ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Physical abuse: ಪೈಶಾಚಿಕ ಕೃತ್ಯ, ಸ್ನೇಹಿತರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

ಯುವತಿಗೆ ನಶೆ ಬರಿಸುವ ಮಾತ್ರೆಗಳನ್ನು ನೀಡಿ ಡಿಕ್ಸಿನ್ ಮತ್ತು ನಿಖಿಲ್ ಅತ್ಯಾಚಾರಗೈದಿದ್ದಾರೆ. ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿದ್ದಾರೆ. ಪ್ರೀತಿಯ ಹೆಸರಲ್ಲಿ ಇಬ್ಬರಿಂದ ಅತ್ಯಾಚಾರ ನಡೆದಿದೆ ಎಂಬ ಗಂಭೀರ ಆರೋಪವನ್ನು ಯುವತಿ ಮಾಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿ ನಿಖಿಲ್ ಹಾಸನ ಜಿಲ್ಲೆಯ ಸಕಲೇಶಪುರ ಮೂಲದವನು ಎಂದು ತಿಳಿದು ಬಂದಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.23 : ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, ಅಮಲು ಬರಿಸುವ ಮಾತ್ರೆಗಳನ್ನು ನೀಡಿ 19 ವರ್ಷದ ವಿದ್ಯಾರ್ಥಿನಿ ಮೇಲೆ ಆಕೆಯ ಸ್ನೇಹಿತರೇ ಸಾಮೂಹಿಕ ಅತ್ಯಾಚಾರ (Physical abuse) ಎಸಗಿರುವ ಘಟನೆ ಬೆಂಗಳೂರಿನಲ್ಲಿ (bengaluru crime news) ನಡೆದಿದೆ. ಈ ಕುರಿತು ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

19 ವರ್ಷದ, ಬನ್ನೇರುಘಟ್ಟದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ ಮೇಲೆ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ ನಡೆದಿದೆ. ಸಂತ್ರಸ್ತೆಯು ಪಶ್ಚಿಮ ಬಂಗಾಳ ಮೂಲದ ಡಿಕ್ಸಿನ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಡಿಕ್ಸಿನ್ ಆಕೆಯನ್ನು ಮನೆಯೊಂದಕ್ಕೆ ಕರೆದುಕೊಂಡು ಹೋಗಿದ್ದು, ಅಲ್ಲಿಗೆ ಮತ್ತೋರ್ವ ಗೆಳೆಯ ನಿಖಿಲ್ ಎಂಬಾತನನ್ನು ಕರೆಸಿಕೊಂಡಿದ್ದಾನೆ.

ಈ ವೇಳೆ ಯುವತಿಗೆ ನಶೆ ಬರಿಸುವ ಮಾತ್ರೆಗಳನ್ನು ನೀಡಿ ಡಿಕ್ಸಿನ್ ಮತ್ತು ನಿಖಿಲ್ ಅತ್ಯಾಚಾರಗೈದಿದ್ದಾರೆ. ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿದ್ದಾರೆ. ಪ್ರೀತಿಯ ಹೆಸರಲ್ಲಿ ಇಬ್ಬರಿಂದ ಅತ್ಯಾಚಾರ ನಡೆದಿದೆ ಎಂಬ ಗಂಭೀರ ಆರೋಪವನ್ನು ಯುವತಿ ಮಾಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದು, ಆರೋಪಿ ನಿಖಿಲ್ ಹಾಸನ ಜಿಲ್ಲೆಯ ಸಕಲೇಶಪುರ ಮೂಲದವನು ಎಂದು ತಿಳಿದು ಬಂದಿದೆ.

