ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Bengaluru Robbery Case: ಬೆಂಗಳೂರು ದರೋಡೆ: ಇಬ್ಬರ ಬಂಧನ, 5.30 ಕೋಟಿ ರೂ. ಹಣ ಸೀಜ್‌

ಬೆಂಗಳೂರಿನಲ್ಲಿ ನಡೆದ ಭಾರಿ ದರೋಡೆ ಪ್ರಕರಣ (Bengaluru Robbery Case) ರಾಷ್ಟ್ರೀಯ ಸುದ್ದಿಯಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆಂಧ್ರಪ್ರದೇಶದಲ್ಲಿ 5 ಕೋಟಿ 30 ಲಕ್ಷ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಿಎಂಎಸ್‌ನ ಮಾಜಿ ನೌಕರ ಝೆವಿಯರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ಸ್ನೇಹಿತರು ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಉಳಿದ ಹಣದ ಸಮೇತ ಆರೋಪಿಗಳು ಪರಾರಿಯಾಗಿದ್ದು ಹಣಕ್ಕಾಗಿ ಮತ್ತು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಬೆಂಗಳೂರು ದರೋಡೆ: ಇಬ್ಬರ ಬಂಧನ, 5.30 ಕೋಟಿ ರೂ. ಹಣ ಸೀಜ್‌

ಬೆಂಗಳೂರು ದರೋಡೆ ಪ್ರಕರಣ ಆರೋಪಿ -

ಹರೀಶ್‌ ಕೇರ
ಹರೀಶ್‌ ಕೇರ Nov 21, 2025 12:30 PM

ಬೆಂಗಳೂರು: ಬೆಂಗಳೂರು ನಗರದಲ್ಲಿ ಹಾಡಹಗಲೇ ನಡೆದ ಏಳು ಕೋಟಿ ರೂ. ನಗದು ದರೋಡೆ (Bengaluru robbery case) ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಸಿಎಂಎಸ್ ಮಾಜಿ ನೌಕರ ಝೆವಿಯರ್‌ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈಗಾಗಲೇ ಪ್ರಕರಣದ ಮಾಸ್ಟರ್‌ಮೈಂಡ್‌ ಎಂದು ತರ್ಕಿಸಲಾಗಿರುವ ಪೊಲೀಸ್‌ ಕಾನ್‌ಸ್ಟೇಬಲ್‌ ಅಣ್ಣಪ್ಪನನ್ನು ವಶಕ್ಕೆ ಪಡೆದು ಪ್ರಶ್ನಿಸಲಾಗುತ್ತಿದೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆಂಧ್ರಪ್ರದೇಶದಲ್ಲಿ 5 ಕೋಟಿ 30 ಲಕ್ಷ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸಿಎಂಎಸ್‌ನ ಮಾಜಿ ನೌಕರ ಝೆವಿಯರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ಸ್ನೇಹಿತರು ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಇನ್ನು ಉಳಿದ ಹಣದ ಸಮೇತ ಆರೋಪಿಗಳು ಪರಾರಿಯಾಗಿದ್ದು ಹಣಕ್ಕಾಗಿ ಮತ್ತು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಪೊಲೀಸರು ದರೋಡೆ ಕೇಸ್‌ ಸಂಬಂಧ ಒಬ್ಬೊಬ್ಬರಾಗಿ ಶಂಕಿತರನ್ನು ಬಂಧಿಸಿ ಪ್ರಶ್ನಿಸುತ್ತಿದ್ದಾರೆ. ಪ್ರಕರಣ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಎಂಬಾತನನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್‌ಮೈಂಡ್ ಎನ್ನಲಾಗುತ್ತಿದೆ. ಇವನೇ ಹುಡುಗರನ್ನು ದರೋಡೆಗೆ ಸಿದ್ಧಪಡಿಸಿದ್ದ ಎಂಬ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ.

ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ಗ್ಯಾಂಗ್ ರೆಡಿ ಮಾಡಿದ್ದ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್, ದರೋಡೆ ಕುರಿತು ಪಕ್ಕಾ ತರಬೇತಿ ನೀಡಿದ್ದ. ಹೇಗೆ ರಾಬರಿ ಮಾಡಬೇಕು, ಹೇಗೆ ತಪ್ಪಿಸಿಕೊಳ್ಳಬೇಕೆಂದು ಟ್ರೈನಿಂಗ್ ಕೂಡ ಕೊಟ್ಟಿದ್ದ. ಪೊಲೀಸರು ಹೇಗೆ ಪತ್ತೆ ಕೆಲಸ ಮಾಡುತ್ತಾರೆಂದು ಸಹ ತಿಳಿಸಿದ್ದ ಎನ್ನಲಾಗಿದೆ. ಅದರಂತೆ ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ತಂಡ 7.11 ಕೋಟಿ ರೂ. ದರೋಡೆ ಮಾಡಿದೆ. ಸಿಎಂಎಸ್ ಸೆಕ್ಯೂರಿಟಿ ಎಜೆನ್ಸಿಯ ಮಾಜಿ ಉದ್ಯೋಗಿ ಕೂಡ ದರೋಡೆಗೆ ಸಾಥ್ ಕೊಟ್ಟಿದ್ದಾನೆ.

ಇದನ್ನೂ ಓದಿ: Bengaluru Robbery Case: ಬೆಂಗಳೂರು ದರೋಡೆ ಪ್ರಕರಣ; ಶಂಕಿತ ಆರೋಪಿಗಳ ಪೋಟೊ ಬಿಡುಗಡೆ ಮಾಡಿದ ಪೊಲೀಸರು

ದರೋಡೆಕೋರರ ಪತ್ತೆಗೆ ನಾಲ್ವರು ಜಂಟಿ ಪೊಲೀಸ್ ಆಯುಕ್ತರು, 18 ಡಿಸಿಪಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇನ್ನೋವಾ ಕಾರು ಗುರುವಾರ ತಿರುಪತಿಯಲ್ಲಿ ಸಿಕ್ಕಿದೆ. ಆಂಧ್ರ ಪ್ರದೇಶದ ಚಿತ್ತೂರಿನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರಿನಲ್ಲಿ ಓಡಾಡುವಾಗ ಕಲ್ಯಾಣನಗರದ ಸ್ವಿಫ್ಟ್ ಕಾರಿನ ನಕಲಿ ನಂಬರ್ ಪ್ಲೇಟ್ ಬಳಸಿದ್ದ ದರೋಡೆಕೋರರು, ಕರ್ನಾಟಕದ ಗಡಿ ದಾಟುತ್ತಿದ್ದಂತೆ ಉತ್ತರಪ್ರದೇಶ ನೋಂದಣಿಯ ನಂಬರ್ ಪ್ಲೇಟ್ ಇನ್ನೋವಾ ಕಾರಿಗೆ ಅಳವಡಿಸಿದ್ದರು. ದರೋಡೆಕೋರರು ಓಡಾಡಿದ ರಸ್ತೆಯುದ್ದಕ್ಕೂ ಸಿಸಿಟಿವಿ, ಮೊಬೈಲ್ ಲೊಕೇಷನ್ ಆಧರಿಸಿ ಕಾರ್ಯಾರಚಣೆ ನಡೆಸಿದ್ದ ಪೊಲೀಸರು ಆರೋಪಿಗಳನ್ನು ಹಿಡಿದಿದ್ದಾರೆ. ಈ ವೇಳೆ ಆರೋಪಿಗಳು ಹಿಂದಿ ಮಾತಾಡುವ ಮೂಲಕ ಪೊಲೀಸರ ದಾರಿ ತಪ್ಪಿಸಲು ಯತ್ನಿಸಿದ್ದಾರೆ.

ಇದನ್ನೂ ಓದಿ: Bengaluru Robbery Case: ಬೆಂಗಳೂರು ದರೋಡೆ ಪ್ರಕರಣದಲ್ಲಿದೆಯಾ ಕಾನ್ಸ್‌ಟೇಬಲ್ ಕೈವಾಡ? ಶಾಕಿಂಗ್‌ ಸಂಗತಿ ಬಯಲು