ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಮಗುವಿನ ತಾಯಿ ಬಲಿ; ಕುಟುಂಬಸ್ಥರ ವಿರುದ್ಧ ದೂರು ದಾಖಲು

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುಳಿಮಾವಿನ ಹಳೆ ಪೋಸ್ಟ್ ಆಫೀಸ್ ಬಳಿ ಈ ಘಟನೆ ನಡೆದಿದೆ. ಮೃತಳನ್ನು ವಂದನಾ ಎಂದು ಗುರುತಿಸಲಾಗಿದ್ದು, ಮೂರು ವರ್ಷಗಳ ಹಿಂದೆ ವಿಕ್ರಂ ಶೇಷ ಎಂಬಾತನ ಜೊತೆ ವಂದನಾ ವಿವಾಹವಾಗಿದ್ದರು.

ವರದಕ್ಷಿಣೆ ಕಿರುಕುಳಕ್ಕೆ ಮೂರು ತಿಂಗಳ ಮಗುವಿನ ತಾಯಿ ಬಲಿ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar May 2, 2026 11:20 AM

ಬೆಂಗಳೂರು: ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಒಬ್ಬರು ನೇಣು ಬಿಗಿದುಕೊಂಡು ( dowry harassment) ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುಳಿಮಾವಿನ ಹಳೆ ಪೋಸ್ಟ್ ಆಫೀಸ್ ಬಳಿ ಈ ಘಟನೆ ನಡೆದಿದೆ. ಮೃತಳನ್ನು ವಂದನಾ ಎಂದು ಗುರುತಿಸಲಾಗಿದ್ದು, ಮೂರು ವರ್ಷಗಳ ಹಿಂದೆ ವಿಕ್ರಂ ಶೇಷ ಎಂಬಾತನ ಜೊತೆ ವಂದನಾ ವಿವಾಹವಾಗಿದ್ದರು. ಮದುವೆ ಸಂದರ್ಭದಲ್ಲಿ ನಾಲ್ಕು ಲಕ್ಷ ರೂಪಾಯಿ ಮೌಲ್ಯದ ಬೈಕ್ ಹಾಗೂ ಚಿನ್ನಾಭರಣಗಳನ್ನು ವರದಕ್ಷಿಣೆ ರೂಪದಲ್ಲಿ ನೀಡಲಾಗಿತ್ತು. ಪ್ರಸ್ತುತ ಈ ದಂಪತಿಗೆ ಮೂರು ತಿಂಗಳ ಪುಟ್ಟ ಮಗುವಿದೆ.

ಮದುವೆಯಾದ ಕೆಲವು ದಿನಗಳ ನಂತರ ಪತಿ ವಿಕ್ರಂ ಶೇಷ ಹೆಚ್ಚುವರಿ ವರದಕ್ಷಿಣೆ ತರುವಂತೆ ಪತ್ನಿಯ ಜೊತೆ ಪದೇ ಪದೇ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ವಂದನಾ ಹಲವು ಬಾರಿ ವಂದನಾ ಹೇಳಿದ್ದರು. ಈ ಹಿಂದೆ ಎರಡೂ ಕುಟುಂಬಗಳ ನಡುವೆ ರಾಜಿ ಸಂಧಾನ ನಡೆಸಿ, ಬುದ್ಧಿ ಹೇಳಿ ಕಳುಹಿಸಲಾಗಿತ್ತು. ಆದರೂ ಕಿರುಕುಳ ಮಾತ್ರ ನಿಂತಿರಲಿಲ್ಲ ಎಂದು ಕುಟುಂಬಸ್ಥರು ದೂರಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ವಂದನಾ ಅವರ ಪೋಷಕರು ನೀಡಿದ ದೂರಿನ ಮೇರೆಗೆ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪತಿ ವಿಕ್ರಂ ಶೇಷ, ಅತ್ತೆ ಅಮೃತ, ಮಾವ ಶ್ರೀನಿವಾಸ್ ಮತ್ತು ಮೈದುನ ವಿನಿಷ್ ಎಂಬುವವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದರು. ಪರೀಕ್ಷೆಯ ನಂತರ ಮೃತದೇಹವನ್ನು ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಹುಳಿಮಾವು ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Dharwad News: ಗಾಂಜಾ ಸೇವಿಸದಿದ್ರೂ ಕೇಸ್‌; ಧಾರವಾಡದಲ್ಲಿ ಪೊಲೀಸರ ಕಿರುಕುಳಕ್ಕೆ ಹೆದರಿ ವಿದ್ಯಾರ್ಥಿ ಆತ್ಮಹತ್ಯೆ

ಟೆಕ್ಕಿ ಆತ್ಮಹತ್ಯೆ

ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದ ಮನನೊಂದ ಸಾಫ್ಟ್ ವೇರ್‌ ಎಂಜಿನಿಯರ್‌ ಆತಹತ್ಯೆ ಮಾಡಿಕೊಂಡಿರುವ ಘಟನೆ ತಲಘಟ್ಟಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೂಲತಃ ತಮಿಳುನಾಡಿನ ತಿರುವಾರೂರ್‌ ಜಿಲ್ಲೆಯ ನೀಡಮಂಗಳಂ ನಿವಾಸಿಯಾಗಿರುವ ಭುವನೇಶ್ವರಿ (29), ಆತಹತ್ಯೆಗೆ ಶರಣಾದ ಟೆಕ್ಕಿ. ಘಟನೆ ಸಂಬಂಧ ಪತಿ ಹರೀಶ್‌ ಕುಮಾರ್‌, ಅತ್ತೆ ಕಾರ್ತಿಗೈವಲ್ಲಿ, ಮೈದುನ ರಾಕೇಶ್‌ ಕುಮಾರ್‌ ವಿರುದ್ಧ ದೂರು ದಾಖಲಾಗಿದೆ.

ತಮಿಳುನಾಡು ಮೂಲದವರೇ ಆದ ಸಾಫ್ಟ್ ವೇರ್‌ ಎಂಜಿನಿಯರ್‌ ಹರೀಶ್‌ ಕುಮಾರ್‌ ಎಂಬಾತನನ್ನು ಭುವನೇಶ್ವರಿ ಪ್ರೀತಿಸಿದ್ದು, ಎರಡು ಕುಟುಂಬದವರ ಪರಸ್ಪರ ಒಪ್ಪಿಗೆ ಪಡೆದು ಇವರಿಬ್ಬರು ಮದುವೆಯಾಗಿದ್ದರು. ಸುಮಾರು 25 ಲಕ್ಷ ರೂ. ಖರ್ಚು ಮಾಡಿ ಭುವನೇಶ್ವರಿ ಕುಟುಂಬದವರು ನಾಲ್ಕು ವರ್ಷದ ಹಿಂದೆ ಮದುವೆ ಮಾಡಿದ್ದರು. ದಂಪತಿ ಸಾಫ್ಟ್ ವೇರ್‌ ಎಂಜಿನಿಯರ್‌ ಆಗಿದ್ದು, ದಂಪತಿಗೆ ಒಂದೂವರೆ ವರ್ಷದ ಮಗುವಿದೆ.