Bomb Hoax: ಬಿಡದಿ ರೈಲ್ವೆ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಬಾಂಬ್ ಬೆದರಿಕೆ ಕರೆ ಬಂದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರೈಲ್ವೆ ಅಧಿಕಾರಿಗಳು ಹಾಗೂ ರಾಮನಗರ ಪೊಲೀಸರು ಮೆಟಲ್ ಡಿಟೆಕ್ಟರ್ ಮೂಲಕ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರು ಹಾಗೂ ಬೆಂಗಳೂರು ನಡುವಿನ ಎಲ್ಲ ರೈಲು ನಿಲ್ದಾಣಗಳಲ್ಲೂ ಹೆಚ್ಚಿನ ಎಚ್ಚರಿಕೆ ವಹಿಸಲಾಗಿದೆ.

ಬಿಡದಿ ರೈಲ್ವೆ ನಿಲ್ದಾಣ

ರಾಮನಗರ : ರಾಮನಗರ ಜಿಲ್ಲೆಯ ಬಿಡದಿ ರೈಲ್ವೆ ನಿಲ್ದಾಣಕ್ಕೆ ಬಾಂಬ್ ಬೆದರಿಕೆ (Bomb Threat) ಕರೆ ಬಂದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಾಕ್ ಪರ ಗೋಡೆ ಬರಹ ಬರೆದಿದ್ದ ಹಿನ್ನೆಲೆಯಲ್ಲಿ ರೈಲು ನಿಲ್ದಾಣವನ್ನು (Railway Station) ಬಾಂಬ್‌ನಿಂದ ಸ್ಫೋಟಿಸುವುದಾಗಿ ದುಷ್ಕರ್ಮಿಗಳು ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ. ಈ ಹಿನ್ನೆಲೆಯಲ್ಲಿ ಬಾಂಬ್ ನಿಷ್ಕ್ರಿಯದಳ, ಶ್ವಾನ ದಳ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿವೆ. ಮೇಲ್ನೋಟಕ್ಕೆ ಇದೊಂದು ಹುಸಿ ಬಾಂಬ್ (Bomb Hoax) ಬೆದರಿಕೆ ಎಂಬಂತೆ ಕಂಡು ಬಂದಿದ್ದರೂ, ಪೊಲೀಸರು ಸಮಗ್ರ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ.
ಬಾಂಬ್ ಬೆದರಿಕೆ ಕರೆ ಬಂದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರೈಲ್ವೆ ಅಧಿಕಾರಿಗಳು ಹಾಗೂ ರಾಮನಗರ ಪೊಲೀಸರು ಮೆಟಲ್ ಡಿಟೆಕ್ಟರ್ ಮೂಲಕ ಬಿಡದಿ ರೈಲ್ವೆ ನಿಲ್ದಾಣದಲ್ಲಿ ಪರಿಶೀಲನೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರು ಹಾಗೂ ಬೆಂಗಳೂರು ನಡುವಿನ ಎಲ್ಲ ರೈಲು ನಿಲ್ದಾಣಗಳಲ್ಲೂ ಹೆಚ್ಚಿನ ಎಚ್ಚರಿಕೆ ವಹಿಸಲಾಗಿದೆ. ಎಲ್ಲ ಪ್ರಯಾಣಿಕರ ಹೆಚ್ಚಿನ ತಪಾಸಣೆ ಹಾಗೂ ನಿಗಾ ವಹಿಸಲು ರೈಲ್ವೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ನಿಲ್ದಾಣಗಳ ಆಸುಪಾಸಿನಲ್ಲೂ ಪೊಲೀಸ್ ಗಸ್ತು ಹಾಕಲು ಸೂಚನೆ ನೀಡಲಾಗಿದೆ.
