ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murder Case: ಆನೇಕಲ್‌ನಲ್ಲಿ ಪ್ರಾವಿಜನ್‌ ಸ್ಟೋರ್‌ ಮಾಲಿಕನ ಕತ್ತು ಕೊಯ್ದು ಹತ್ಯೆ

Bengaluru Crime news: ಕೊಲೆ ನಡೆದ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ್​ ಈ ಬಗ್ಗೆ ಮಾಧ್ಯಮದವರ ಜೊತೆಗೆ ಮಾತನಾಡಿದ್ದು, ಕತ್ತು ಕೊಯ್ದು ಕೊಲೆ ಮಾಡಲಾಗಿದೆ ಎಂದು 112ಗೆ ಫೋನ್​ ಬಂದಿತ್ತು. ಕೂಡಲೇ ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಹರಿತವಾದ ಆಯುಧದಿಂದ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಪಕ್ಕದ ಮನೆಯ ನಿವಾಸಿಯೊಬ್ಬರು ಇದನ್ನು ನೋಡಿದ್ದಾರೆ. ಕೂಡಲೇ ಆರೋಪಿಯನ್ನು ಹಿಡಿಯಲು ಮುಂದಾಗಿದ್ದರು. ಈ ವೇಳೆ ಬೈಕ್ ಅಡ್ಡಗಟ್ಟುವಾಗ ಅವರ ಮೇಲೂ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾನೆ ಎಂದರು.

ಆನೇಕಲ್‌ನಲ್ಲಿ ಹತ್ಯೆಯಾದ ಮಾದೇಶ್

ಆನೇಕಲ್, ನ. 04: ಚಾಕುವಿನಿಂದ ಪ್ರಾವಿಜನ್ ಸ್ಟೋರ್ ಮಾಲೀಕನ ಕತ್ತು ಕೊಯ್ದು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ (murder case) ಮಾಡಿರುವ ಘಟನೆ ಮಂಗಳವಾರ ಹಾಡಹಗಲೇ ಬೆಂಗಳೂರು (Bengaluru crime news) ನಗರ ಜಿಲ್ಲೆಯ ಆನೇಕಲ್ (Anekal) ತಾಲೂಕಿನ ಕಿತ್ತಗಾನಹಳ್ಳಿಯಲ್ಲಿ ನಡೆದಿದೆ. ಮಾದೇಶ್ (40) ಕೊಲೆಯಾದ ವ್ಯಕ್ತಿ. ಮಾದೇಶ್,​ ಪ್ರಾವಿಜನ್ ಸ್ಟೋರ್​​ ಇಟ್ಟುಕೊಂಡಿದ್ದರು. ಇಂದು ಮನೆಯಲ್ಲಿದ್ದಾಗ ಏಕಾಏಕಿ ದುಷ್ಕರ್ಮಿಗಳು ಏರ್​ಗನ್ ಮತ್ತು ಚಾಕು ಸಮೇತ ಮನೆಗೆ ನುಗ್ಗಿ ಹತ್ಯೆಗೈದು ಪರಾರಿ ಆಗಿದ್ದಾರೆ.

ಘಟನಾ ಸ್ಥಳಕ್ಕೆ ಹೆಬ್ಬಗೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ್​ ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಕತ್ತು ಕೊಯ್ದು ಕೊಲೆ ಮಾಡಲಾಗಿದೆ ಎಂದು 112ಗೆ ಫೋನ್​ ಬಂದಿತ್ತು. ಕೂಡಲೇ ಹೆಬ್ಬಗೋಡಿ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಹರಿತವಾದ ಆಯುಧದಿಂದ ಕತ್ತು ಕೊಯ್ದು ಕೊಲೆ ಮಾಡಲಾಗಿದೆ. ಪಕ್ಕದ ಮನೆಯ ನಿವಾಸಿಯೊಬ್ಬರು ಇದನ್ನು ನೋಡಿದ್ದಾರೆ. ಕೂಡಲೇ ಆರೋಪಿಯನ್ನು ಹಿಡಿಯಲು ಮುಂದಾಗಿದ್ದರು. ಈ ವೇಳೆ ಬೈಕ್ ಅಡ್ಡಗಟ್ಟುವಾಗ ಅವರ ಮೇಲೂ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದಾನೆ ಎಂದರು.

ಘಟನಾ ಸ್ಥಳದಲ್ಲಿ ಬ್ಯಾಗ್, ಹೆಲ್ಮೆಟ್ ಸಿಕ್ಕಿದೆ. ಏರ್ ಪಿಸ್ತೂಲ್ ಮತ್ತು ಮೆಟಲ್ ಡಿಟೆಕ್ಟರ್, ಟಾರ್ಚ್ ಕೂಡ ಪತ್ತೆಯಾಗಿದೆ. ತಮಿಳುನಾಡಿನ ಡೆಂಕಣಿಕೋಟೆ ಸಮೀಪದ ಬಾರಂದೂರು ನಿವಾಸಿ ಮಾದೇಶ್​, ಸಿಗರೇಟ್ ವ್ಯಾಪಾರ ಮತ್ತು ಪ್ರಾವಿಜನ್ ಸ್ಟೋರ್​​ ಇಟ್ಟುಕೊಂಡಿದ್ದರು. ಕಳೆದ ಹದಿನೈದು ವರ್ಷಗಳಿಂದ ಕಾಚನಾಯಕನಹಳ್ಳಿಯಲ್ಲಿ ವಾಸವಾಗಿದ್ದರು. ಊರಿನಲ್ಲಿ ಜಮೀನು ಮಾರಾಟ ಮಾಡಿ ಇಲ್ಲಿ ಹೊಸ ಮನೆ ಕಟ್ಟುತ್ತಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್‌ ಗ್ಯಾಂಗ್ ವಿರುದ್ಧ ನ.3ಕ್ಕೆ ದೋಷಾರೋಪ ನಿಗದಿ

