ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬೆಂಗಳೂರಿನಲ್ಲಿ 3 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯ‌ರ್

Lokayukta Raid: ವಿದ್ಯುತ್ ಮೀಟರ್ ಸಂಪರ್ಕ ಮರುಚಾಲನೆ ಮತ್ತು ನೂತನ ಸಂಪರ್ಕ ನೀಡಲು 3 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬೆಂಗಳೂರಿನ ಇಂದಿರಾನಗರದ ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯ‌ರ್ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್‌ ದೇವರಾಜ್ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆದಿದೆ.

3 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬೆಸ್ಕಾಂ ಎಂಜಿನಿಯ‌ರ್ ಅರೆಸ್ಟ್‌

ಸಾಂದರ್ಭಿಕ ಚಿತ್ರ -

Prabhakara R
Prabhakara R Feb 9, 2026 11:06 PM

ಬೆಂಗಳೂರು: ವಿದ್ಯುತ್ ಮೀಟರ್ ಸಂಪರ್ಕ ಮರುಚಾಲನೆ ಮಾಡಲು ಮತ್ತು ನೂತನ ಸಂಪರ್ಕ ನೀಡಲು 3 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯ‌ರ್, ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ (Lokayukta Raid) ನಗರದಲ್ಲಿ ನಡೆದಿದೆ. ಬೆಸ್ಕಾಂನ ಇಂದಿರಾ ನಗರ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯ‌ರ್ (ಇಇ) ರಾಜೇಶ್ ಕೆ.ವಿ. ಬಂಧಿತ ಆರೋಪಿ.

ವಿದ್ಯುತ್‌ ಗುತ್ತಿಗೆದಾರ ದಿಲೀಪ್.ಎಸ್.ಎನ್ ಅವರು ಇಂದಿರಾನಗರ ಬೆಸ್ಕಾಂ ಕಚೇರಿ ವ್ಯಾಪ್ತಿಯಲ್ಲಿ ವಾಣಿಜ್ಯ ಕಟ್ಟಡವೊಂದಕ್ಕೆ ವಿದ್ಯುತ್‌ ಕಾಮಗಾರಿ ನಡೆಸುತ್ತಿದ್ದಾರೆ. ಆ ಕಟ್ಟಡಕ್ಕೆ 24 ಕಿಲೋವಾಟ್ ಸಾಮರ್ಥ್ಯದ ನೂತನ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸಿದ್ದರು. ಈ ಕೆಲಸಕ್ಕೆ ರಾಜೇಶ್ ಕೆ.ವಿ ಅವರು 7 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಟ್ಟು, 3 ಲಕ್ಷಕ್ಕೆ ಒಪ್ಪಿಕೊಂಡಿದ್ದರು.

ಕೆನಡಾದಲ್ಲಿ ನೆಲಮಂಗಲ ಮೂಲದ ವ್ಯಕ್ತಿಯ ಮೇಲೆ ಗುಂಡಿನ ದಾಳಿ; ಸ್ಥಳದಲ್ಲಿಯೇ ಮೃತಪಟ್ಟ ಕನ್ನಡಿಗ

ಈ ಬಗ್ಗೆ ದಿಲೀಪ್‌ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್‌ ದೇವರಾಜ್ ಅವರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್‌ಗಳಾದ ಎಸ್‌.ಬಿ.ಪಾಟೀಲ್‌, ಕೇಶವಮೂರ್ತಿ ಮತ್ತು ರಾಜಶೇಖರಯ್ಯ ಅವರ ತಂಡವು ಕಾರ್ಯಾಚರಣೆ ರೂಪಿಸಿತ್ತು. ಅದರಂತೆ ದಿಲೀಪ್‌ ಅವರು ಸೋಮವಾರ, ರಾಜೇಶ್ ಅವರಿಗೆ 3 ಲಕ್ಷ ನೀಡಿದ್ದರು. ಇದೇ ವೇಳೆ ದಾಳಿ ನಡೆಸಿ ಅವರನ್ನು ಬಂಧಿಸಲಾಗಿದೆ. ಲಂಚದ ಹಣ ವಶಕ್ಕೆ ಪಡೆದಿದ್ದು, ತನಿಖೆ ಮುಂದುವರಿದಿದೆ ಎಂದು ಲೋಕಾಯುಕ್ತದ ಪ್ರಕಟಣೆ ತಿಳಿಸಿದೆ.

ಬೆಂಗಳೂರಿನಲ್ಲಿ ಗಾಂಜಾ ಗಿಡ ಬೆಳೆದು, ವಿದ್ಯಾರ್ಥಿಗಳಿಗೆ ಮಾಡುತ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಗಾಜಾ ಬೆಳೆದು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ನಗರದ ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ. ಬಿ. ಉಮೇಶ್ (35) ಬಂಧಿತ ಆರೋಪಿ. ಈತನಿಂದ 15 ಲಕ್ಷ ಮೌಲ್ಯದ 30 ಕೆಜಿ 720 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಆರೋಪಿ ಉಮೇಶ್ ಗಾಂಜಾ ಬೆಳೆಯುತ್ತಿದ್ದ. ಆ ಗಾಂಜಾವನ್ನು ಬೆಂಗಳೂರಿನಲ್ಲಿ ಮಾರಾಟ ಮಾಡಲು ಬಂದಾಗ ಆತನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಕುಮಾರಸ್ವಾಮಿ ಲೇಔಟ್‌ನ ಕೆಲವು ಸ್ಥಳಗಳಲ್ಲಿ ಗಾಂಜಾ ಮಾರಾಟ ಮಾಡಿದ್ದಾನೆ. ಹಾಗೆಯೇ ಖಾಸಗಿ ಕಾಲೇಜು ಹಿಂಭಾಗ ಗಾಂಜಾ ಮಾರಾಟ ಮಾಡುತ್ತಿದ್ದಾಗ ಅರೆಸ್ಟ್ ಮಾಡಿದ್ದಾರೆ.