Physical Abuse: 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಬಿಜೆಪಿ ನಾಯಕನನ್ನು ವಶಕ್ಕೆ ಪಡೆದ ಪೊಲೀಸ್
ತನ್ನ ಹೋಟೆಲ್‌ನಲ್ಲಿ 15 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಲು ಸಹಕಾರ ನೀಡಿದ ಆರೋಪದ ಮೇಲೆ ಮಧ್ಯ ಪ್ರದೇಶದ ಬಿಜೆಪಿಯ ನಾಯಕ ಸಂಜು ಯಾದವ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ವರ್ಷ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಇಬ್ಬರು ಆರೋಪಿಗಳಿಗೆ ಈ ಬಿಜೆಪಿ ನಾಯಕ ತನ್ನ ಹೋಟೆಲ್‌ನಲ್ಲಿ ಆಶ್ರಯ ನೀಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸಾಂದರ್ಭಿಕ ಚಿತ್ರ.

ಭೋಪಾಲ್: ತನ್ನ ಹೋಟೆಲ್‌ನಲ್ಲಿ 15 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಲು ಸಹಕಾರ ನೀಡಿದ ಆರೋಪದ ಮೇಲೆ ಮಧ್ಯ ಪ್ರದೇಶದ ಬಿಜೆಪಿಯ ನಾಯಕ ಸಂಜು ಯಾದವ್‌ನನ್ನು ಪೊಲೀಸರು ವಶಕ್ಕೆ ಸೋಮವಾರ (ಮಾ. 3) ವಶಕ್ಕೆ ಪಡೆದಿದ್ದಾರೆ. ಮಧ್ಯ ಪ್ರದೇಶದ ತಿಲಕ್‌ಮಾರ್ಗ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ (Physical Abuse). ಕಳೆದ ವರ್ಷ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ನಡೆಸಿದ ಇಬ್ಬರು ಆರೋಪಿಗಳಿಗೆ ಈ ಬಿಜೆಪಿ ನಾಯಕ ತನ್ನ ಹೋಟೆಲ್‌ನಲ್ಲಿ ಆಶ್ರಯ ನೀಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸಂಜು ಯಾದವ್‌ನನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷೆ ಸರೋಜ್ ರಜಪೂತ್ ಆದೇಶ ಹೊರಡಿಸಿದ್ದಾರೆ. "ಸಂಜು ಯಾದವ್ ಸೋಮವಾರ ಮಧ್ಯಾಹ್ನ ತನ್ನ ಹೋಟೆಲ್ ಕಡೆಗೆ ತೆರಳುತ್ತಿದ್ದಾಗ ಸಿವಿಲ್ ಲೈನ್ಸ್ ಪ್ರದೇಶದಿಂದ ವಶಕ್ಕೆ ತೆಗೆದುಕೊಳ್ಳಲಾಗಿದೆ" ಎಂದು ಕೊಟ್ವಾಲಿ ಪೊಲೀಸ್ ಸ್ಟೇಷನ್ ಹೌಸ್ ಆಫೀಸರ್ (SHO) ಇನ್ಸ್‌ಪೆಕ್ಟರ್ ಪಂಕಜ್ ಶರ್ಮಾ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.
ʼʼಲೈಂಗಿಕ ದೌರ್ಜನ್ಯ ಪ್ರಕರಣವನ್ನು ಮರೆಮಾಚುವಲ್ಲಿ ಮತ್ತು 1 ವರ್ಷದ ಹಿಂದೆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ಆರೋಪಿಗಳಿಗೆ ತನ್ನ ಹೋಟೆಲ್‌ನಲ್ಲಿ ಆಶ್ರಯ ಒದಗಿಸುವಲ್ಲಿ ಸಂಜು ಯಾದವ್‌ಗಿದ್ದ ಪಾತ್ರದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆʼʼ ಎಂದು ಅವರು ಹೇಳಿದ್ದಾರೆ.
ʼʼಆರೋಪಿಗಳಾದ ರೋಹಿತ್ ಸಾಹು ಮತ್ತು ವಿಶಾಲ್ ಸಾಹು ತನ್ನನ್ನು ಬಲವಂತವಾಗಿ ಯಾದವ್ ಅವರ ಹೋಟೆಲ್‌ಗೆ ಕರೆದೊಯ್ದು 1 ವರ್ಷದ ಹಿಂದೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಬಾಲಕಿ ಶನಿವಾರ (ಮಾ. 1) ದೂರು ದಾಖಲಿಸಿದ್ದಾಳೆʼʼ ಎಂದು ಶರ್ಮಾ ವಿವರಿಸಿದ್ದಾರೆ.
ಆರೋಪಿಗಳು ಈ ವೇಳೆ ತನ್ನ ಅಶ್ಲೀಲ ಫೋಟೊಗಳನ್ನು ಕ್ಲಿಕ್ಕಿಸಿದ್ದಾರೆ ಮತ್ತು ಹಣಕ್ಕಾಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದಾರೆ. ಅಲ್ಲದೆ ಅಂದಿನಿಂದ ಪದೇ ಪದೆ ಅತ್ಯಾಚಾರ ಎಸಗಿದ್ದಾರೆ ಎಂದು ಬಾಲಕಿ ತನ್ನ ದೂರಿನಲ್ಲಿ ತಿಳಿಸಿದ್ದಾಳೆ.
ಅತ್ಯಾಚಾರ ಎಸಗಿದವರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 363 (ಅಪಹರಣ), 366 (ಅಕ್ರಮ ಸಂಭೋಗಕ್ಕೆ ಪ್ರಚೋದನೆ), 384 (ಸುಲಿಗೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಈ ಸುದ್ದಿಯನ್ನೂ ಓದಿ: Pune Horror: ಪುಣೆ ಪ್ರಕರಣ; ದೀದೀ ಎಂದು ಕರೆದು ಅತ್ಯಾಚಾರ ನಡೆಸಿದ !
ತಂದೆಯಿಂದಲೇ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ
ಮುಂಬೈ: ಅನ್ಯರಿಂದ, ಕೆಟ್ಟ ದೃಷ್ಟಿಯಿಂದ ಮಗಳನ್ನು ಕಾಪಾಡಬೇಕಿದ್ದ ತಂದೆಯೇ ಪೈಶಾಚಿಕ ಕೃತ್ಯ ಎಸಗಿದ್ದಾನೆ. ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ತನ್ನ ಸ್ವಂತ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗಿ ಪತ್ನಿಗೆ ಚಿತ್ರಹಿಂಸೆ ನೀಡಿದ 56 ವರ್ಷದ ವ್ಯಕ್ತಿಯನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮೀರಾ-ಭಯಂದರ್ ವಸೈ-ವಿರಾರ್ ಎಂದು ಗುರುತಿಸಲಾಗಿದ್ದು, ಈತ ಛೋಟಾ ರಾಜನ್ ಗ್ಯಾಂಗ್‌ನೊಂದಿಗೆ ಸಂಬಂಧ ಹೊಂದಿರುವ ಆರೋಪವನ್ನು ಎದುರಿಸುತ್ತಿದ್ದ. ಸಿಂಧುದುರ್ಗ ಜಿಲ್ಲೆಯಲ್ಲಿ ಈತನನ್ನು ಬಂಧಿಸಲಾಗಿದೆ.