ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Murder Case: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ ಕೇಸ್; ನಾಲ್ವರು ಆರೋಪಿಗಳು ಅರೆಸ್ಟ್

ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ ಕುರುಬರ (Venkatesh Kurubar) ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ ಘಟನೆ ನಡೆದಿದೆ. ಸ್ನೇಹಿತರೊಂದಿಗೆ ಊಟ ಮುಗಿಸಿ ಬೈಕ್‌ನಲ್ಲಿ ಮನೆಗೆ (Murder Case) ಹಿಂದಿರುಗುತ್ತಿದ್ದ ವೇಳೆ, ಕಾರಿನಲ್ಲಿ ಹಿಂಬಾಲಿಸಿದ ಗುಂಪೊಂದು ವೆಂಕಟೇಶ್‌ರನ್ನು ಬರ್ಬರವಾಗಿ ಕೊಲೆ ಮಾಡಿದೆ.

ಕೊಪ್ಪಳ: ಗಂಗಾವತಿಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ ಕುರುಬರ (Venkatesh Kurubar) ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ ಘಟನೆ ನಡೆದಿದೆ. ಸ್ನೇಹಿತರೊಂದಿಗೆ ಊಟ ಮುಗಿಸಿ ಬೈಕ್‌ನಲ್ಲಿ ಮನೆಗೆ (Murder Case) ಹಿಂದಿರುಗುತ್ತಿದ್ದ ವೇಳೆ, ಕಾರಿನಲ್ಲಿ ಹಿಂಬಾಲಿಸಿದ ಗುಂಪೊಂದು ವೆಂಕಟೇಶ್‌ರನ್ನು ಬರ್ಬರವಾಗಿ ಕೊಲೆ ಮಾಡಿದೆ. ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೊಲೆ ಪ್ರಕರಣ ಸಂಬಂಧ ಐವರು ಆರೋಪಿಗಳ ಪೈಕಿ ನಾಲ್ವರು ಆರೋಪಿಗಳನ್ನು ಬಳ್ಳಾರಿ ಜಿಲ್ಲೆ ಕಂಪ್ಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಾದ ಧನಂಜಯ್, ಮೈಲಾರಿ ಅಲಿಯಾಸ್ ವಿಜಯ್,ಸಲೀಂ, ಭೀಮ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

ಧನಂಜಯ್, ಮೈಲಾರಿ ಅಲಿಯಾಸ್ ವಿಜಯ್,ಸಲೀಂ, ಭೀಮ ಸ್ವಯಂ ಪೊಲೀಸರ ಎದುರು ಶರಣಾಗಿದ್ದಾರೆ. ಇನ್ನುಳಿದ ಇಬ್ಬರು ಆರೋಪಿಗಳಾದ ಕಾರ್ತಿಕ್ ಮತ್ತು ಲಕ್ಷ್ಮಣ ತಲೆಮರೆಸಿಕೊಂಡಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಲೀಲಾವತಿ ಆಸ್ಪತ್ರೆಯ ಮುಂಭಾಗ ಮಧ್ಯರಾತ್ರಿ ಕ್ರೌರ್ಯ ನಡೆದಿದ್ದು, ಮಧ್ಯರಾತ್ರಿ 2 ಗಂಟೆಗೆ ಕಾರಲ್ಲಿ ಅಗಮಿಸಿದ್ದ ದುಷ್ಕರ್ಮಿಗಳು ವೆಂಕಟೇಶ್ ಅವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು.

ಸ್ನೇಹಿತರೊಂದಿಗೆ ಊಟ ಮುಗಿಸಿದ ವೆಂಕಟೇಶ್ ದೇವಿ ಕ್ಯಾಂಪ್ ನಿಂದ ಗಂಗಾವತಿಗೆ ಹೋಗುತ್ತಿದ್ದ ವೇಳೆ ಬೈಕ್ ಫಾಲೋ ಮಾಡಿದ ದುಷ್ಕರ್ಮಿಗಳು ಕಾರಿನಿಂದ ವೆಂಕಟೇಶ್ ಇದ್ದ ಬೈಕ್ ಗೆ ಗುದ್ದಿಸಿದ್ದಾರೆ. ವೆಂಕಟೇಶ್ ಕೆಳಗೆ ಬೀಳುತ್ತಿದ್ದಂತೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆ ಮಾಡಿದ್ದಾರೆ. ಪೊಲೀಸ್ ತನಿಖೆಯ ಪ್ರಕಾರ, ಈ ಕೊಲೆಯ ಹಿಂದೆ ಇಸ್ಪೀಟ್ ದಂಧೆಗೆ ಸಂಬಂಧಿಸಿದ ಎರಡು ಗುಂಪುಗಳ ನಡುವಿನ ಕೋಲ್ಡ್ ವಾರ್ ಕಾರಣವಿರಬಹುದೆಂದು ಶಂಕಿಸಲಾಗಿದೆ. ಗಂಗಾವತಿಯಲ್ಲಿ ಇಸ್ಪೀಟ್ ದಂಧೆಯ ವಿಚಾರದಲ್ಲಿ ಗುಂಪುಗಳ ನಡುವೆ ತಿಕ್ಕಾಟ ನಡೆಯುತ್ತಿತ್ತು ಎಂದು ಹೇಳಲಾಗಿದೆ.

ಈ ಸುದ್ದಿಯನ್ನೂ ಓದಿ: Murder Case: ಗಂಗಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಚ್ಚಿ ಕೊಲೆ

ವೆಂಕಟೇಶ್‌ ಕೊಲೆ ಘಟನೆ ಗಂಗಾವತಿ ಪಟ್ಟಣವನ್ನೇ ಬೆಚ್ಚಿಬಿಳಿಸಿದೆ. ಸ್ಥಳೀಯರು ಮತ್ತು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಲೆಯ ಖಚಿತ ಕಾರಣ ಮತ್ತು ಇತರ ಸಂಬಂಧಿತ ವಿವರಗಳಿಗಾಗಿ ತನಿಖೆ ಚುರುಕುಗೊಳಿಸಲಾಗಿದೆ.