ಪೈಜಾಮಾ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ ಎಂದ ಅಲಾಹಾಬಾದ್‌ ಹೈಕೋರ್ಟ್‌ ಆದೇಶ ರದ್ದುಗೊಳಿಸಿ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ಮದುವೆಯ ಆಮಿಷವೊಡ್ಡಿ ಯುವಕನಿಗೆ 21.22 ಲಕ್ಷ ರೂ. ವಂಚನೆ

ಬೆಂಗಳೂರು : ಮದುವೆ ಹೆಸರಿನಲ್ಲಿ ಕ್ರಿಪ್ಟೋದಲ್ಲಿ ಹಣ ಹೂಡಿಕೆ ಮಾಡಿಸಿ ವಂಚನೆ ಯುವಕನೊಬ್ಬನಿಗೆ ಎಸಗಲಾಗಿದೆ. ಯುವತಿಯೊಬ್ಬಳು ಯುವಕನಿಗೆ ಮದುವೆ ಹೆಸರಲ್ಲಿ 21.22 ಲಕ್ಷ ರೂ. ವಂಚಿಸಿದ್ದಾಳೆ. ಬೆಂಗಳೂರಿನ ಟಿ ದಾಸರಹಳ್ಳಿ ಮೂಲದ ಯುವಕನಿಗೆ ಧೋಖಾ ಮಾಡಿದ್ದಾಳೆ.

ಮ್ಯಾಟ್ರಿಮೋನಿಯಲ್ಲಿ ವಧು ಹುಡುಕುತ್ತಿದ್ದ ಸಿ.ಎಸ್ ರಾಕೇಶ್ ಎಂಬ ಯುವಕನಿಗೆ ಶಿರಿಷ ಎಂಬಾಕೆ ಪರಿಚಯವಾಗಿದ್ದಳು. ಇಬ್ಬರು ಪರಸ್ಪರ ಸ್ನೇಹಿತರಾಗಿ ಫೋನ್ ಕಾಂಟ್ಯಾಕ್ಟ್‌ನಲ್ಲಿದ್ದರು. ನಂತರ ಮದುವೆಯಾಗೋಣ ಎಂದು ಯುವಕನಿಗೆ ಶಿರೀಶ ಆಮಿಷ ಒಡ್ಡಿದ್ದಾಳೆ. ಕ್ರಿಪ್ಟೋದಲ್ಲಿ ಟ್ರೇಡಿಂಗ್ ಮಾಡಲು ಹೇಳಿದ್ದಳು. ವೆಬ್ಸೈಟ್ ಲಿಂಕ್ ಹಾಗೂ ಬ್ಯಾಂಕ್ ಖಾತೆ ನೀಡಿ ಹಣ ಹೂಡಿಕೆ ಮಾಡಲು ಹೇಳಿದ್ದಾಳೆ.

ಕೆಲ ದಿನಗಳ ಕಾಲ ಲಾಭದ ಅಂಶ ತೋರಿಸಿದ್ದ ಶಿರೀಷ ನಂತರ ಹಣ ಡ್ರಾ ಮಾಡಲು ಕಮಿಷನ್ ಕಟ್ಟಬೇಕು ಎಂದು ಸೂಚನೆ ನೀಡಿದ್ದಾಳೆ. ಹಂತ ಹಂತವಾಗಿ 21. 22 ಲಕ್ಷ ರೂಪಾಯಿ ಹಾಕಿಸಿಕೊಂಡು ವಂಚನೆ ಎಸಗಿದ್ದಾಳೆ. ಬಳಿಕ ಹೂಡಿಕೆ ಮಾಡಿದ ಹಣ ನೀಡದೆ, ಲಾಭವೂ ನೀಡದೆ ವಂಚನೆ ಎಸಗಿದ್ದಾಳೆ. ಮೋಸ ಹೋದ ವಿಚಾರ ತಿಳಿದು ಇದೀಗ ಯುವಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಉತ್ತರ ವಿಭಾಗದ ಸೆನ್ ಠಾಣೆಗೆ ಸಿಎಸ್ ರಾಕೇಶ್ ದೂರು ನೀಡಿದ್ದಾನೆ. ಎಫ್ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಹರೀಶ್‌ ಕೇರ

View all posts by this author