ಬೆಂಗಳೂರು: ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ (Bengaluru Accident) ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತರನ್ನು ತುಮಕೂರು ಜಿಲ್ಲೆಯ ಸಿರಾ ಮೂಲದ ಮನು ಎಂದು ಗುರುತಿಸಲಾಗಿದೆ. ಬೆಂಗಳೂರಿನ ನೆಲಮಂಗಲದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮನು ತಮ್ಮ ಪತ್ನಿಯೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಮಾಹಿತಿ ಪ್ರಕಾರ, ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್‌ನಿಂದ ಕೆಳಗೆ ಬಿದ್ದ ಮನು ಅವರ ಮೇಲೆ ಬಸ್ ಹರಿದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪತ್ನಿಯ ಕಣ್ಣೆದುರೇ ಪತಿ ಮೃತಪಟ್ಟಿದ್ದು, ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲುಮುಟ್ಟಿದೆ. ಮನು ಅವರು ನೆಲಮಂಗಲದ ರೆಸಾರ್ಟ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಇನ್ನು ಮನು ಅವರು ಸುಮಾರು 8 ತಿಂಗಳ ಹಿಂದಷ್ಟೇ ಪ್ರೀತಿಸಿ ವಿವಾಹವಾಗಿದ್ದರು. ಮದುವೆಯಾಗಿ ಕೆಲವೇ ತಿಂಗಳಲ್ಲಿ ದುರಂತ ಸಂಭವಿಸಿರುವುದು ಕುಟುಂಬಸ್ಥರು ಹಾಗೂ ಸಂಬಂಧಿಕರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಶಾಲೆಯಲ್ಲಿ ಬಿಸಿಯೂಟ ಸೇವಿಸುತ್ತಿದ್ದಾಗಲೇ ಹೃದಯಾಘಾತವಾಗಿ ವಿದ್ಯಾರ್ಥಿ ಸಾವು!
ಮಂಡ್ಯ: ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸುತ್ತಿದ್ದ ವೇಳೆ 9ನೇ ತರಗತಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ (heart attack) ಮೃತಪಟ್ಟಿರುವ ಘಟನೆ (Mandya Student Death) ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸೋಮನಹಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ವೀರಮಣಿ (14) ಮೃತ ದುರ್ದೈವಿ.
ಮಧ್ಯಾಹ್ನ ಶಾಲೆಯಲ್ಲಿ ಎಂದಿನಂತೆ ಇತರ ಮಕ್ಕಳೊಂದಿಗೆ ಬಿಸಿಯೂಟ ಮಾಡುತ್ತಿದ್ದಾಗ ವೀರಮಣಿ ಏಕಾಏಕಿ ಮೂರ್ಛೆಹೋಗಿ ಕೆಳಗೆ ಬಿದ್ದಿದ್ದಾನೆ. ತಕ್ಷಣ ಎಚ್ಚೆತ್ತ ಶಿಕ್ಷಕರು ಆತನನ್ನು ಸ್ಥಳೀಯ ಮದ್ದೂರು ಸಾರ್ವಜನಿಕ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಆದರೆ, ಬಾಲಕನ ಸ್ಥಿತಿ ಗಂಭೀರವಾಗಿದ್ದ ಕಾರಣ, ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ದುರದೃಷ್ಟವಶಾತ್, ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಕೊನೆಯುಸಿರೆಳೆದಿದ್ದಾನೆ.
ವಯನಾಡು ಹೆದ್ದಾರಿಯಲ್ಲಿ ಏಕಾಏಕಿ ಕಾಣಿಸಿಕೊಂಡ ಕಾಡಾನೆಗಳ ಹಿಂಡು: ಕೂದಲೆಳೆ ಅಂತರದಲ್ಲಿ ಪಾರಾದ ಕುಟುಂಬ
ತಪಾಸಣೆ ನಡೆಸಿದ ವೈದ್ಯರು, ಬಾಲಕ ತೀವ್ರ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ಶಾಲಾ ಬಾಲಕ ಹೃದಯಾಘಾತಕ್ಕೆ ಬಲಿಯಾಗಿರುವುದು ಗ್ರಾಮಸ್ಥರಲ್ಲಿ ಆಘಾತ ಮೂಡಿಸಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.