Murder Case: ಗಂಗಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಚ್ಚಿ ಕೊಲೆ
Koppala news: ವೆಂಕಟೇಶ ಕುರುಬರ ದೇವಿಕ್ಯಾಂಪ್‌ನಿಂದ ಸ್ನೇಹಿತರೊಂದಿಗೆ ಊಟ ಮಾಡಿ ಬೈಕ್‌ನಲ್ಲಿ ಗಂಗಾವತಿಗೆ ತೆರಳುತ್ತಿದ್ದರು. ಕೊಪ್ಪಳ ರಸ್ತೆಯ ಖಾಸಗಿ ಆಸ್ಪತ್ರೆಯ ಮುಂಭಾಗದಲ್ಲಿ ಮದ್ಯರಾತ್ರಿ 2 ಗಂಟೆ ಸುಮಾರಿಗೆ ಈ ಹತ್ಯೆ ನಡೆದಿದೆ. ಬೈಕ್‌ಗೆ ಗುದ್ದಿ ಅಡ್ಡಗಟ್ಟಿದ ಗುಂಪು, ಲಾಂಗ್ ಮತ್ತು ಮಚ್ಚುಗಳಿಂದ ವೆಂಕಟೇಶನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ.

-

ಕೊಪ್ಪಳ: ತಡರಾತ್ರಿ ಸ್ನೇಹಿತರೊಂದಿಗೆ ಊಟ ಮಾಡಿ ಗಂಗಾವತಿಗೆ ತೆರಳುತ್ತಿದ್ದ ವೇಳೆ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಕಾರಿನಲ್ಲಿ ಹಿಂಬಾಲಿಸಿ ಬಂದ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ (Murder Case) ಮಾಡಿದ ಘಟನೆ ಗಂಗಾವತಿ (Gangavati) ನಗರದಲ್ಲಿ ನಡೆದಿದೆ. ವೆಂಕಟೇಶ ಕುರುಬರ (31) ಹತ್ಯೆಯಾದ ಯುವಕ. ವೆಂಕಟೇಶ್ ಕೊಪ್ಪಳದ (koppalಅ news) ಬಿಜೆಪಿ ಯುವ ಮೋರ್ಚಾ (BJP youth morcha) ಅಧ್ಯಕ್ಷನಾಗಿದ್ದರು. ವೈಯಕ್ತಿಕ ದ್ವೇಷದಿಂದ ಘಟನೆ ನಡೆದಿದೆ ಎಂದು ಶಂಕಿಸಲಾಗಿದೆ.
ವೆಂಕಟೇಶ ಕುರುಬರ ದೇವಿಕ್ಯಾಂಪ್‌ನಿಂದ ಸ್ನೇಹಿತರೊಂದಿಗೆ ಊಟ ಮಾಡಿ ಬೈಕ್‌ನಲ್ಲಿ ಗಂಗಾವತಿಗೆ ತೆರಳುತ್ತಿದ್ದರು. ಕೊಪ್ಪಳ ರಸ್ತೆಯ ಖಾಸಗಿ ಆಸ್ಪತ್ರೆಯ ಮುಂಭಾಗದಲ್ಲಿ ಮದ್ಯರಾತ್ರಿ 2 ಗಂಟೆ ಸುಮಾರಿಗೆ ಈ ಹತ್ಯೆ ನಡೆದಿದೆ. ಬೈಕ್‌ಗೆ ಗುದ್ದಿ ಅಡ್ಡಗಟ್ಟಿದ ಗುಂಪು, ಲಾಂಗ್ ಮತ್ತು ಮಚ್ಚುಗಳಿಂದ ವೆಂಕಟೇಶನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದೆ. ಘಟನೆಯ ಸ್ಥಳಕ್ಕೆ ಡಿವೈಎಸ್‌ಪಿ ಸಿದ್ದನಗೌಡ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಗಂಗಾವತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಚುರುಕುಗೊಂಡಿದೆ.
ಇದನ್ನೂ ಓದಿ: Murder Case: ಆಸ್ತಿ ವಿವಾದ; ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಲೆಗೆತ್ನಿಸಿದ ಪಾಪಿ ಮಗ
ಗುಂಡು ಹಾರಿಸಿಕೊಂಡು ಐಪಿಎಸ್ ಅಧಿಕಾರಿ ಆತ್ಮಹತ್ಯೆ
ಚಂಡೀಗಢ: ಹರಿಯಾಣದ ಹಿರಿಯ ಐಪಿಎಸ್ ಅಧಿಕಾರಿಯೊಬ್ಬರು ಮನೆಯಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಮಂಗಳವಾರ (ಅಕ್ಟೋಬರ್ 7) ಬೆಳಕಿಗೆ ಬಂದಿದೆ (Self Harming). ಚಂಡೀಗಢದ ಸೆಕ್ಟರ್ 11ರಲ್ಲಿ ಈ ಘಟನೆ ನಡೆದಿದೆ. ಮೃತ ಅಧಿಕಾರಿಯನ್ನು ಹರಿಯಾಣದ ಎಡಿಜಿಪಿ (Additional Director General of Police) ವೈ. ಪೂರನ್ ಕುಮಾರ್ (Y Puran Kumar) ಎಂದು ಗುರುತಿಸಲಾಗಿದೆ. ಅವರು ತಮ್ಮ ಸೇವಾ ರಿವಾಲ್ವರ್ ಬಳಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಅವರ ಸೌಂಡ್‌ಪ್ರೂಫ್ ರೂಮ್‌ನಲ್ಲಿ ಘಟನೆ ನಡೆದಿದೆ. ಹೀಗಾಗಿ ಘಟನೆ ತಕ್ಷಣ ಗಮನಕ್ಕೆ ಬರಲಿಲ್ಲ ಎನ್ನಲಾಗಿದ. ಸದ್ಯ ವಿಧಿ ವಿಜ್ಞಾನ ತಂಡದ ಸದಸ್ಯರು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ತನಿಖೆ ಕೈಗೆತ್ತಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.