನುವ ಯುವಕ, ಆಟವಾಡುತ್ತಿದ್ದ 11 ವರ್ಷದ ಬಾಲಕಿಯನ್ನು ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಆರೋಪಿ ಮೊಹಮ್ಮದ್ ಮುನ್ನ ಏಪ್ರಿಲ್ 08ರಂದು ಸಂಜೆ ಮನೆ ಬಳಿ ಆಟವಾಡುತ್ತಿದ್ದ 11 ವರ್ಷದ ಬಾಲಕಿಯನ್ನು ಪಕ್ಕದಲ್ಲಿದ್ದ ನಿರ್ಮಾಣ ಹಂತದ ಕಟ್ಟಡಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ್ದಾನೆ. ಬಳಿಕ ಇದನ್ನು ಯಾರಿಗೂ ಹೇಳಬೇಡ ಎಂದು ಬಾಲಕಿ ಕೈಗೆ 150 ರೂಪಾಯಿ ಕೊಟ್ಟು ಪರಾರಿಯಾಗಿದ್ದ. ಎಸ್ಕೇಪ್ ಆಗಿದ್ದ ಮೊಹಮ್ಮದ್ ಮುನ್ನನನ್ನು ಪೊಲೀಸರು ಬಂಧಿಸಿದ್ದಾರೆ.

ಕೆಲ ಸಮಯದವರೆಗೆ ಮನೆ ಬಳಿ ಬಾಲಕಿ ಕಾಣದಿದ್ದಾಗ ಆತಂಕಕ್ಕೆ ಒಳಗಾಗಿದ್ದ ಪೋಷಕರು ಅಕ್ಕಪಕ್ಕದಲ್ಲಿ ಹುಡುಕಾಡಿದ್ದಾರೆ. ಬಳಿಕ ಕೆಲ ಹೊತ್ತಿನ ನಂತರ ಬಾಲಕಿ ಮನೆಗೆ ಬಂದಿದ್ದು, ಈ ವೇಳೆ ಬಾಲಕಿ ಕೈಯಲ್ಲಿ 150 ರೂ. ಹಣ ಇರುವುದನ್ನು ಪೋಷಕರು ನೋಡಿದ್ದಾರೆ. ನಂತರ ಹಣದ ಬಗ್ಗೆ ವಿಚಾರಿಸಿದಾಗ ಬಾಲಕಿ, ಮುನ್ನನ ನೀಚ ಕೃತ್ಯವನ್ನು ಬಿಚ್ಚಿಟ್ಟಿದ್ದಾಳೆ. ಕೂಡಲೇ ಪೋಷಕರು ಜ್ಞಾನಭಾರತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಪೊಲೀಸರು, ಬಿಹಾರ ಮೂಲದ ಮೊಹಮ್ಮದ್ ಮುನ್ನ ಎನ್ನುವಾತನನ್ನು ಬಂಧಿಸಿ ತನಿಖೆ ನಡೆಸಿದ್ದಾರೆ.

ಅವಳಿ ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿ ಹತ್ಯೆಗೈದ ನೀಚ ತಂದೆ; ಗಂಡು ಮಗು ಜನಿಸದ್ದಕ್ಕೆ ಈ ದುಷ್ಕೃತ್ಯ

ಹರೀಶ್‌ ಕೇರ

View all posts by this author