ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Physical Assault: ಅಪ್ರಾಪ್ತ ಬಾಲಕಿಯೊಡನೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಉಡುಪಿಯ ಬಿಜೆಪಿ ಮುಖಂಡನ ಪುತ್ರ; ಪ್ರಕರಣ ದಾಖಲು

ಅಪ್ರಾಪ್ತ ಬಾಲಕಿಯನ್ನು ಮಣಿಪಾಲದ ಲಾಡ್ಜ್ ವೊಂದಕ್ಕೆ ಕರೆದುಕೊಂಡು ಹೋಗಿದ್ದ ಬಿಜೆಪಿ ಮುಖಂಡನ ಪುತ್ರ ಸಿಕ್ಕಿ ಬಿದ್ದಿದ್ದು, ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದೆ. ಬಾಲಕಿಯನ್ನು ಮದುವೆಯಾಗುವುದಾಗಿ ಈತ ನಂಬಿಸಿದ್ದ ಎಂದು ತಿಳಿದು ಬಂದಿದೆ.

ಬಾಲಕಿಯೊಡನೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಉಡುಪಿಯ ಬಿಜೆಪಿ ಮುಖಂಡನ ಪುತ್ರ

ಅಪ್ರಾಪ್ತ ಬಾಲಕಿಯೊಡನೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಉಡುಪಿಯ ಬಿಜೆಪಿ ಮುಖಂಡನ ಪುತ್ರ -

Vishakha Bhat
Vishakha Bhat Nov 8, 2025 10:25 AM

ಉಡುಪಿ: ಅಪ್ರಾಪ್ತ ಬಾಲಕಿಯನ್ನು ಮಣಿಪಾಲದ ಲಾಡ್ಜ್ ವೊಂದಕ್ಕೆ ಕರೆದುಕೊಂಡು (Physical Assault) ಹೋಗಿದ್ದ ಬಿಜೆಪಿ (BJP) ಮುಖಂಡನ ಪುತ್ರ ಸಿಕ್ಕಿ ಬಿದ್ದಿದ್ದು, ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕೇಸ್ ದಾಖಲಾಗಿದೆ. ಬಾಲಕಿಯನ್ನು ಮದುವೆಯಾಗುವುದಾಗಿ ಈತ ನಂಬಿಸಿದ್ದ ಎಂದು ತಿಳಿದು ಬಂದಿದೆ. ಬಂಧಿತನನ್ನು ಕಟಪಾಡಿ ಮಣಿಪುರದ 20 ವರ್ಷದ ಶ್ರೀಕಾಂತ್ ಪೂಜಾರಿ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯನ್ನು ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದ್ದು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿ ಅಪ್ರಾಪ್ತೆಯ ನಕಲಿ ಆಧಾರ್ ಕಾರ್ಡ್ ಅನ್ನು ಲಾಡ್ಜ್ ಸಿಬ್ಬಂದಿಗೆ ನೀಡಿದ್ದ. ವಿಷಯ ತಿಳಿದ ಬಾಲಕಿಯ ಪೋಷಕರು ಪೊಲೀಸರೊಂದಿಗೆ ಲಾಡ್ಜ್ ಗೆ ಬಂದಿದ್ದರು. ಮದುವೆಯಾಗುವುದಾಗಿ ನಂಬಿಸಿ ಲಾಡ್ಜ್ ಗೆ ಕರೆದುಕೊಂಡು ಬಂದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆ ಸಹ ದೂರು ದಾಖಲಿಸಿದ್ದಾಳೆ.

ಪ್ರತ್ಯೇಕ ಘಟನೆಯಲ್ಲಿ, ಕೊಯಮತ್ತೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಭಾನುವಾರ ತಡರಾತ್ರಿ ಮೂವರು ವ್ಯಕ್ತಿಗಳು ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಪೊಲೀಸರ ಪ್ರಕಾರ, ಮೂಲತಃ ಮಧುರೈನ ಯುವತಿ ಮತ್ತು ಪ್ರಸ್ತುತ ಕೊಯಮತ್ತೂರಿನಲ್ಲಿ ಓದುತ್ತಿರು ವಿದ್ಯಾರ್ಥಿನಿಯನ್ನು ವಿಮಾನ ನಿಲ್ದಾಣದ ಬಳಿಯ ಬೃಂದಾವನ ನಗರದಲ್ಲಿ ರಾತ್ರಿ 11 ಗಂಟೆ ಸುಮಾರಿಗೆ ಕಾರಿನಲ್ಲಿ ಕುಳಿತಿದ್ದಾಗ ಅಪಹರಿಸಲಾಗಿದೆ. ಮೂವರು ದುಷ್ಕರ್ಮಿಗಳು ಯುವತಿ ಕುಳಿತಿದ್ದ ಕಾರಿನ ಬಳಿ ಬಂದು, ಆಕೆಯ ಸ್ನೇಹಿತಿನ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ, ಅಪಹರಿಸಿದ್ದಾರೆ. ನಂತರ ಹಲ್ಲೆಕೋರರು ಸಂತ್ರಸ್ತೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು, ಅಲ್ಲಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾಗಿದ್ದಾರೆ. ಗಾಯಗೊಂಡು, ಪ್ರಜ್ಞೆ ತಪ್ಪಿದ್ದ ಆಕೆಯ ಸ್ನೇಹಿತ ಸ್ವಲ್ಪ ಸಮಯದ ನಂತರ ಪ್ರಜ್ಞೆ ಮರಳಿದ ಬಳಿಕ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನೂ ಓದಿ: ಒಡಿಶಾವನ್ನು ಬೆಚ್ಚಿಬೀಳಿಸಿದ ಅತ್ಯಾಚಾರ ಪ್ರಕರಣ: ಹತ್ತು ದಿನಗಳಲ್ಲಿ ಐದು ಸಾಮೂಹಿಕ ಅತ್ಯಾಚಾರ ದೂರು ದಾಖಲು

ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದಾಗ ಮಹಿಳೆ ಪ್ರಜ್ಞಾಹೀನಳಾಗಿ ಮತ್ತು ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಂತರ ಅವರನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಗಂಭೀರವಾಗಿ ಗಾಯಗೊಂಡ ಆಕೆಯ ಸ್ನೇಹಿತನನ್ನು ಕೊಯಮತ್ತೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ(CMCH) ದಾಖಲಿಸಲಾಗಿದೆ. ಕೊಯಮತ್ತೂರು ನಗರ ಪೊಲೀಸ್ ಆಯುಕ್ತರು, ಅಪರಾಧಿಗಳನ್ನು ಪತ್ತೆಹಚ್ಚಲು ಉಪ ಪೊಲೀಸ್ ಆಯುಕ್ತ (ಉತ್ತರ)ಎನ್ ದೇವನಾಥನ್ ನೇತೃತ್ವದಲ್ಲಿ ಏಳು ವಿಶೇಷ ತಂಡಗಳನ್ನು ರಚಿಸಿದ್ದಾರೆ.