Bengaluru Crime News: ಪಾರ್ಟಿಗೆ ದಾಳಿ ಮಾಡಿ ಹಣ ಕೇಳಿದ ಪೊಲೀಸರು, ಬಾಲ್ಕನಿಯಿಂದ ಜಿಗಿದ ಯುವತಿ ಗಂಭೀರ
ಪಾರ್ಟಿಯ ವೇಳೆ ಪೊಲೀಸರು ಬಂದ ವಿಚಾರ ತಿಳಿದ ಯುವತಿ ವೈಷ್ಣವಿ ಭಯದಿಂದ ಬಾಲ್ಕನಿಗೆ ತೆರಳಿ, ಅಲ್ಲಿಂದ ಹಾರಿದ್ದಾಳೆ ಎಂದು ಹೇಳಲಾಗಿದೆ. ಕೆಳಗೆ ಬಿದ್ದ ವೇಳೆ ಕಬ್ಬಿಣದ ಗ್ರಿಲ್‌ಗೆ ತಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ನಡುವೆ ಪಾರ್ಟಿ ನಡೆಸುತ್ತಿದ್ದ ಯುವಕರ ಬಳಿ ಪೊಲೀಸರು ಹಣ ಕೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಗಾಯಗೊಂಡ ಯುವತಿ -
ಬೆಂಗಳೂರು, ಡಿ.15: ಪೊಲೀಸರೇ ಅಪರಾಧ ಕೃತ್ಯಗಳಲ್ಲಿ (Bengaluru Crime News) ಶಾಮೀಲಾಗಿರುವ ಹಲವು ಘಟನೆಗಳು ಇತ್ತೀಚೆಗೆ ವರದಿಯಾಗಿದ್ದವು. ಅಂಥದೇ ಇನ್ನೊಂದು ಗಂಭೀರ ಅಪರಾಧದ ಆರೋಪ ಬೆಂಗಳೂರಿನ ಪೊಲೀಸರ (Bangalore police) ಮೇಲೆ ಕೇಳಿಬಂದಿದೆ. ಪಾರ್ಟಿ (Party) ಮಾಡುತ್ತಿದ್ದ ಯುವಕ- ಯುವತಿಯರಿಂದ ಪೊಲೀಸರು ರೈಡ್ (police raid) ಮಾಡಿ ಹಣ ಕೇಳಿದ್ದಕ್ಕಾಗಿ ಭಯಗೊಂಡ ಯುವತಿಯೊಬ್ಬಳು ಹೋಟೆಲ್ ಬಾಲ್ಕನಿಯಿಂದ (balcony) ಕೆಳಗೆ ಹಾರಿ (jump) ಗಾಯಗೊಂಡಿರುವ ಘಟನೆ ನಗರದಲ್ಲಿ ಪೊಲೀಸರ ಕಾರ್ಯವೈಖರಿ ಬಗ್ಗೆ ಸಂಚಲನ ಮೂಡಿಸಿದೆ.
ಹೋಟೆಲ್ ಬಾಲ್ಕನಿಯಿಂದ ಜಿಗಿದ ಯುವತಿಯನ್ನು ಕುಂದಲಹಳ್ಳಿ ನಿವಾಸಿ ವೈಷ್ಣವಿ (21) ಎಂದು ಗುರುತಿಸಲಾಗಿದೆ. ಆಕೆಯ ತಲೆ, ಕೈ ಮತ್ತು ದೇಹದ ಹಲವು ಭಾಗಗಳಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ವೈಷ್ಣವಿ ಸದ್ಯ ಕುಂದಲಹಳ್ಳಿಯ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವು–ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.
