ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Murder Case: ಬೆಂಗಳೂರಿನಲ್ಲಿ ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಪುತ್ರರು

ಆಸ್ತಿ ಹಂಚಿಕೆ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ತಂದೆ ಮತ್ತು ಮಕ್ಕಳ ನಡುವೆ ತೀವ್ರ ಗಲಾಟೆ ನಡೆಯುತ್ತಿತ್ತು. ಇದೇ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ, ಪುತ್ರರು ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮುನಿಕೃಷ್ಣ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ.

ಸಾಂದರ್ಭಿಕ ಚಿತ್ರ

ಬೆಂಗಳೂರು, ಫೆ.17: ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಅಪರಾಧ ಕೃತ್ಯ (Crime news) ನಡೆದಿದ್ದು, ಆಸ್ತಿಗಾಗಿ ತಂದೆಯನ್ನೇ (Father) ಇಬ್ಬರು ಪಾಪಿ ಪುತ್ರರು (sons) ಹತ್ಯೆಗೈದ (Murder Case) ಘಟನೆ ನಡೆದಿದೆ. ಬೆಂಗಳೂರಿನ (Bengaluru) ಇಂದಿರಾನಗರದ ದೂಪನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಮಕ್ಕಳಿಂದ ಹಲ್ಲೆಗೊಳಗಾಗಿದ್ದ ತಂದೆ ಮುನಿಕೃಷ್ಣ (70) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಪುತ್ರರಾದ ಮೋಹನ್ ಕುಮಾರ್, ಗಜೇಂದ್ರ ಎಂಬವರು ಆಸ್ತಿಗಾಗಿ ತಂದೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಸ್ತಿ ಹಂಚಿಕೆ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ತಂದೆ ಮತ್ತು ಮಕ್ಕಳ ನಡುವೆ ತೀವ್ರ ಗಲಾಟೆ ನಡೆಯುತ್ತಿತ್ತು. ಇದೇ ವಿಚಾರವಾಗಿ ನಡೆದ ಜಗಳ ವಿಕೋಪಕ್ಕೆ ತಿರುಗಿ, ಪುತ್ರರು ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮುನಿಕೃಷ್ಣ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ. ಕೃತ್ಯ ಎಸಗಿದ ಬಳಿಕ ಆರೋಪಿಗಳಾದ ಮೋಹನ್ ಕುಮಾರ್ ಮತ್ತು ಗಜೇಂದ್ರ ತಲೆಮರೆಸಿಕೊಂಡಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Double Murder: ಬೆಂಗಳೂರಿನಲ್ಲಿ ಟೆಕ್ಕಿಯಿಂದ ಹಣಕಾಸಿಗಾಗಿ ತಂದೆ- ತಾಯಿಯ ಹತ್ಯೆ

ಕಾಲುವೆಗೆ ಕಾಲು ಜಾರಿ ಬಿದ್ದು ತಂದೆ- ಮಗ ಸಾವು

ಬೀದರ್: ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದು ತಂದೆ, ಮಗ ಮೃತಪಟ್ಟಿರುವ ಘಟನೆ ಬೀದರ್ (Bidar News) ಜಿಲ್ಲೆ ಭಾಲ್ಕಿ ತಾಲೂಕಿನ ಬ್ಯಾಲಹಳ್ಳಿ ಗ್ರಾಮದ ಬಳಿ ನಡೆದಿದೆ. ಹಳ್ಳಿಖೇಡ್(ಬಿ) ಗ್ರಾಮದ ವಿಶ್ವನಾಥ (50) ಮತ್ತು ಅಮರೇಶ (23) ಮೃತರು. ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಪೋಲಿಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿ, ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ.

ಬೀದರ್‌ನಲ್ಲಿ ಸಿಮೆಂಟ್ ಖಾಲಿ ಮಾಡಿ ವಾಪಸ್ ಊರಿನತ್ತ ತಂದೆ-ಮಗ ಇಬ್ಬರೂ ಹೋಗುತ್ತಿದ್ದರು. ಈ ವೇಳೆ ನೀರು ಕಂಡ ಹಿನ್ನೆಲೆ ಅಮರೇಶ್ ಕೈಕಾಲು ತೊಳೆದುಕೊಳ್ಳಲೆಂದು ಕಾಲುವೆಗೆ ಇಳಿದಿದ್ದ. ಆ ಸಂದರ್ಭ ಕಾಲು ಜಾರಿ ಕಾರಂಜಾ ಡ್ಯಾಂನ ಕಾಲುವೆಗೆ ಬಿದ್ದಿದ್ದಾನೆ. ಮಗ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ತಂದೆ ವಿಶ್ವನಾಥ ಜಮಾದಾರ್ ಕೂಡಲೇ ಆತನ ರಕ್ಷಣೆಗೆಂದು ಹೋಗಿದ್ದಾರೆ. ಆದರೆ ದುರಾದೃಷ್ಟವಶಾತ್​​ ತಂದೆ-ಮಗ ಇಬ್ಬರೂ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಜೈಲಿನಲ್ಲಿ ಭಯೋತ್ಪಾದಕ ಅಬ್ದುಲ್ ರೆಹಮಾನ್ ಹತ್ಯೆಗೈದ ಕಾಶ್ಮೀರಿ ಕೈದಿ!

ಹರೀಶ್‌ ಕೇರ

View all posts by this author