Self Harming: ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆಗೆ ಶರಣು
ವಿನಯ್ ಸಾವಿನ ಹಿಂದೆ ಅನುಮಾನಗಳು ಮೂಡಿವೆ. ಇತ್ತೀಚೆಗೆ ವಿನಯ್ ಅಡ್ಮಿನ್ ಆಗಿದ್ದ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡರೊಬ್ಬರ ಆಕ್ಷೇಪಾರ್ಹ ಫೋಟೋ ವೈರಲ್ ಆಗಿತ್ತು. ಈ ಸಂಬಂಧ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿತ್ತು.

ಮೃತ ವಿನಯ್ ಸೋಮಯ್ಯ

ಬೆಂಗಳೂರು: ಬಿಜೆಪಿ ಕಾರ್ಯಕರ್ತರೊಬ್ಬರು (BJP worker) ಆತ್ಮಹತ್ಯೆಗೆ (Self harming) ಶರಣಾಗಿರುವ ಘಟನೆ ಬೆಂಗಳೂರಿನ (Bengaluru news) ನಾಗವಾರದಲ್ಲಿ ನಡೆದಿದೆ. ವಿನಯ್ ಸೋಮಯ್ಯ (39) (Vinay somayya) ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿ ಕಾರ್ಯಕರ್ತ. ವಿನಯ್ ಮೂಲತಃ ಕೊಡಗು ಜಿಲ್ಲೆಯ ಸೋಮವಾರಪೇಟೆ ಗೋಣಿಮರೂರು ನಿವಾಸಿಯಾಗಿದ್ದರು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಇಂದು ಬೆಳಗ್ಗೆ 4.30ಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ವಿನಯ್ಗೆ ಮದುವೆ ಆಗಿತ್ತು, ಒಂದು ಮಗು ಕೂಡ ಇದೆ.
ವಿನಯ್ ಅವರ ಸಾವಿನ ಬೆನ್ನಲ್ಲೇ ಹಲವು ಅನುಮಾನಗಳು ಶುರುವಾಗಿವೆ. ವಿನಯ್ ‘ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು’ ಎಂಬ ಹೆಸರಿನ ವಾಟ್ಸ್ಆ್ಯಪ್ ಗ್ರೂಪ್ನ ಅಡ್ಮಿನ್ ಆಗಿದ್ದರು. ಇತ್ತೀಚೆಗೆ ಇದೇ ಗ್ರೂಪ್ ಮೂಲಕ ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡರೊಬ್ಬರ ಆಕ್ಷೇಪಾರ್ಹ ಫೋಟೋ ಒಂದು ವೈರಲ್ ಆಗಿತ್ತು ಎನ್ನಲಾಗಿದೆ. ಈ ಸಂಬಂಧ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿತ್ತು. ಇದರಿಂದ ಮನನೊಂದು ವಿನಯ್ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಐಫೋನ್ ತಗೊಂಡಿದ್ದಕ್ಕೆ ಬುದ್ಧಿ ಹೇಳಿದ ತಂದೆ, ಆತ್ಮಹತ್ಯೆ ಮಾಡಿಕೊಂಡ ಮಗ
ಬೆಳಗಾವಿ: ಐಫೋನ್ (iPhone) ತಗೊಂಡಿದ್ದನ್ನು ತಂದೆ ಪ್ರಶ್ನಿಸಿದ್ದಕ್ಕೆ ನೊಂದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ (Self harming) ಶರಣಾದ ಘಟನೆ ಬೆಳಗಾವಿಯ (Belagavi news) ನ್ಯೂ ವೈಭವ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ಮುಸ್ತಫೀಸ್ ಅಬ್ದುಲ್ ರಶೀದ್ ಶೇಖ್ (24) ಎಂದು ಗುರುತಿಸಲಾಗಿದೆ. ಯುವಕ ಇಎಂಐ ಮೂಲಕ 70 ಸಾವಿರ ರೂ. ಬೆಲೆಯ ಐಫೋನ್ ಖರೀದಿಸಿದ್ದ. ಈ ವಿಚಾರ ಗೊತ್ತಾಗಿ ಇಷ್ಟೊಂದು ಹಣ ಕೊಟ್ಟು ಯಾಕೆ ಮೊಬೈಲ್ ತಗೊಂಡಿದ್ದೀಯಾ? ಕಡಿಮೆ ದರದ ಮೊಬೈಲ್ ತೆಗೆದುಕೊಳ್ಳಬೇಕಿತ್ತು ಎಂದು ತಂದೆ ತಿಳಿವಳಿಕೆ ಹೇಳಿದ್ದರು.
ಇದೇ ವಿಚಾರಕ್ಕೆ ಮನನೊಂದ ಯುವಕ ಮನೆಯ ರೂಮ್‍ನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಸಂಬಂಧ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊದಲೇ ದುಬಾರಿ ಬೆಲೆಯ ಐಫೋನ್, ಇದೀಗ ಒಂದು ಜೀವವನ್ನೇ ತೆಗೆದು ಈ ಕುಟುಂಬಕ್ಕೆ ಮತ್ತಷ್ಟು ದುಬಾರಿಯಾಗಿದೆ.
ಇದನ್ನೂ ಓದಿ: Road Accident: ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ; ನಾಲ್ವರ ಸಾವು