ಶನಿವಾರ ರಾತ್ರಿ ವೈಷ್ಣವಿ ಸ್ನೇಹಿತರೊಂದಿಗೆ ಎಚ್‌ಎಎಲ್ ಎಇಸಿಎಸ್ ಲೇಔಟ್‌ನಲ್ಲಿರುವ ಹೋಟೆಲ್‌ಗೆ ಪಾರ್ಟಿಗಾಗಿ ತೆರಳಿದ್ದಳು. ಎಂಟು ಜನ ಸ್ನೇಹಿತರು ಸೇರಿ ಮೂರು ರೂಮ್‌ಗಳನ್ನು ಬುಕ್ ಮಾಡಿಕೊಂಡು ಹಾಡು ಹಾಕಿಕೊಂಡು ಡ್ಯಾನ್ಸ್ ಮಾಡುತ್ತಿದ್ದ ವೇಳೆ, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಕೆಲವೇ ಸಮಯದಲ್ಲಿ ಹೊಯ್ಸಳ ಪೊಲೀಸರು ಹೋಟೆಲ್‌ಗೆ ಆಗಮಿಸಿದ್ದಾರೆ. ಈ ವೇಳೆ ಪೊಲೀಸರು ಬಂದ ವಿಚಾರ ತಿಳಿದ ವೈಷ್ಣವಿ ಭಯದಿಂದ ಬಾಲ್ಕನಿಗೆ ತೆರಳಿ, ಅಲ್ಲಿಂದ ಹಾರಿದ್ದಾಳೆ ಎಂದು ಹೇಳಲಾಗಿದೆ. ಕೆಳಗೆ ಬಿದ್ದ ವೇಳೆ ಕಬ್ಬಿಣದ ಗ್ರಿಲ್‌ಗೆ ತಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ತರಗತಿಯಲ್ಲಿ ಕುಳಿತು ಪಾಠ ಕೇಳುತ್ತಿದ್ದಾಗಲೇ ಕುಸಿದು ಬಿದ್ದ ವಿದ್ಯಾರ್ಥಿನಿ ಸಾವು; ಕೊನೆಯ ಕ್ಷಣ ಕ್ಯಾಮರಾದಲ್ಲಿ ಸೆರೆ
ಈ ನಡುವೆ ಪಾರ್ಟಿ ನಡೆಸುತ್ತಿದ್ದ ಯುವಕರ ಬಳಿ ಪೊಲೀಸರು ಹಣ ಕೇಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದೂರು ಬಂದಿದೆ ಎಂದು ಹೇಳಿ ಪಾರ್ಟಿ ವಿಡಿಯೋ ತೋರಿಸಿದ್ದ ಪೊಲೀಸರು, ಬಳಿಕ ಹಣ ಕೇಳಿದ್ದಾರೆ ಎಂದು ಯುವಕರು ಆರೋಪಿಸಿದ್ದಾರೆ. ಯುವಕರು ಫೋನ್‌ಪೇ ಮಾಡುತ್ತೇವೆಂದಾಗ ನಿರಾಕರಿಸಿದ ಪೊಲೀಸರು ನಗದು ತರಲು ಒತ್ತಾಯಿಸಿದ್ದರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಯುವಕನೊಬ್ಬ ಎಟಿಎಂಗೆ ಹೋಗಿ ಹಣ ತರುತ್ತೇನೆಂದು ಕೆಳಗೆ ಬಂದ ವೇಳೆ ಯುವತಿ ಹೋಟೆಲ್ ಬಾಲ್ಕನಿಯಿಂದ ಹಾರಿದ್ದಾಳೆ ಎನ್ನಲಾಗಿದೆ. ಘಟನೆ ಕುರಿತು ಹೆಚ್‌ಎಎಲ್ ಪೊಲೀಸ್ ಠಾಣೆಗೆ ದೂರು ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಪೊಲೀಸರು ಪ್ರಕರಣದ ಬಗ್ಗೆ ತನಿಖೆ ಕೈಗೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹೋಟೆಲ್ ಮಾಲೀಕರ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಯುವತಿ ತಂದೆ ಕೊಟ್ಟ ದೂರಿನ ಮೇರೆಗೆ ಹೆಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಹೋಟೆಲ್ ಲಾಡ್ಜ್‌ನ ಬಾಲ್ಕನಿಯಲ್ಲಿ ಸುರಕ್ಷತೆ ವಹಿಸದೆ ನಿರ್ಲಕ್ಷ್ಯ ಎಂದು ದೂರು ದಾಖಲಿಸಲಾಗಿದೆ. ಪೊಲೀಸರ ತಪ್ಪು ಮುಚ್ಚಿಡಲು ಹೋಟೆಲ್ ಮಾಲೀಕರ ಮೇಲೆ ಎಫ್‌ಐಆರ್ ಮಾಡಿರುವ ಕುರಿತು ಅನುಮಾನ ವ್ಯಕ್ತವಾಗಿದೆ.