ಇತ್ತೀಚೆಗೆ ಗ್ಯಾಂಗ್ರೀನ್ ಆಗಿ ಕಾಲಿಗೆ ಗಾಯವಾಗಿ, ಮನೆಯಲ್ಲಿ ಇದ್ದರು. ಮನೆಯಲ್ಲಿ ಎರಡು ಲಕ್ಷ ರೂ. ಹಣ ಕೂಡ ಇತ್ತು. ದುಷ್ಕರ್ಮಿ ಅದನ್ನು ತೆಗೆದುಕೊಂಡು ಹೋಗಿಲ್ಲ. ಬೈಕ್​ನಲ್ಲಿ ಒಬ್ಬನೇ ಬಂದು ಕೃತ್ಯ ಎಸಗಿ ಹೋಗಿದ್ದಾನೆ. ಪರಿಚಿತರೇ ಮಾಡಿದ್ದಾರಾ ಅಥವಾ ಯಾವ ಉದ್ದೇಶಕ್ಕೆ ಮಾಡಲಾಗಿದೆ ಎಂದು ತನಿಖೆ ನಡೆಯುತ್ತಿದೆ. ಎಸಿಪಿ ಸತೀಶ್ ನೇತೃತ್ವದಲ್ಲಿ ಆರೋಪಿಯ ಪತ್ತೆಗೆ ಮೂರು ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ವಾಕಿಂಗ್‌ ಮಾಡುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ

ಮಹಿಳೆಯೊಬ್ಬರು ತನ್ನ ನಾಯಿಯೊಂದಿಗೆ ವಾಕಿಂಗ್‌ಗೆ ಹೋಗುತ್ತಿದ್ದಾಗ ವ್ಯಕ್ತಿಯೊಬ್ಬ ಲೈಂಗಿಕ ಕಿರುಕುಳ(Physical Harassment) ನೀಡಿದ ಆಘಾತಕಾರಿ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ ನಡೆದಿದೆ. ಇಂದಿರಾನಗರದಲ್ಲಿ ಈ ಘಟನೆ ನಡೆದಿದ್ದು, 33 ವರ್ಷದ ಮಹಿಳೆ ತನ್ನ ನಾಯಿಯೊಂದಿಗೆ ದಿನನಿತ್ಯದ ಬೆಳಗಿನ ವಾಕಿಂಗ್‌ ಮಾಡುತ್ತಿದ್ದಾಗ ಈ ಆಘಾತಕಾರಿ ಘಟನೆ ನಡೆದಿದೆ ಎನ್ನಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ ಹಿಂದಿನಿಂದ ಆಕೆಯ ಬಳಿಗೆ ಬಂದು "ಮೇಡಂ" ಎಂದು ಕರೆದಿದ್ದಾನೆ. ಆಕೆ ತಿರುಗಿ ನೋಡಿದಾಗ, ಆ ವ್ಯಕ್ತಿ ಆಕೆಯ ಎದುರು ಹಸ್ತಮೈಥುನ ಮಾಡಿಕೊಳ್ಳಲು ಪ್ರಾರಂಭಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆರೋಪಿ ಏಕಾಏಕಿ ಈ ಹುಚ್ಚಾಟ ಮೆರೆದಿರುವುದರಿಂದ ಆಘಾತಗೊಂಡ ಸಂತ್ರಸ್ತ ಮಹಿಳೆ ಮನೆಗೆ ಓಡಿದ್ದಾರೆ. ನಂತರ ನಡೆದ ವಿಚಾರವನ್ನು ತನ್ನ ಸಹೋದರಿ ಮತ್ತು ಸ್ನೇಹಿತನಿಗೆ ತಿಳಿಸಿದ್ದಾಳೆ. ಇದರ ನಂತರ, ಆಕೆ ಪೊಲೀಸರಿಗೆ ದೂರು ನೀಡಿದ್ದಾಳೆ. ಇಂದಿರಾನಗರ ಪೊಲೀಸರು ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 75 ರ ಅಡಿಯಲ್ಲಿ ಸಾರ್ವಜನಿಕ ಅಸಭ್ಯತೆ ಮತ್ತು ಲೈಂಗಿಕ ಕಿರುಕುಳಕ್ಕಾಗಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ ಮತ್ತು ಆರೋಪಿಗಳನ್ನು ಗುರುತಿಸಲು ಮತ್ತು ಹಿಡಿಯಲು ಪ್ರಯತ್ನಿಸುತ್ತಿದ್ದಾರೆ.

ಇದನ್ನೂ ಓದಿ: Assault Case: ಚಿಕ್ಕಮಗಳೂರಿನಲ್ಲಿ ಅಮಾನವೀಯ ಘಟನೆ, ಶಿಕ್ಷಕಿಯ ನಗ್ನಗೊಳಿಸಿ ಮರಕ್ಕೆ ಕಟ್ಟಿಹಾಕಿ ಹಲ್ಲೆ

ಹರೀಶ್‌ ಕೇರ

View all posts by this author