ತೆರೆದ ಕೆಆರ್‌ಎಸ್ ಡ್ಯಾಂ ಗೇಟ್, 2000 ಕ್ಯೂಸೆಕ್ ನೀರು ಪೋಲು
ಮಂಡ್ಯ: ಶ್ರೀರಂಗಪಟ್ಟಣ (Srirangapatna) ತಾಲೂಕಿನ ಕೃಷ್ಣರಾಜ ಸಾಗರ (KRS) ಜಲಾಶಯದ ಗೇಟ್ ಭಾನುವಾರ (ಮಾರ್ಚ್ 23) ರಾತ್ರಿ ಏಕಾಏಕಿ ತೆರೆದಿದ್ದು, ಸೋಮವಾರ (ಮಾ.24) ರಾತ್ರಿವರೆಗೂ ಗೇಟ್ ತೆರೆದೇ ಇದ್ದ ಪರಿಣಾಮ 24 ಗಂಟೆಯಲ್ಲಿ ಸುಮಾರು ಎರಡು ಸಾವಿರ ಕ್ಯೂಸೆಕ್ ನೀರು ನದಿ ಪಾಲಾಗಿದೆ. ಸೋಮವಾರ ರಾತ್ರಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಗೇಟ್ ಬಂದ್ ಮಾಡಿದ್ದಾರೆ. ಹೆಚ್ಚಿನ ಪ್ರಮಾಣದ ನೀರು ಇದ್ದಿದ್ದರಿಂದ ಗೇಟ್ ಮುಚ್ಚಲು ಅಧಿಕಾರಿಗಳು ಹರಸಾಹಸ ಪಟ್ಟರು. ಗೇಟ್ ಯಾರು ಮತ್ತು ಏಕೆ ತೆಗೆದಿದ್ದಾರೆ ಎಂಬುದು ಇನ್ನೂ ಪತ್ತೆಯಾಗಿಲ್ಲ.
ಜಲಾಶಯದ ಗೇಟ್ ಏಕಾಏಕಿ ತೆರೆಯುವಂತಿಲ್ಲ. ಆದರೆ, ಇಲ್ಲಿ ಕೆಆರ್‌ಎಸ್ ಡ್ಯಾಂನ ಗೇಟ್ ಏಕಾಏಕಿ ತೆರೆದಿದ್ದು, ಅನುಮಾನವನ್ನು ಹುಟ್ಟು ಹಾಕಿದೆ. ಎರಡು ಕಾರಣಗಳಿಂದ ಡ್ಯಾಂನ ಗೇಟ್ ತೆರೆದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದಾರೆ. ಡ್ಯಾಂನ ಗೇಟ್ನ ಮೋಟಾರ್ ರಿವರ್ಸ್ ಆಗಿದ್ದರಿಂದ ಗೇಟ್ ತೆರೆದಿರಬಹುದು, ಅಥವಾ ನಮ್ಮದೇ ಸಿಬ್ಬಂದಿ ಗೇಟ್ ತೆರೆದಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಗೇಟ್ ಯಾವ ಕಾರಣಕ್ಕೆ ತೆರೆದಿದೆ ಎಂಬುವುದು ತನಿಖೆ ಬಳಿಕವಷ್ಟೇ ತಿಳಿಯಲಿದೆ.
ಡ್ಯಾಂನ ಗೇಟ್ ಏಕಾಏಕಿ ತೆರೆದ ವಿಚಾರ ತಿಳಿದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸಲಿದ್ದಾರೆ. ಗೇಟ್ ಏಕಾಏಕಿ ಹೇಗೆ ತೆರೆಯಿತು ಅಂತ ತನಿಖೆ ನಡೆಸಲು ಪೂರಕವಾದ ಸಾಕ್ಷ್ಯಾಧಾರಗಳು ಅತ್ಯಗತ್ಯ. ಆದರೆ, ಡ್ಯಾಂನ ಸುತ್ತಮುತ್ತ ಯಾವುದೇ ಸಿಸಿ ಕ್ಯಾಮೆರಾಗಳು ಇಲ್ಲ. ಇದರಿಂದ ತನಿಖೆ ನಿಧಾನವಾಗುವ ಸಾಧ್ಯತೆ ಇದೆ.
ಇದನ್ನೂ ಓದಿ: Hand grenade: ಬೆಂಗಳೂರಿನಲ್ಲಿ ಹ್ಯಾಂಡ್ ಗ್ರೆನೇಡ್ ಪತ್ತೆ, ವ್ಯಕ್ತಿ ವಶಕ್ಕೆ