ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Crime News: ಅತ್ಯಾಚಾರದ ಆರೋಪ ಹೊರಿಸಿದ ಗೆಳತಿ- ಮನನೊಂದು ಯುವಕ ಆತ್ಮಹತ್ಯೆಗೆ ಶರಣು

Engineer suicide: ಗೆಳತಿಯೇ ತನ್ನ ಮೇಲೆ ಅತ್ಯಾಚಾರ ಆರೋಪ ಮಾಡಿದ್ದರಿಂದ ನೊಂದ 29 ವರ್ಷದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಗೌರವ್ ಸವನ್ನಿ ಎಂದು ಗುರುತಿಸಲಾಗಿದೆ. ರೈಲು ಹಳಿಯಲ್ಲಿ ಈತನ ಮೃತದೇಹ ಪತ್ತೆಯಾಗಿತ್ತು. ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ಘಟನೆ ನಡೆದಿದೆ.

ಅತ್ಯಾಚಾರದ ಆರೋಪ ಹೊರಿಸಿದ ಗೆಳತಿ; ಯುವಕ ಆತ್ಮಹತ್ಯೆಗೆ ಶರಣು

-

Priyanka P Priyanka P Sep 30, 2025 5:13 PM

ಬಿಲಾಸ್‌ಪುರ: ಗೆಳತಿಯೇ ತನ್ನ ಮೇಲೆ ಅತ್ಯಾಚಾರ ಆರೋಪ ಮಾಡಿದ್ದರಿಂದ ನೊಂದ 29 ವರ್ಷದ ವ್ಯಕ್ತಿಯೊಬ್ಬ ಆತ್ಮಹತ್ಯೆ (suicide) ಮಾಡಿಕೊಂಡ ಆಘಾತಕಾರಿ ದುರ್ಘಟನೆ ಛತ್ತೀಸ್‌ಗಢದ (Chhattisgarh) ಬಿಲಾಸ್‌ಪುರದಲ್ಲಿ ನಡೆದಿದೆ. ರೈಲಿನ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅತ್ಯಾಚಾರ (rape) ಆರೋಪಗಳಿಂದ ಅವನು ನೊಂದಿದ್ದ ಎಂದು ವರದಿಗಳು ಹೇಳಿವೆ.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಗೌರವ್ ಸವನ್ನಿ ಎಂದು ಗುರುತಿಸಲಾಗಿದೆ. ಈತನ ಮೃತದೇಹ ಸೆಪ್ಟೆಂಬರ್ 27 ರಂದು ಉಸಲಾಪುರ ರೈಲ್ವೆ ಹಳಿಯಲ್ಲಿ ಪತ್ತೆಯಾಗಿತ್ತು. ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನಗೆ ಪ್ರೀತಿಯಲ್ಲಿ ದ್ರೋಹ ಮಾಡಲಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಗೌರವ್ ಉತ್ತರ ಪ್ರದೇಶದ ನೋಯ್ಡಾದಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಈ ವೇಳೆ ಮ್ಯಾಟ್ರಿಮೋನಿಯಲ್ (ವಿವಾಹ ವೆಬ್ಸೈಟ್) ಮೂಲಕ ಯುವತಿಯ ಪರಿಚಯವಾಗಿದೆ. ಇಬ್ಬರೂ ಒಬ್ಬರೊನ್ನೊಬ್ಬರನ್ನು ಅರಿತುಕೊಂಡು ಚೆನ್ನಾಗಿಯೇ ಇದ್ದರು. ಆದರೆ, ಅದೇನಾಯ್ತೋ ಗೊತ್ತಿಲ್ಲ ಇದ್ದಕ್ಕಿದ್ದಂತೆ ಆ ಯುವತಿ ಗೌರವ್ ಮೇಲೆ ಅತ್ಯಾಚಾರದ ಆರೋಪ ಹೊರಿಸಿ, ಪೊಲೀಸರಿಗೆ ದೂರು ನೀಡಿದ್ದಳು. ಈ ಸಂಬಂಧ ಗೌರವ್‍ನನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ: Viral Video: ಜಿಮ್‍ನಲ್ಲಿ ಜಡೆ ಜಗಳ; ಜುಟ್ಟು-ಜುಟ್ಟು ಹಿಡಿದು ಮಹಿಳೆಯರ ಬಿಗ್‌ ಫೈಟ್‌! ವಿಡಿಯೊ ವೈರಲ್

ಗೌರವ್ ಸಾವಿಗೆ 15 ದಿನಗಳ ಮೊದಲು ಜೈಲಿನಲ್ಲಿದ್ದು, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಎನ್ನಲಾಗಿದೆ. ವರದಿಗಳ ಪ್ರಕಾರ, ಜೈಲಿನಿಂದ ಹಿಂದಿರುಗಿದ ನಂತರ ತೀವ್ರ ಯಾತನೆ ಮತ್ತು ಒಂಟಿತನವನ್ನು ಅನುಭವಿಸಿದ್ದಾನೆ. ಎಲ್ಲರೊಂದಿಗೂ ಸಂಪರ್ಕ ಕಡಿತಗೊಳಿಸಿದ ಆತ, ಯಾರಂದಿಗೂ ಮಾತನಾಡುತ್ತಿರಲಿಲ್ಲವಂತೆ (Crime News).

ವರದಿಗಳ ಪ್ರಕಾರ, ಆತ್ಮಹತ್ಯೆಗೆ ಶರಣಾದ ಗೌರವ್ ಸದಾ ಹರ್ಷಚಿತ್ತದಿಂದ ಕೂಡಿದ ವ್ಯಕ್ತಿ ಎಂದು ಅವನ ಸ್ನೇಹಿತರು ಹೇಳಿದ್ದಾರೆ. ಆದರೆ ಇತ್ತೀಚಿನ ಘಟನೆಗಳು ಅವನ ಮೇಲೆ ತೀವ್ರ ಪರಿಣಾಮ ಬೀರಿತ್ತು. ಇದೀಗ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಆ ಬಳಿಕವಷ್ಟೇ ಘಟನೆ ಬಗ್ಗೆ ಇನ್ನಷ್ಟು ಮಾಹಿತಿ ಹೊರಬೀಳಲಿದೆ.

ಗುರುಗ್ರಾಮದಲ್ಲಿ ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ

ಸಾಫ್ಟ್‌ವೇರ್ ಎಂಜಿನಿಯರ್ ಒಬ್ಬ ತನ್ನ ಹೆಂಡತಿಯನ್ನು ಕತ್ತು ಹಿಸುಕಿ ಕೊಂದು, ನಂತರ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ ನಡೆದಿದೆ. ಅಜಯ್ ಕುಮಾರ್ (30) ತನ್ನ ಸ್ನೇಹಿತನಿಗೆ ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶವನ್ನು ತಿಳಿಸುವ ವಿಡಿಯೊ ಸಂದೇಶವನ್ನು ಕಳುಹಿಸಿದ್ದಾನೆ. ಇದರ ನಂತರ, ಪೊಲೀಸರು ಅವನ ಫ್ಲಾಟ್‌ಗೆ ಆಗಮಿಸಿದಾಗ ದಂಪತಿಗಳು ಮೃತಪಟ್ಟಿರುವುದು ಕಂಡುಬಂದಿದೆ ಎಂದು ಅವರು ಹೇಳಿದರು.