ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Rowdy Sheeter murder case: ತಾಯಿಯ ಕಣ್ಣೆದುರೇ ರೌಡಿಶೀಟರ್‌ ಮಗನ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ

ಕೊಲೆಯಾದ ಪವನ್ ಕುಮಾರ್ ಹಿಂದೆ ಮರ್ಡರ್ ಪ್ರಕರಣವೊಂದರಲ್ಲಿ A5 ಆರೋಪಿಯಾಗಿ ಜೈಲು ಶಿಕ್ಷೆ ಅನುಭವಿಸಿದ್ದ. ಕಳೆದ ಮೇ ತಿಂಗಳಲ್ಲಿ ಜೈಲಿನಿಂದ ಬಿಡುಗಡೆಗೊಂಡು ಮನೆಗೆ ಮರಳಿದ್ದ. ಮಗ ಇನ್ನು ಕೆಟ್ಟ ಹಾದಿ ಹಿಡಿಯೋದು ಬೇಡ. ಒಳ್ಳೆಯವನಾಗಿ ಬದಲಾಗಲಿ ಎಂಬ ಕಾರಣಕ್ಕೆ ಒಂದೂವರೆ ತಿಂಗಳ ಹಿಂದಷ್ಟೇ ಮನೆ ಸಮೀಪವೇ ಕುಟುಂಬದವರು ಅವನಿಗೆ ಬೇಕರಿ ಉದ್ಯಮ ನಡೆಸಲು ಅಂಗಡಿ ತೆರೆದು ಕೊಟ್ಟಿದ್ದರು.

ತಾಯಿಯ ಕಣ್ಣೆದುರೇ ರೌಡಿಶೀಟರ್‌ ಮಗನ ಕೊಚ್ಚಿ ಕೊಲೆ

ಕೊಲೆಯಾದ ಪವನ್‌ ಕುಮಾರ್ -

ಹರೀಶ್‌ ಕೇರ
ಹರೀಶ್‌ ಕೇರ Feb 26, 2026 10:04 AM

ಬೆಂಗಳೂರು, ಫೆ.26: ನಗರದ ಉತ್ತರ ಭಾಗದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನನ್ನು ಆತನ ತಾಯಿಯ ಕಣ್ಣೆದುರೇ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ನಗರವನ್ನು ಬೆಚ್ಚಿಬೀಳಿಸುವಂತಿದೆ. ಬೆಂಗಳೂರು ನಗರದ ಥಣಿಸಂದ್ರ ವ್ಯಾಪ್ತಿಯ ಅಮರಜ್ಯೋತಿ ಲೇಔಟ್‌ನಲ್ಲಿ ಬುಧವಾರ ಸಂಜೆ ಈ ಭೀಕರ ಕೊಲೆ ನಡೆದಿದೆ. ಡಿಜೆ ಹಳ್ಳಿ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ ಪವನ್ ಕುಮಾರ್ (25) ಎಂಬ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಹೆತ್ತ ತಾಯಿ ಎದುರೇ ಕೊಚ್ಚಿ ಕೊಂದರು

ಪ್ರತ್ಯಕ್ಷ ಸಾಕ್ಷಿಗಳ ಮಾಹಿತಿ ಪ್ರಕಾರ, ಮೂರು ಬೈಕ್‌ಗಳಲ್ಲಿ ಬಂದಿದ್ದ ಆರು ಮಂದಿ ಆರೋಪಿಗಳು ಹೆಲ್ಮೆಟ್ ಧರಿಸಿಕೊಂಡು ಪವನ್ ಕುಮಾರ್ ಮನೆ ಬಳಿ ದಾಳಿ ನಡೆಸಿದ್ದಾರೆ. ಪವನ್ ಮನೆಗೆ ಬಂದು ನಿಂತ ಕ್ಷಣದಲ್ಲೇ, ಆತನ ಹೆತ್ತ ತಾಯಿಯ ಕಣ್ಣೆದುರಿನಲ್ಲೇ ಆರೋಪಿಗಳು ಅವನ ಮೇಲೆ ಮನಬಂದತೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಹೆತ್ತ ಮಗನನ್ನು ರಕ್ಷಿಸಲು ಸಹಾಯಕ್ಕಾಗಿ ತಾಯಿ ಕೋಮಲ ಗೋಗರೆದ ದೃಶ್ಯ ಮನಕಲಕುವಂತಿತ್ತು.

ಹತ್ಯೆ ನಡೆದ ಸುದ್ದಿ ತಿಳಿಯುತ್ತಿದ್ದಂತೆ ಸಂಪಿಗೆಹಳ್ಳಿ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ. ಪವನ್ ಕುಮಾರ್ ಹಿಂದೆ ಮರ್ಡರ್ ಪ್ರಕರಣವೊಂದರಲ್ಲಿ A5 ಆರೋಪಿಯಾಗಿ ಜೈಲು ಶಿಕ್ಷೆ ಅನುಭವಿಸಿದ್ದ. ಕಳೆದ ಮೇ ತಿಂಗಳಲ್ಲಿ ಜೈಲಿನಿಂದ ಬಿಡುಗಡೆಗೊಂಡು ಮನೆಗೆ ಮರಳಿದ್ದನು. ಮಗ ಇನ್ನು ಕೆಟ್ಟ ಹಾದಿ ಹಿಡಿಯೋದು ಬೇಡ. ಒಳ್ಳೆಯವನಾಗಿ ಬದಲಾಗಲಿ ಎಂಬ ಕಾರಣಕ್ಕೆ ಒಂದೂವರೆ ತಿಂಗಳ ಹಿಂದಷ್ಟೇ ಮನೆ ಸಮೀಪವೇ ಕುಟುಂಬದವರು ಅವನಿಗೆ ಬೇಕರಿ ಉದ್ಯಮ ನಡೆಸಲು ಅಂಗಡಿ ತೆರೆದು ಕೊಟ್ಟಿದ್ದರು.

ಮಗಳಿಗೆ SSLC ಪರೀಕ್ಷೆ; ಕೊಲೆ ಅಪರಾಧಿ ತಂದೆಗೆ ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್‌